ಚಂಡಮಾರುತದ ಎಫೆಕ್ಟ್, ಬೆಂಗಳೂರಿನಲ್ಲಿ ಇಳಿದ ತಾಪಮಾನ
ಬೆಂಗಳೂರು, ಜೂನ್ 11: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಬೆಂಗಳೂರಿನಲ್ಲೂ ಮೋಡದ ವಾತಾವರಣ ನಿರ್ಮಾಣವಾಗಿದ್ದು, ತಾಪಮಾನದಲ್ಲಿ ಬಹಳ ಇಳಿಕೆ ಕಂಡಿದೆ.
ಒಂದೇ ದಿನದಲ್ಲಿ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿದೆ. ಜೂನ್ 13ರವರೆಗೆ ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದ ಕೇಂದ್ರ ಭಾಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 31.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.8 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಿದೆ.

ಸೋಮವಾರ ಮೂಡಬಿದಿರೆ, ಮಂಗಳೂರು, ಕೊಲ್ಲೂರು, ಭಾಗಮಂಡಲ, ವಿರಾಜಪೇಟೆ, ಕಾರ್ಕಳ, ಕಾರವಾರ, ಮಡಿಕೇರಿ, ಕಳಸ, ಕೊಟ್ಟಿಗೆಹಾರ, ಸುಬ್ರಹ್ಮಣ್ಯ, ಗಂಗಾವತಿ, ಬಾಗಲಕೋಟೆ, ಕಲಬುರಗಿಯಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications