ಕಬ್ಬನ್ ಪಾರ್ಕಿನಲ್ಲಿ ವಾರದ ಆರು ದಿನ ವಾಹನ ಸಂಚಾರ

ಬೆಂಗಳೂರು, ಜೂನ್ 9: ಬೆಂಗಳೂರಿಗರ ಬಹುಮೆಚ್ಚಿನ ತಾಣವಾದ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿವಾದಾತ್ಮಕ ನಿರ್ಣಯಕ್ಕೆ ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸ್ ಇಲಾಖೆ ಕೈಹಾಕಿದೆ.

ಜನ-ವಾಹನ ದಟ್ಟಣೆಯ ಬೆಂಗಳೂರಿನಲ್ಲಿ ಶಾಂತವಾಗಿರುವ ಸ್ಥಳಗಳೇ ಕಡಿಮೆ. ಅಂಥಾದ್ದರಲ್ಲಿ ಕಬ್ಬನ್ ಪಾರ್ಕಿನಲ್ಲಿ ವಾರದ ಆರು ದಿನ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವುದು ಪರಿಸರ ಪ್ರೇಮಿಗಳಲ್ಲಿ ಆಕ್ರೋಶ ಹುಟ್ಟಿಸಿದೆ. ಈ ಕುರಿತು ತೋಟಗಾರಿಕೆ ಇಲಾಖೆಯ ಜೊತೆ ಚರ್ಚಿಸದೆ, ಸಂಚಾರ ಪೊಲೀಸ್ ಇಲಾಖೆ ನಿರ್ಧಾರ ತೆಗೆದುಕೊಂಡಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.

[ಕಬ್ಬನ್ ಪಾರ್ಕಿನಲ್ಲಿ ಹೆಚ್ಚಿದ ಮಾಲಿನ್ಯ, ನಾಲ್ಕು ಮಾರ್ಗ ಬಂದ್?]

Cubbon park traffic police permits vehicular movement inside the Cubbon park

ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಕಬ್ಬನ್ ಪಾರ್ಕ್ ಮತ್ತು ಸಸ್ಯಕಾಶಿ ಲಾಲ್ ಬಾಗಿನಲ್ಲಿ ರಾತ್ರಿ ಮನರಂಜನೆಗೆ ಅವಕಾಶ ನೀಡುವ ಬಗ್ಗೆ ಚಿಂತಿಸಿತ್ತು. ಆಗಲೂ ಪರಿಸರ ಪ್ರೇಮಿಗಳು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಆ ಸುದ್ದಿ ತಣ್ಣಗಾಗುವ ಮೊದಲೇ ಕಬ್ಬನ್ ಪಾರ್ಕ್ ಇದೀಗ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ.

[ಕಬ್ಬನ್ ಪಾರ್ಕ್, ಲಾಲ್ ಬಾಗ್ ನಲ್ಲಿ ರಾತ್ರಿ ಮನರಂಜನೆ ಬೇಕಾ?]

ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ ಕಲಂ 3 ರ ಪ್ರಕಾರ ಪೊಲೀಸ್ ಇಲಾಖೆ ವಾಹನ ಪ್ರವೇಶಕ್ಕೆ ಅವಕಾಶ ನೀಡಿದೆ.
ಕಬ್ಬನ್ ಪಾರ್ಕ್ ಸುತ್ತಮುತ್ತಲಿನ ಕ್ವೀನ್ಸ್ ರಸ್ತೆ, ಡಾ.ಅಂಬೇಡ್ಕರ್ ಬೀದಿ, ನೃಪತುಂಗ ರಸ್ತೆ, ಕಬ್ಬನ್ ರಸ್ತೆ, ಕಸ್ತೂರ್ ಬಾ ರಸ್ತೆ, ವಿಠಲ್ ಮಲ್ಯ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ವಿಧಾನಸೌಧಕ್ಕೆ ತೆರಳುವ ವಿಐಪಿಗಳಿಗೂ ಉಪಯೋಗವಾಗಲಿದೆ.

ಕಬ್ಬನ್ ಪಾರ್ಕಿನಲ್ಲಿ ಭಾನುವಾರ ಹೊರತು ಪಡಿಸಿ ಉಳಿದ ಎಲ್ಲಾ ದಿನ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದೇ ಆದರೆ ಇಲ್ಲಿನ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಪರಿಸರ ಪ್ರೇಮಿಗಳಿ ಪ್ರತಿಭಟನೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

[ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧ]

ಇಷ್ಟು ದಿನ ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ ಇಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಇಲ್ಲಿ ಆರೂ ದಿನ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಅಧಿಕಾರ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಇರುವುದರಿಂದ ಇಲಾಖೆಯೇ ಈ ನಿರ್ಧಾರ ಕೈಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+