ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಸಾನಿ ಚಂಡಮಾರುತ: ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೇಗಿರಲಿದೆ ವಾತಾವರಣ?

|
Google Oneindia Kannada News

ಬೆಂಗಳೂರು ಮಾರ್ಚ್ 21: ಬಿಸಿಲಿನ ಬೇಗೆಯನ್ನು ತಣಿಸಲಾಗದೆ ಹೈರಾಣಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ವರುಣ ತಂಪೆರೆದಿದ್ದಾನೆ. ಬಿಸಿಲಿನ ಬೇಗೆಯನ್ನು ತಣಿಸಲಾಗದೆ ಹೈರಾಣಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ವರುಣ ತಂಪೆರೆದಿದ್ದಾನೆ. ಬೆಂಗಳೂರಿನಲ್ಲಿ ಇಂದು ಕೆಲವೆಡೆ ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿದೆ. ನಗರದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವೆಡೆ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದ್ದು ಕೆಲವೆಡೆ ಬಲವಾದ ಗಾಳಿ ಬೀಸಲಿದೆ.

ಇನ್ನೂ ಈ ವೇಳೆ ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಪಿಯಸ್ ಇರುವ ಸಾಧ್ಯತೆ ಇದೆ. ಜೊತೆಗೆ 23ನೇ ಮಾರ್ಚ್ ವರೆಗೂ ಮೋಡ ಕವಿದ ವಾತಾವರಣ ಇರಲಿದ್ದು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ. ಇನ್ನೂ ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ 38.6 ಡಿಗ್ರಿ ಸೆಲ್ಪಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 15.3 ಡಿಗ್ರಿ ಸೆಲ್ಪಿಯಸ್ ದಾವಣಗೆರೆಯಲ್ಲಿ ದಾಖಲಾಗಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶ 1.6 ಡಿಗ್ರಿ ಸೆಲ್ಪಿಯಸ್ ಮತ್ತು ಕನಿಷ್ಠ ಉಷ್ಣಾಂಶ 3.0ಡಿಗ್ರಿ ಸೆಲ್ಪಿಯಸ್ ವರೆಗೆ ಇರಲಿದೆ. ಬೆಳಿಗ್ಗೆ ಒಳನಾಡಿನ ಕಡೆಗಳಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

Cyclone Asani Effect: Thundershowers in the Next 24 Hours in Bangalore

ಇನ್ನೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 'ಅಸಾನಿ' ಚಂಡಮಾರುತ ಅಪ್ಪಳಿಸಿದೆ. ಇಂದು ಮಧ್ಯಾಹ್ನದಿಂದ ಅಂಡಮಾನ್‌ನ ಕೆಲವು ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದಿಂದಾಗಿ ಇಂದು 'ಅಸಾನಿ' ಚಂಡಮಾರುತ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದು ಅಪಾಯಕಾರಿ ಚಂಡಮಾರುತವಾಗಿ ಬದಲಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಜನರು ತೀವ್ರ ತೊಂದರೆಗಳನ್ನು ಎದುರಿಸಬೇಕಾಗಬಹುದು. ಅಂಡಮಾನ್‌ ನಲ್ಲಿ ತೀವ್ರ ಮಳೆಯಾಗುತ್ತಿದ್ದು, ಇಲ್ಲಿ ಎಚ್ಚರಿಕೆ ವಹಿಸಲಾಗಿದೆ. ಸೇನೆಯನ್ನು ಅಲರ್ಟ್‌ನಲ್ಲಿ ಇರಿಸಲಾಗಿದೆ ಮತ್ತು ಪೋರ್ಟ್ ಬ್ಲೇರ್‌ನಲ್ಲಿ ಒಟ್ಟು 68 ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ದಿಗ್ಲಿಪುರ್, ರಂಗತ್ ಮತ್ತು ಹತ್ಬೆ ಪ್ರದೇಶಗಳಲ್ಲಿ ತಲಾ 25 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

English summary
Today it has been raining for a while and it has been overcast in Bangalore. The State Meteorological Department forecasts more showers / thunderstorms over the next 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X