ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಅಪ್ಡೇಟ್ಸ್ ಕೊಟ್ಟ ಡಿ.ಕೆ ಶಿವಕುಮಾರ್: ಈ ಭಾಗದ ಭೂಮಿಗೆ ಚಿನ್ನದ ಬೆಲೆ ನಿರೀಕ್ಷೆ!
Bengaluru Pink Line Metro: ಬೆಂಗಳೂರಿನ ಪಿಂಕ್‌ಲೈನ್ ಮೆಟ್ರೋ ಯೋಜನೆ ಉದ್ಘಾಟನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಅಲ್ಲದೇ ಬೆಂಗಳೂರಿನ ಪಿಂಕ್‌ಲೈನ್ ಮಾರ್ಗದಲ್ಲೂ ಭೂಮಿ ಬೆಲೆ ಭರ್ಜರಿ ಹೆಚ್ಚಳವಾಗುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ ಬರುವ ಸಾಧ್ಯತೆ ಇದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ನಮ್ಮ ಮೆಟ್ರೋ ಯೋಜನೆಯ ಮತ್ತೊಂದು ಮಾರ್ಗಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ನಮ್ಮ ಮೆಟ್ರೋದ ಪಿಂಕ್ ಲೈನ್ ಮೇ 2026 ರ ವೇಳೆಗೆ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಘೋಷಿಸಿದ್ದಾರೆ. ಕಲೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಪಿಂಕ್ ಲೈನ್ 13.76 ಕಿ.ಮೀ ಉದ್ದವಾಗಿದ್ದು, ಇದು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಉತ್ತರ-ದಕ್ಷಿಣ ಸಂಪರ್ಕವನ್ನು ಬಲಪಡಿಸುತ್ತದೆ ಎಂದು ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ! ಕಲೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಪಿಂಕ್ ಲೈನ್ ಮೇ 2026 ರ ವೇಳೆಗೆ ಕಾರ್ಯಾರಂಭ ಮಾಡಲಿದೆ ಎಂದು ಶಿವಕುಮಾರ್ ಹೇಳಿದ್ದಾರೆ. ಈಗ ನಮ್ಮ ಮೆಟ್ರೋದ ಪರ್ಪಲ್ ಲೈನ್, ಗ್ರೀನ್ ಲೈನ್ ಮತ್ತು ಯೆಲ್ಲೋ ಲೈನ್‌ಗಳು ಕಾರ್ಯನಿರ್ವಹಿಸುತ್ತಿವೆ. ಈ ವರ್ಷ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಿದ್ದರು.
ನಮ್ಮ ಮೆಟ್ರೋದ ಪಿಂಕ್ ಲೈನ್ ಭಾರತದ ಅತ್ಯಂತ ಆಳವಾದ ಸುರಂಗ ಮಾರ್ಗವಾಗಿದ್ದು, 21.25 ಕಿ.ಮೀ ಉದ್ದದ ಈ ಕಾರಿಡಾರ್ ಬೆಂಗಳೂರಿನ (II ನೇ ಹಂತ) ಅತ್ಯಂತ ಮಹತ್ವಾಕಾಂಕ್ಷೆಯ BMRCL ಯೋಜನೆ ಆಗಿದೆ. ಬೆಂಗಳೂರು ಉತ್ತರ-ದಕ್ಷಿಣ ಸಂಪರ್ಕ, ಸಂಚಾರ ದಟ್ಟಣೆ ಕಡಿಮೆ ಮಾಡುವುದು ಸೇರಿದಂತೆ ಹಲವು ಉದ್ದೇಶಗಳನ್ನು ಒಳಗೊಂಡಿದೆ. ಇನ್ನು 3ರಿಂದ 4 ಲಕ್ಷ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. 2026 ರ ಅಂತ್ಯದ ವೇಳೆಗೆ ಪಿಂಕ್ ಲೈನ್ ಅನ್ನು ಹಂತ ಹಂತವಾಗಿ ಮುಕ್ತಾಯ ಮಾಡುವ ನಿರೀಕ್ಷೆ ಇದೆ.
ಬೆಂಗಳೂರಿನ ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳ ನಿರೀಕ್ಷೆ: ಇನ್ನು ಬೆಂಗಳೂರು ನಮ್ಮ ಮೆಟ್ರೋ ಪಿಂಕ್ ಲೈನ್ ಯೋಜನೆಯಿಂದಾಗಿ ಕಲೇನ ಅಗ್ರಹಾರದಿಂದ ತಾವರೆಕೆರೆಯವರೆಗಿನ 7.5-ಕಿಲೋಮೀಟರ್ ಎತ್ತರದ ಮಾರ್ಗವನ್ನು ಒಳಗೊಂಡಿದೆ. ಡೈರಿ ಸರ್ಕಲ್‌ನಿಂದ ನಾಗವಾರವರೆಗಿನ 13.8-ಕಿಲೋಮೀಟರ್ ಸುರಂಗ ಮಾರ್ಗವನ್ನು ಒಳಗೊಂಡಿದೆ.
ಪ್ರಮುಖ ಪ್ರದೇಶಗಳು: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬರುವ ನಿರೀಕ್ಷೆ ಮೂಡಿದೆ. ಅದರಲ್ಲಿ ಕಲೇನ ಅಗ್ರಹಾರ, ಜೆಪಿ ನಗರ, ಡೈರಿ ವೃತ್ತ, ಎಂಜಿ ರಸ್ತೆ, ಶಿವಾಜಿನಗರ, ಬೆಂಗಳೂರು ಕಂಟೋನ್ಮೆಂಟ್, ಟ್ಯಾನರಿ ರಸ್ತೆ ಮತ್ತು ನಾಗವಾರ ಸೇರಿದಂತೆ ಹಲವು ಪ್ರದೇಶಗಳಿಗೆ ಈ ಮೆಟ್ರೋ ಲೈನ್ ಸಂಪರ್ಕ ಕಲ್ಪಿಸುತ್ತದೆ. ಇದರಿಂದ ವಿವಿಧ ಭಾಗದಲ್ಲಿ ಈಗಾಗಲೇ ಭೂಮಿಗೆ ಬಂಗಾರದ ಬೆಲೆ ಬರುವ ನಿರೀಕ್ಷೆ ಮೂಡಿದೆ.












Click it and Unblock the Notifications