ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವರ ಚಿಕ್ಕನಹಳ್ಳಿಯ ಸಿಲಿಂಡರ್‌ ಸ್ಪೋಟ ಪ್ರಕರಣ: ತಾಯಿ, ಮಗಳು ಸಜೀವ ದಹನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 21: ಬೆಂಗಳೂರಿನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಧ್ಯಾಹ್ನ ಸುಮಾರು 3.30 ಗಂಟೆಗೆ ನಡೆದ ಸಿಲಿಂಡರ್‌ ಸ್ಪೋಟದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

Recommended Video

Bangalore: ನೋಡ ನೋಡುತ್ತಿದ್ದಂತೆ ಮಹಿಳೆ ಬೆಂಕಿಗಾಹುತಿ-ಮೊಬೈಲ್ ನಲ್ಲಿ ಸೆರೆಯಾಯ್ತು ಭೀಕರ ದೃಶ್ಯ |Oneindia Kannada

ದುರ್ದೈವಿಗಳು ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಎಂದು ತಿಳಿದು ಬಂದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತಾಯಿ ಮಗಳು ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.

Breaking News: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಮೂವರು ಸಾವುBreaking News: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಮೂವರು ಸಾವು

ಮಂಗಳವಾರ ಮಧ್ಯಾಹ್ನ ಸುಮಾರು 3.30 ಗಂಟೆಗೆ ನಗರದ ಬನ್ನೇರುಘಟ್ಟ ರಸ್ತೆ ಬಳಿಯಿರುವ ದೇವರ ಚಿಕ್ಕನಹಳ್ಳಿಯ ಖಾಸಗಿ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿ ಗ್ಯಾಸ್‌ ಪೈಪ್‌ನಲ್ಲಿ ಗ್ಯಾಸ್‌ ಸೋರಿಕೆಯಾಗಿ ಈ ಸಿಲಿಂಡರ್‌ ಸ್ಪೋಟವಾಗಿದೆ. ಇನ್ನು ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯು ತಿಳಿಸಿದೆ.

Cylinder Blast In Bengaluru Apartment Case: mother and daughter dead

ಇನ್ನು "ರಕ್ಷಣಾ ಕಾರ್ಯಾಚರಣೆಯು ನಡೆಯುತ್ತಿದೆ ಎಂದು ಹೇಳಲಾಗಿದೆ. ಆದರೆ ದಟ್ಟವಾದ ಹೊಗೆ ಆವರಿಸಿರುವ ಕಾರಣದಿಂದಾಗಿ ರಕ್ಷಣಾ ಕಾರ್ಯಾಚರಣೆಯೂ ಕೂಡಾ ತಡವಾಗಿದೆ," ಎಂದು ಘಟನಾ ಸ್ಥಳದಲ್ಲಿ ಇರುವ ಎಡಿಜಿಪಿ ಅಮರ್‌ ಕುಮಾರ್‌ ಪಾಂಡೆ ತಿಳಿಸಿದ್ದಾರೆ.

"ಡೊಮಿಸ್ಟಿಕ್‌ ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಈ ಅವಘಡ ಉಂಟಾಗಿದೆ. ಮಹಿಳೆಯರಿಬ್ಬರು ಸಾವನ್ನಪ್ಪಿರುವುದು ಈಗ ನಡೆಸಿರುವ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ಸಿಬ್ಬಂದಿಗಳ ವಾಹನಗಳು ಧಾವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ," ಎಂದು ಕೂಡಾ ಎಡಿಜಿಪಿ ಅಮರ್‌ ಕುಮಾರ್‌ ಪಾಂಡೆ ಹೇಳಿದ್ದಾರೆ.

ಇನ್ನು ಬೆಂಕಿಯ ತೀವ್ರತೆಗೆ ಫ್ಲ್ಯಾಟ್‌ನಲ್ಲಿದ್ದ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗಿದೆ. ಮಹಿಳೆಯರ ಮೃತ ದೇಹವು ಕೂಡಾ ಬಹುತೇಕ ಸುಟ್ಟು ಹೋಗಿದೆ ಎಂದು ಮಾಹಿತಿ ಲಭಿಸಿದೆ. ಸ್ಥಳಕ್ಕೆ ಬೇಗೂರು ಠಾಣಾ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. 2015 ರಲ್ಲಿ ಈ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ ಎಂಬ ಮಾಹಿತಿಯು ಲಭ್ಯವಾಗಿದೆ. ಇನ್ನು ಈ ನಡುವೆ ಈ ಮೃತರ ಕುಟುಂಬಸ್ಥರು ನಿನ್ನೆಯಷ್ಟೇ ಅಮೆರಿಕದಿಂದ ಬಂದಿದ್ದರು ಎಂದು ಹೇಳಲಾಗಿದೆ. ಇನ್ನು ಸ್ಥಳಕ್ಕೆ ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ತೆರಳಿದ್ದಾರೆ ಎನ್ನಲಾಗಿದೆ. ಅಗ್ನಿ ಅವಘಡವಾದ ಕಾರಣದಿಂದಾಗಿ ಸ್ಪೀಕರ್‌ನ ಅನುಮತಿ ಪಡೆದು ವಿಧಾನಸಭೆಯಿಂದ ತೆರಳಿದ್ದಾರೆ ಎಂದು ವರದಿಯಾಗಿದೆ.

ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ ಉಂಟಾಗಿರುವ ಕಾರಣದಿಂದಾಗಿ ಸದ್ಯಕ್ಕೆ ಅಪಾರ್ಟ್‌ಮೆಂಟ್‌ನ ಇತರ ಜನರಿಗೆ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಆಶ್ರಯ ನೀಡಲಾಗಿದೆ. 60 ಕ್ಕೂ ಅಧಿಕ ನಿವಾಸಿಗಳಿಗೆ ಸಮೀಪದ ಅಪಾರ್ಟ್‌ಮೆಂಟ್‌ನ ಕ್ಲಬ್‌ ಹೌಸ್‌ನಲ್ಲಿ ಆಶ್ರಯ ವ್ಯವಸ್ಥೆ ಮಾಡಲಾಗಿದೆ. ಕ್ಲಬ್‌ ಹೌಸ್‌ನಲ್ಲಿ ಫ್ಯ್ಲಾಟ್‌ನ ನಿವಾಸಿಗಳು ಸಭೆಯನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ.

(ಒನ್‌ ಇಂಡಿಯಾ ಸುದ್ದಿ)

English summary
Fire broke out at an apartment in Devarachikkana Halli, Begur due to gas leakage in pipeline. Mother and Doughter dead in Fire accident,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X