ಇ ಖಾತಾ ಮತ್ತು ಬಿ ಖಾತಾ ಬಗ್ಗೆ ಗುಡ್‌ನ್ಯೂಸ್‌ ಕೊಟ್ಟ ಡಿ.ಕೆ ಶಿವಕುಮಾರ್‌, ಪ್ರಮುಖ ಮೇಲ್ಸೇತುವೆ ಆ.15 ಒಳಗೆ ಉದ್ಘಾಟನೆ!

E Khata and B Khata: ಬೆಂಗಳೂರಿನ ಆಸ್ತಿದಾರರಿಗೆ ಇ - ಖಾತಾ ನೀಡುವ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಅವರು ಗುಡ್‌ನ್ಯೂಸ್ ನೀಡಿದ್ದಾರೆ. ಅಕ್ಟೋಬರ್ 22 ರಿಂದ ಬೃಹತ್ ಇ ಖಾತಾ ಜಾಗೃತಿ ಅಭಿಯಾನ ನಡೆಸುವುದಾಗಿ ಅವರು ಹೇಳಿದ್ದಾರೆ. ಬೆಂಗಳೂರಲ್ಲಿ 24 ಲಕ್ಷ 'ಎ' ಮತ್ತು 'ಬಿ' ಖಾತೆಗಳಿವೆ. ಈಗಾಗಲೇ 6.5 ಲಕ್ಷ‌ ಇ- ಖಾತೆಗಳನ್ನು ಜನರು ತೆಗೆದುಕೊಂಡಿದ್ದಾರೆ.‌ ಜನರಿಗೆ ಆನ್‌ಲೈನ್‌ನಲ್ಲಿ ಆಸ್ತಿ ವಿವರಗಳು ನಿಖರವಾಗಿ ದೊರೆಯಬೇಕು. ಮುಂದಿನ‌ ದಿನಗಳಲ್ಲಿ ತೊಂದರೆಯಾಗಬಾರದು ಎಂಬುದು ನಮ್ಮ ಆಲೋಚನೆ. ಈ ಕಾರಣಕ್ಕೆ ಅಕ್ಟೋಬರ್ 22 ರಿಂದ ನವೆಂಬರ್ 1 ರವರೆಗೆ ಬೃಹತ್ ಜಾಗೃತಿ ಅಭಿಯಾನದ ಆಲೋಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಅಭಿಯಾನ ಯಶಸ್ವಿಗೊಳಿಸಲು ಶಿಕ್ಷಕರು, ಬೆಸ್ಕಾಂ ಬಿಲ್‌ ಕಲೆಕ್ಟರ್ ಗಳು, ಪಾಲಿಕೆಯ ನೌಕರರ ಭಾಗವಹಿಸುವಿಕೆ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದೇನೆ. ಈ ಬಗ್ಗೆ ಮನೆ ಮನೆಗೆ ತೆರಳಿ ತಿಳುವಳಿಕೆ ನೀಡಲಾಗುವುದು.‌ ಸಾರ್ವಜನಿಕರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಈ ಅಭಿಯಾನದ ಪ್ರಚಾರದಲ್ಲಿ ಭಾಗವಹಿಸಬಹುದು. ಆದರೆ ಇವರಿಗೆ ಜವಾಬ್ದಾರಿ ನೀಡುವುದಿಲ್ಲ ಎಂದರು.

D K Shivakumar gave good news about E Khata and B Khata major flyover to be inaugurated by August 15

ಬಿ ಖಾತಾದಾರರಿಗೆ ಗುಡ್‌ನ್ಯೂಸ್‌: ಇನ್ನು ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಬಿ ಖಾತಾ ಆಸ್ತಿದಾರರಿಗೂ ಗುಡ್‌ನ್ಯೂಸ್ ನೀಡಿದ್ದಾರೆ. ಬಿ ಖಾತಾಗೆ ಎ - ಖಾತಾ ನೀಡುವ ಬಗ್ಗೆ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ನೀಡಿದ್ದಾರೆ. ಬಿ ಖಾತಾವನ್ನು ಹೊಂದಿರುವ ಆಸ್ತಿದಾರರಿಗೆ ಎ - ಖಾತಾ ಸೌಲಭ್ಯ ಸಿಗದೆ ಪರದಾಡುತ್ತಿದ್ದರು. ಇದೀಗ ಈ ಆಸ್ತಿದಾರರಿಗೂ ಸಿಹಿಸುದ್ದಿ ನೀಡಲಾಗಿದೆ. ಆಗಸ್ಟ್ 15 ರಿಂದ ಬಿ ಖಾತೆಯಿಂದ ಎ ಖಾತೆ ಪಡೆಯಲು ಅನುಸರಿಸಬೇಕಾದ ಮಾನದಂಡಗಳನ್ನು ಬಿಡುಗಡೆ ಮಾಡಲಾಗುವುದು. ಯಾರಿಗೆ ಅರ್ಜಿ ಹಾಕಲು ಅರ್ಹತೆಯಿದೆ, ಯಾವ ರೀತಿ ಅರ್ಜಿ ಹಾಕಬೇಕು ಎನ್ನುವ ವಿವರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಆಗಸ್ಟ್ 15 ರೊಳಗೆ ಹೆಬ್ಬಾಳ ಜಂಕ್ಷನ್ ಉದ್ಘಾಟನೆ: ಇನ್ನು ಬೆಂಗಳೂರಿನ ಹೆಬ್ಬಾಳ ಮೇಲ್ಸೆತುವೆ ಜಂಕ್ಷನ್, ಶಿವಾನಂದ ಸರ್ಕಲ್ ಜಂಕ್ಷನ್ ಅಭಿವೃದ್ಧಿ ಹಾಗೂ ಗಾಂಧಿ ಬಜಾರ್ ಬಳಿಯ ಬಹುಮಹಡಿ ಪಾರ್ಕಿಂಗ್ ಕಟ್ಟಡವನ್ನು ಆಗಸ್ಟ್‌ 15ರ ಒಳಗಾಗಿ ಉದ್ಘಾಟನೆ ಮಾಡಬೇಕು ಎಂಬುದು ನಮ್ಮ ಆಲೋಚನೆ. ಕೆ.ಆರ್.ಪುರಂ ಕಡೆಯಿಂದ ಬರುವ ಹೆಬ್ಬಾಳ ಮೇಲ್ಸೆತುವೆ ಕಾಮಗಾರಿಯನ್ನು ಶೀಘ್ರದಲ್ಲೇ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂಬುದು ನಮ್ಮ ಆಲೋಚನೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+