ಬೆಂಗಳೂರಿಗೆ ಹೊಸ ಪ್ರದೇಶ & ಆಸ್ತಿ ತೆರಿಗೆ ಮಹತ್ವದ ಅಪ್ಡೇಟ್ಸ್‌ ಕೊಟ್ಟ ಡಿ.ಕೆ ಶಿವಕುಮಾರ್, ಆಸ್ತಿದಾರರಿಗೆ ಬಂಪರ್!

ಬೆಂಗಳೂರಿನ ಇತಿಹಾಸದಲ್ಲಿ ಮಹತ್ವದ ಬದಲಾವಣೆ ಆಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾಗಿ, ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಿದೆ. ಈ ರೀತಿ ಇರುವಾಗಲೇ ಬೆಂಗಳೂರಿನ ಆಸ್ತಿದಾರರಿಗೆ ಆಸ್ತಿ ತೆರಿಗೆ ಹಾಗೂ ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆ ಆಗುವ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಅಪ್ಡೇಟ್ಸ್‌ ಕೊಟ್ಟಿದ್ದಾರೆ.

ಸೆಪ್ಟೆಂಬರ್ 03ರಿಂದ ಬೆಂಗಳೂರಿನ ಐದು ಹೊಸ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಯಾ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತೆರಿಗೆ ಹಣ ಆಯಾ ಪಾಲಿಕೆಗೆ ಸೇರಲಿದೆ. ಈ ತೆರಿಗೆ ಹಣ ಜಿಬಿಎಗಾಗಲಿ ಅಥವಾ ರಾಜ್ಯ ಸರ್ಕಾರಕ್ಕಾಗಲಿ ಬರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗುವುದಿಲ್ಲ. ಪಾಲಿಕೆಗಳಿಗೆ ಸ್ವಾಯತ್ತತೆ ನೀಡಲಾಗಿದೆ. ಮುಂದೆ ಜಿಬಿಎ ಮೂಲಕ ದೊಡ್ಡ ದೊಡ್ಡ ಯೋಜನೆಗಳ ಜಾರಿ, ಉತ್ತಮ ಆಡಳಿತ, ಸೇವೆಗೆ ಮೀಸಲಾಗಿರಲಿದೆ.

D K Shivakumar s Big Update on Area and Property Tax Good News for Bengaluru Owners

ಸರ್ಕಾರದಿಂದ ಬಂದ ಹಣ ಜಿಬಿಎ ಹಾಗೂ ಪಾಲಿಕೆಗಳಿಗೆ ಹೋಗಲಿದೆ. ಇನ್ನು ಮುಂದಿನ ದಿನಗಳಲ್ಲಿ ಕಾನೂನು ಚೌಕಟ್ಟಿನಲ್ಲಿ ಚುನಾವಣೆ ನಡೆಯಲಿದೆ. ಸದ್ಯ ನಗರದ ಜನಸಂಖ್ಯೆ 1.44 ಕೋಟಿ ಎಂದು ಅಂದಾಜಿಸಲಾಗಿದೆ. 2011ರ ಜನಗಣತಿ ಪ್ರಕಾರ ವಾರ್ಡ್ ನಲ್ಲಿ 20 ಸಾವಿರ ಜನಸಂಖ್ಯೆ ಇತ್ತು. ಈಗ 35-40 ಸಾವಿರ ಸರಾಸರಿಯಲ್ಲಿ ವಾರ್ಡ್ ರಚನೆ ಮಾಡಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪೂರ್ವ, ಪಶ್ಚಿಮ, ಉತ್ತರ ದಕ್ಷಿಣ ಪಾಲಿಕೆಗಳಿಗೆ ಹೊಸ ಪ್ರದೇಶಗಳು ಸೇರ್ಪಡೆಯಾಗಲು ಅವಕಾಶ ಕಲ್ಪಿಸಿದ್ದೇವೆ. ಕಾನೂನಿಗೆ ತೊಡಕಾಗಬಾರದು ಎಂಬ ಉದ್ದೇಶದಿಂದ ಆ ಬಗ್ಗೆ ಚರ್ಚೆ ಮಾಡುವುದಿಲ್ಲ. ಆಯಾ ಪಾಲಿಕೆಗಳು ಸರ್ಕಾರವನ್ನು ವಿಶ್ವಾಸಕ್ಕೆ ಪಡೆದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಗಳನ್ನು ಮಾಡಿಕೊಳ್ಳಲಿವೆ. ಈಗ ಹಾಲಿ ಇದ್ದ ಪಾಲಿಕೆ ವ್ಯಾಪ್ತಿಗೆ ಜಿಬಿಎ ರಚಿಸಿ, ಐದು ಪಾಲಿಕೆ ಮಾಡಿದ್ದೇವೆ. ಇದನ್ನು ಜಾರಿಗೆ ತರಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಆನೇಕಲ್ ಕ್ಷೇತ್ರಕ್ಕೆ ಸೇರಿದ್ದ ಒಂದು ವಾರ್ಡ್ ಬಿಟ್ಟುಹೋಗಿತ್ತು. ಈಗ ಅದನ್ನು ಸರಿಪಡಿಸಿದ್ದೇವೆ ಎಂದು ಹೇಳಿದ್ದಾರೆ.

ಆಸ್ತಿ ತೆರಿಗೆ ತಾರತಮ್ಯ: ಇನ್ನು ಬೆಂಗಳೂರಿನಲ್ಲಿ 5 ಹೊಸ ಪಾಲಿಕೆಗಳ ರಚನೆ ಬೆನ್ನಲ್ಲೇ ಐದು ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ ವ್ಯತ್ಯಾಸವಿರುವ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ ಈ ಬಗ್ಗೆ ಸರ್ಕಾರದಿಂದ ಇಲ್ಲಿಯ ವರೆಗೆ ಯಾವುದೇ ನಿರ್ದಿಷ್ಟ ಸ್ಪಷ್ಟನೆ ಬಂದಿಲ್ಲ. ಬೆಂಗಳೂರು ಅಭಿವೃದ್ಧಿ ಹಾಗೂ ಆಡಳಿತ ವಿಕೇಂದ್ರೀಕರಣದ ಉದ್ದೇಶದಿಂದ ಐದು ಪಾಲಿಕೆಗಳನ್ನು ರಚನೆ ಮಾಡಿರುವುದಾಗಿ ರಾಜ್ಯ ಸರ್ಕಾರವು ಹೇಳಿದೆ. ಆದರೆ ಮುಂದಿನ ದಿನಗಳಲ್ಲಿ ಇದು ಯಾವ ರೀತಿ ಸುಗಮ ಆಡಳಿತ ನೀಡಲಿದೆ ಎನ್ನುವುದು ನಾಳೆಯಿಂದ ತಿಳಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+