ಬಿಬಿಎಂಪಿ ಚುನಾವಣೆಯಲ್ಲಿ ಈ ಬದಲಾವಣೆ ಎಂದ ಡಿ.ಕೆ ಶಿವಕುಮಾರ್‌!

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಬಿಗ್‌ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯು ಬರೋಬ್ಬರಿ ಐದು ವರ್ಷಗಳಿಂದ ನಡೆದಿಲ್ಲ. ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆ ನಡೆಯದೆ ಇರುವುದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಪಾಲಿಕೆಯ ಕೌನ್ಸಿಲ್‌ ಹಾಗೂ ಮೇಯರ್ ಮತ್ತು ಉಪ ಮೇಯರ್ ಇಲ್ಲದೆ ಸ್ಥಳೀಯ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಈ ರೀತಿ ಇರುವಾಗಲೇ ಡಿ.ಕೆ ಶಿವಕುಮಾರ್‌ ಅವರು ಬಿಗ್‌ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ.

ರಾಜ್ಯ ಸರ್ಕಾರವು ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಕೊನೆಗೂ ಮನಸ್ಸು ಮಾಡಿರುವಂತೆ ಇದೆ. ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆಯನ್ನು ನಡೆಸುವುದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷಗಳು ಮನಸ್ಸು ಮಾಡಿಲ್ಲ. ಒಂದಿಲ್ಲೊಂದು ಕಾರಣಗಳನ್ನು ನೀಡಿ ಬಿಬಿಎಂಪಿಯ ಚುನಾವಣೆಯನ್ನು ಮುಂದೂಡುತ್ತಲ್ಲೇ ಇವೆ. ಇನ್ನು ಮುಂದಿನ ವಾರದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಸಹ ನಡೆಯಲಿದೆ.

D K Shivakumar on Reservation for Women in BBMP Elections

ಈ ಬೆಳವಣಿಗೆಗಳ ನಡುವೆಯೇ ಡಿ.ಕೆ ಶಿವಕುಮಾರ್‌ ಅವರು ಸ್ಥಳೀಯ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಯ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದಾರೆ. ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಈಚೆಗೆ ಡಿ.ಕೆ ಶಿವಕುಮಾರ್‌ ಅವರು ಮಾತನಾಡಿದ್ದರು. ಇದೀಗ ಮತ್ತೊಂದು ಅಪ್ಡೇಟ್‌ ಕೊಟ್ಟಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಡಿ.ಕೆ ಶಿವಕುಮಾರ್‌ ಅವರು ಮಾತನಾಡಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲಾಗುವುದು. ಮಹಿಳಾ ನಾಯಕತ್ವ ಹೆಚ್ಚಾಗಿ ಬೆಳೆಸಬೇಕು. ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಲ್ಲರೂ ಸಜ್ಜಾಗಬೇಕು ಎಂದು ಅವರು ಪುನರುಚ್ಚರಿಸಿದ್ದಾರೆ.

ಬಿಜೆಪಿ ಮಾದರಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು ಬಿಜೆಪಿ ಮಾದರಿಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಅಥವಾ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಈಚೆಗೆ ಬಿಜೆಪಿಯು ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾಗುಪ್ತಾ ಅವರನ್ನು ಆಯ್ಕೆ ಮಾಡಿದೆ. ಅಲ್ಲದೆ ಮಹಿಳೆಯರಿಗೆ ಹೆಚ್ಚು ಪ್ರಾಮುಖ್ಯತೆ ಕೊಡುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಹ ಇದೇ ಮಾದರಿಯನ್ನು ಅನುಸರಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಎಷ್ಟು ವಾರ್ಡ್‌ಗಳಿಗೆ ಚುನಾವಣೆ: ಇನ್ನು ಬೆಂಗಳೂರಿನಲ್ಲಿ ಎಷ್ಟು ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎನ್ನುವುದೇ ಈಗ ಇರುವ ಪ್ರಶ್ನೆಯಾಗಿದೆ. ಈ ಹಿಂದೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 198 ವಾರ್ಡ್‌ಗಳು ಇದ್ದವು. ಇದನ್ನು 224ಕ್ಕೆ ಹೆಚ್ಚಳ ಮಾಡುವ ಪ್ರಸ್ತಾವನೆ ಇದೆ. ಆದರೆ ಈ ಬಗ್ಗೆ ಗೊಂದಲ ಮೂಡಿದೆ. ಹೀಗಾಗಿ ಎಷ್ಟು ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎನ್ನುವುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+