ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ 8 ಮನೆಗಳು ಭಸ್ಮ
ಬೆಂಗಳೂರು, ಸೆಪ್ಟೆಂಬರ್, 18: ಸಿಲಿಂಡರ್ ಸ್ಫೋಟಗೊಂಡು 8 ಮನೆಗಳು ಭಸ್ಮವಾಗಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಅನಂತಪುರದ ಬಳಿ ನಡೆದಿದೆ. ಇನ್ನು ಈ ವೇಳೆ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸಿಲಿಂಡರ್ ಸ್ಪೋಟದ ತೀವ್ರತೆಗೆ 8 ಶೀಟ್ ಮನೆಗಳು ಭಸ್ಮವಾಗಿದ್ದು, ಈ ವೇಳೆ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಸ್ಥಳೀಯರ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನದಿಸುವ ಕಾರ್ಯವನ್ನು ಮಾಡಿದ್ದಾರೆ.

ಬೆಂಗಳೂರಿನ ವಿನಾಯಕ ಸಿನೆಮಾ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದ್ದು, ಚಾಮರಾಜಪೇಟೆ ಆನಂದಪುರ ಬಳಿ 8 ಮನೆಗಳ ಶೀಟ್‌ಗಳು ಬೆಂಕಿಯಲ್ಲಿ ಭಸ್ಮವಾಗಿವೆ. ಈ ಅವಘಡದಲ್ಲಿ ಗೋಧಾಮು ಸೇರಿದಂತೆ ಪಕ್ಕದಲ್ಲಿರುವ 8 ಮನೆಗಳಿಗೂ ಬೆಂಕಿ ತಗುಲಿದ್ದು, ಈ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಕನ್ನಡ ನ್ಯೂಸ್ ವರದಿ ಮಾಡಿದೆ.
ವಿನಾಯಕ ಸಿನಿಮಾ ಥಿಯೇಟರ್ ಎದುರುಗಡೆ ಇರುವ ಗೋದಾಮಿಗೆ ಬೆಂಕಿ ತಲುಗಿದ ಹಿನ್ನೆಲೆ ಸಿಲಿಂಡರ್‌ಗಳು ಬ್ಲಾಸ್ಟ್ ಆಗಿರಬಹುದು ಎಂದು ಶಂಕಿಸಲಾಗುತ್ತಿದೆ. ಅಲ್ಲದೆ ಮನೆಯ ಅಲಂಕಾರಿಕ ವಸ್ತುಗಳ ಗೋದಾಮಿಗೆ ಬೆಂಕಿ ತಗುಲಿದ್ದು, ಬೆಂಕಿ ತಗಲುತ್ತಿದ್ದಂತೆ ಅದರ ಪಕ್ಕದಲ್ಲಿರುವ ಸುಮಾರು 8 ಶೀಟ್ ಮನೆಗಳಿಗೂ ಬೆಂಕಿ ಆವರಿಸಿದೆ ಎನ್ನಲಾಗಿದ್ದು, ಘಟನೆಗೆ ಪ್ರಮುಖವಾದ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಿದೆ.












Click it and Unblock the Notifications