Karnataka Property: ಖಾತೆ & ಭೂಮಿ ಗ್ಯಾರಂಟಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್
Karnataka Property: ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸಚಿವರಾದ ಕೆ.ಎಚ್.ಮುನಿಯಪ್ಪ ಅವರು, ಸುಧಾಕರ್ ಅವರು ಹಾಗೂ ಕೃಷ್ಣಬೈರೇಗೌಡರು ನನ್ನ ಬೆನ್ನತ್ತಿದ್ದಾರೆ. 2027 ರ ಹೊತ್ತಿಗೆ ಎರಡು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಪರ್ಯಾಯವಾಗಿ ಕಂದಾಯ ಭೂಮಿ ನೀಡಿದ್ದರೂ ಕೇಂದ್ರ ಪರಿಸರ ಇಲಾಖೆ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡುತ್ತಿಲ್ಲ ಎಂದು ದೂರಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್ ಗೂಡಿನ ಮಾರುಕಟ್ಟೆ, ಹೆಚ್.ಎನ್ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.
ಕೆ. ಸಿ. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 143 ಕೆರೆ ತುಂಬಿಸಲಾಗಿದೆ. 2ನೇ ಹಂತದಲ್ಲಿ 272 ಕೆರೆ ಭರ್ತಿ ಮಾಡುತ್ತಿದ್ದೇವೆ. ಈ ಯೋಜನೆಯನ್ನು ವಿಶ್ವಬ್ಯಾಂಕ್ ಕೂಡ ಹೊಗಳಿದೆ. ಹೆಚ್. ಎನ್. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 65 ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಬೆಂಗಳೂರಲ್ಲಿ ಕೆರೆಗಳ ಇಂಟರ್‌ಲಿಂಕ್ ಮಾಡೋಕೆ ಅಂತ 1700 ಕೋಟಿ ರೂಪಾಯಿ ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೆಲಮಂಗಲದಲ್ಲಿ ವೃಷಭಾವತಿಯಿಂದ 70 ಕೆರೆ ತುಂಬಿಸಲಾಗುತ್ತಿದೆ.
ಕೆರೆಗಳನ್ನು ತುಂಬಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ವ್ಯವಸಾಯಕ್ಕೆ ಹಾಗೂ ಕುಡಿಯುವುದಕ್ಕೆ ನೀರನ್ನು ನೀಡುವುದೇ ನಮ್ಮ ಉದ್ದೇಶ. ಏಳನೇ ಗ್ಯಾರಂಟಿಯಾಗಿ 1,11,11,111 ಜನರಿಗೆ ಖಾತೆಗಳನ್ನು ನೀಡಿ ಭೂಮಿ ಗ್ಯಾರಂಟಿ ನೀಡಿದ್ದೇವೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದ ಜನತೆ ಬಗ್ಗೆ ನನಗೆ ಅಪಾರ ಗೌರವ. ಏಕೆಂದರೆ ನೀವು ಶ್ರಮ ಜೀವಿಗಳು, ನೀರಿನ ಬೆಲೆ ಅರಿತಿರುವವರು. ತರಕಾರಿ, ಹೂ, ಹಣ್ಣು ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ರಾಜ್ಯಕ್ಕೆ ನೀಡುತ್ತಿರುವವರು. ಅಶುದ್ಧ ನೀರನ್ನು ಶುದ್ಧೀಕರಣಗೊಳಿಸಿ ಅದನ್ನು ನಿಮ್ಮ ಕೆರೆಗಳಿಗೆ ಹರಿಸುವ ಕೆಲಸ ಮಾಡಲಾಗುತ್ತಿದೆ. ಇಡೀ ದೇಶವೇ ಈ ಯೋಜನೆಯನ್ನು ಹೊಗಳುತ್ತಿದೆ ಎಂದು ಹೇಳಿದ್ದಾರೆ.
ಶಿಡ್ಲಘಟ್ಟದ ನೀರು ಅತ್ಯುತ್ತಮವಾದುದು, ರೇಷ್ಮೆ ನೂಲು ಉತ್ತಮವಾಗಿ ಬರುತ್ತದೆ ಎಂದು ಇಲ್ಲಿಂದ ಟ್ಯಾಂಕರ್‌ನಲ್ಲಿ ನೀರು ತಂದು ನಮ್ಮ ಊರಿನಲ್ಲಿ ನೂಲು ತೆಗೆಯಲಾಗುತ್ತದೆ. ಚೈನಾದಿಂದ ರೇಷ್ಮೆ ಆಮದು ಕಡಿಮೆಯಾದ ಕಾರಣಕ್ಕೆ ನಮ್ಮ ರೇಷ್ಮೆಗೆ ಅತ್ಯುತ್ತಮ ಬೆಲೆ ಬಂದಿದೆ. ದೇವರು ನಮಗೆ ಕೊಟ್ಟಿರುವುದು ಎರಡು, ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು, ಹಾಗೆಯೇ ಏನೇನು ಕೊಡಬೇಕೋ ಅದನ್ನು ಕೊಟ್ಟು ಹೋಗುತ್ತಿದ್ದೇವೆ, ಈ ಕ್ಷೇತ್ರಕ್ಕೆ ಏನೇನು ಬೇಕೋ ಅದನ್ನು ಬಿಟ್ಟು ಹೋಗುತ್ತಿದ್ದೇವೆ. ನಿಮ್ಮ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಈಚೆಗೆ ಏಳನೇ ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದ್ದಾರೆ.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications