ಜು.25 ಕ್ಕೆ 'ಕರ್ನಾಟಕ ದರ್ಶನ ಸೈಕಲ್ ಜಾಥಾ' ಮುಕ್ತಾಯ ಕಾರ್ಯಕ್ರಮ
ಬೆಂಗಳೂರು, ಜುಲೈ 24: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ವತಿಯಿಂದ ಬೀದರ್ ನಿಂದ ಬೆಂಗಳೂರಿನವರೆಗೆ ಜುಲೈ 12 ರಿಂದ ಆರಂಭವಾಗಿರುವ 'ಕರ್ನಾಟಕ ದರ್ಶನ ಸೈಕಲ್ ಜಾಥಾ'ದ ಮುಕ್ತಾಯ ಕಾರ್ಯಕ್ರಮ ಜುಲೈ 25 ರಂದು ನಡೆಯಲಿದೆ.
ಬೆಂಗಳೂರಿನ ವಿಧಾನ ಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದ ಪೂರ್ವದ್ವಾರದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಈ ಸಮಾರಂಭದ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ವಿಶೇಷ ಅತಿಥಿಗಳಾಗಿ ಯುವ ಸಬಲೀಕರಣ, ಮೀನುಗಾರಿಕೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜ್, ಗೃಹ ಸಚಿವರ ಸಲಹೆಗಾರರಾದ ಕೆಂಪಯ್ಯ ಉಪಸ್ಥಿತರಿರಲಿದ್ದಾರೆ.













Click it and Unblock the Notifications