ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ: ಮಗು ಹಾಗೂ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರ!
ಬೆಂಗಳೂರು ಡಿಸೆಂಬರ್ 21: ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಮಗು ಹಾಗೂ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪದ ವಾಜರಹಳ್ಳಿಯಲ್ಲಿ ನಡೆದಿದೆ.
ವಿಜಯಮ್ಮ ಎಂಬುವವರ ಮನೆಯಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆ ನಡೆದ ಕೂಡಲೆ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಿಲಿಂಡರ್ ಸ್ಪೋಟದ ತೀವ್ರತೆಗೆ ಬೆಂಕಿಯ ಕೆನ್ನಾಲಿಗೆ ಮನೆಯ ಹೊರಗೂ ಚಾಚಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸ್ಪೋಟದಿಂದ ಫ್ರಿಡ್ಜ್ ಸೇರಿ ಮನೆಯಲ್ಲಿದ್ದ ಹಲವು ವಸ್ತುಗಳು ಪುಡಿಯಾಗಿದ್ದು ಚೆನ್ನಾಪಿಲ್ಲಿಯಾಗಿ ಬಿದ್ದಿವೆ. ಮಾತ್ರವಲ್ಲದೆ ಮನೆ ಪೂರ್ತಿ ಬಿರುಕುಗೊಂಡಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಸ್ಪೋಟಕ್ಕೆ ಕಾರಣವನ್ನು ಪತ್ತೆ ಹಚ್ಚುತ್ತಿದ್ದಾರೆ.












Click it and Unblock the Notifications