Cyber Fraud: ಹಿರಿಯ ನಾಗರಿಕರೇ ಟಾರ್ಗೆಟ್: ಪೊಲೀಸರಿಂದ ಫ್ರೀ ಕ್ಲಾಸ್

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಮುಖ್ಯವಾಗಿ ಹಿರಿಯ ನಾಗರಿಕರೇ ಗುರಿಯಾಗುತ್ತಿದ್ದಾರೆ. ಎಟಿಎಂ ಕಾರ್ಡ್ ಅವಧಿ ಮುಕ್ತಾಯವಾಗಿದೆ. ಗಿಫ್ಟ್‌ ಬಂದಿದೆ ಎನ್ನುವುದು ಸೇರಿದಂತೆ ಹಲವು ಕಳ್ಳ ಮಾರ್ಗದಲ್ಲಿ ಸೈಬರ್ ವಂಚಕರು ಜನರನ್ನು ವಂಚಿಸುತ್ತಿದ್ದಾರೆ. ಇದರಲ್ಲಿ ಹೆಚ್ಚು ವಂಚನೆಗೆ ಒಳಗಾಗುತ್ತಿರುವುದು ಹಿರಿಯ ನಾಗರಿಕರೇ. ಈ ವಿಷಯವನ್ನು ಗಮನದಲ್ಲಿ ಇರಿಸಿಕೊಂಡು ಕರ್ನಾಟಕ ಪೊಲೀಸ್‌ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದೆ.

ಹಿರಿಯ ನಾಗರಿಕರಿಗೆ ಫ್ರೀ ಕ್ಲಾಸ್‌!

ಕರ್ನಾಟಕ ಪೊಲೀಸ್‌ ಇಲಾಖೆಯು, ರಾಜ್ಯದಲ್ಲಿ ಹಿರಿಯ ನಾಗರಿಕರು ಸೈಬರ್ ವಂಚನೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಫ್ರೀ ಕ್ಲಾಸ್‌ ನೀಡಲು ಮುಂದಾಗಿದೆ. ಈಗಾಗಲೇ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಹೊಂದಿಕೊಂಡಂತೆ ಇರುವ ಕಮಾಂಡ್‌ ಸೆಂಟರ್‌ ವಿಭಾಗದಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಇದೀಗ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಫ್ರೀ ಕಾನೂನು ಸಲಹೆ ನೀಡಲು ಪೊಲೀಸ್‌ ಇಲಾಖೆ ಮುಂದಾಗಿದೆ.

Cyber Fraud Targeting Senior Citizens Free class from Police

ಹಿರಿಯ ನಾಗರಿಕರಿಗೆ ಕಾನೂನಿಗೆ ಸಂಬಂಧಿಸಿದಂತೆ ಯಾವುದಾದರೂ ಸಮಸ್ಯೆಗಳು ಇದ್ದರೆ, ಪ್ರತಿ ಶನಿವಾರ ಮಧ್ಯಾಹ್ನ 2.30ರಿಂದ 4.30ರ ವರೆಗೆ ನುರಿತ ವಕೀಲರಿಂದ ಉಚಿತ ಕಾನೂನು ಸಲಹೆ ನೀಡಲಾಗುವುದು ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಡಿಜಿಟಲ್‌ ಅರೆಸ್ಟ್‌ ಹಾವಳಿ

ಪೊಲೀಸ್‌ ಹಾಗೂ ಸೈಬರ್ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದರೂ, ಸೈಬರ್ ಅಪರಾಧಗಳ ಸಂಖ್ಯೆ ಇಳಿಕೆಯಾಗುತ್ತಿಲ್ಲ. ಸೈಬರ್ ವಂಚಕರ ಮೋಸಕ್ಕೆ ವಿದ್ಯಾವಂತರೇ ಗುರಿಯಾಗುತ್ತಿದ್ದಾರೆ. ಅದರಲ್ಲಿ ಡಿಜಿಟಲ್‌ ಅರೆಸ್ಟ್‌ ಎನ್ನುವುದು ಸಹ ಒಂದಾಗಿದೆ. ನಿಮ್ಮ ಹೆಸರಿನಲ್ಲಿ ನಕಲಿ ಪಾಸ್‌ ಪೋರ್ಟ್‌ ನಿಷಿದ್ಧ ವಸ್ತುಗಳನ್ನು ಪಾರ್ಸೆಲ್ ಮಾಡಲಾಗುತ್ತಿದೆ. ಈ ಕೂಡಲೇ ನಿಮ್ಮನ್ನು ಡಿಜಿಟಲ್‌ ಅರೆಸ್ಟ್‌ ಮಾಡಲಾಗುವುದು ಎಂದು ಬೆದರಿಸಿ, ವಿಡಿಯೋ ಕಾಲ್‌ ಆನ್‌ ಮಾಡಿಕೊಳ್ಳುವಂತೆ ಹೇಳಿ ಸೈಬರ್ ವಂಚಕರು ಜನರನ್ನು ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ.

Cyber Fraud Targeting Senior Citizens Free class from Police

ಡಿಜಿಟಲ್‌ ಬಂಧನದ ಹೆಸರಿನಲ್ಲಿ ಮಹಿಳೆಯರ ಬೆತ್ತಲೆ ವಿಡಿಯೋ ಮಾಡಿಕೊಂಡು ಬ್ಲಾಕ್‌ ಮೇಲ್‌ ಮಾಡಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ರಾಜ್ಯ ಪೊಲೀಸ್‌ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಇಷ್ಟಾದರೂ ಸೈಬರ್ ವಂಚಕರು ಹೊಸ ಕಳ್ಳ ಮಾರ್ಗದಲ್ಲಿ ಸಾರ್ವಜನಿಕರನ್ನು ವಂಚಿಸುವುದು ವರದಿಯಾಗುತ್ತಲ್ಲೇ ಇದೆ.

ಈಚೆಗೆ ಬೆಂಗಳೂರಿನ ವಕೀಲೆಯೊಬ್ಬರಿಗೆ ಮುಂಬೈ ಸೈಬರ್ ಕ್ರೈಮ್ ನಿಂದ ಪೋನ್‌ ಮಾಡಿರುವುದಾಗಿ ಹೇಳಿಕೊಂಡಿದ್ದ ಸೈಬರ್ ವಂಚಕರು ಆಕೆಯ ಬೆತ್ತಲೆ ವಿಡಿಯೋ ಮಾಡಿಕೊಂಡು ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದರು. ದೇಶದ ಕಾನೂನಿನಲ್ಲಿ ಡಿಜಿಟಲ್‌ ಅರೆಸ್ಟ್‌ ಎನ್ನುವ ಪರಿಕಲ್ಪನೆಯೇ ಇಲ್ಲ. ಹೀಗಾಗಿ, ಈ ರೀತಿಯ ಕರೆಗಳನ್ನು ಸಾರ್ವಜನಿಕರು ನಿರ್ಲಕ್ಷಿಸಬೇಕು ಹಾಗೂ ಪೊಲೀಸ್‌ ಠಾಣೆಗೆ ಬಂದು ದೂರು ದಾಖಲಿಸಬೇಕು ಎಂದು ಪೊಲೀಸರು ಜಗೃತಿ ಮೂಡಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+