ಶಂಕರ್‌ನಾಗ್ ಬಗ್ಗೆ ಡಿಕೆಶಿ ಟ್ವೀಟ್: ಒಂದು ಮೆಟ್ರೋ ನಿಲ್ದಾಣಕ್ಕೆ ಹೆಸರು ಇರಿಸಿಲ್ಲ: ಈ ಟ್ವೀಟ್ ಬೇಕಾ ಎಂದ ನೆಟ್ಟಿಗರು!
ನಟ ದಿ. ಶಂಕರ್ ನಾಗ್ ಅವರ ಪುಣ್ಯಸ್ಮರಣೆಯ ಭಾಗವಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು. ಇದೀಗ ಡಿ.ಕೆ ಶಿವಕುಮಾರ್ ಅವರ ಟ್ವೀಟ್‌ಗೆ ಕನ್ನಡಿಗರು ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಬೆಂಗಳೂರು ಮೆಟ್ರೋ ಶಂಕರ್‌ನಾಗ್ ಅವರ ಕನಸಿನ ಕೂಸು. ಆದರೆ, ಬೆಂಗಳೂರಿನ ಒಂದು ಮೆಟ್ರೋ ನಿಲ್ದಾಣಕ್ಕೆ ನಟ ಶಂಕರ್‌ನಾಗ್ ಅವರ ಹೆಸರನ್ನು ನಾಮಕಾರಣ ಮಾಡಿ ಗೌರವ ಸೂಚಿಸುವ ಕೆಲಸವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ ಎಂದು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೂ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದೇನು, ಜನ ಇದಕ್ಕೆ ಯಾವ ರೀತಿ ರಿಯಾಕ್ಟ್ ಮಾಡಿದ್ದಾರೆ ಎನ್ನುವ ವಿವರ ಇಲ್ಲಿದೆ.
ಇಂದು (ಸೆಪ್ಟೆಂಬರ್ 30) ನಟ ಶಂಕರ್‌ನಾಗ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರು, ನಟ ಶಂಕರ್ ನಾಗ್ ಅವರ ಬಗ್ಗೆ ಟ್ವೀಟ್ ಮಾಡಿದ್ದಾರೆ. ತಮ್ಮ ಅದ್ಭುತ ಅಭಿನಯ ಮತ್ತು ನಿರ್ದೇಶನದ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದ ಕನ್ನಡದ ಶ್ರೇಷ್ಠ ನಟ ಶಂಕರ್ ನಾಗ್ ಅವರು ಇಂದಿಗೂ ಅಜರಾಮರ. 'ಆಟೋರಾಜ' ಎಂದೇ ಜನಪ್ರಿಯರಾಗಿದ್ದ ಶಂಕರ್ ನಾಗ್ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು. 1990ರಲ್ಲೇ ಲಂಡನ್ ಮೆಟ್ರೋ ಮಾದರಿಯಲ್ಲಿ ಬೆಂಗಳೂರಿಗೆ ಮೆಟ್ರೋ ರೈಲು ತರುವ ಕನಸು ಕಂಡಿದ್ದ ಶಂಕರ್ ನಾಗ್ ಅವರ ದೂರದೃಷ್ಟಿ ಇಂದು ಸಾಕಾರಗೊಂಡಿರುವುದು ಅವರಿಗೆ ಸಲ್ಲಿಸುವ ಒಂದು ಸಣ್ಣ ಗೌರವವಾಗಿದೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಈ ಟ್ವೀಟ್‌ಗೆ ಜನ ಅಸಮಾಧಾನ ಹೊರ ಹಾಕಿದ್ದಾರೆ. ರವಿ ಕೀರ್ತಿಗೌಡ ಎನ್ನುವವರು, ಒಂದು ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರಿಡಿ ಎಂದು ಆಗ್ರಹಿಸಿದ್ದಾರೆ. ಸಂಧ್ಯ ಎನ್ನುವವರು ಬೆಂಗಳೂರಿನಲ್ಲಿ ಪ್ರಸ್ತುತ ಮೆಟ್ರೋ ಸೌಲಭ್ಯದ ಕನಸು ಕಂಡಿದ್ದ ದಿಗ್ಗಜ ನಟನಿಗೆ ನಮನ. ಯಾವುದೇ ಒಂದು ನಿಲ್ದಾಣಕ್ಕೆ ಅವರ ಹೆಸರಿಟ್ಟಾಗ ಮಾತ್ರ ಇದು ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೇಮಂತ್ ಎನ್ನುವವರು ಶಿವಾಜಿಗು ಕನ್ನಡಿಗರಿಗು ಸಂಬಂಧವಿಲ್ಲ.. ಶಿವಾಜಿನಗರವನ್ನ ಶಂಕರ್ ನಾಗ್ ನಗರ ಮಾಡಿ. ಅಲ್ಲಿ ಬರುವ ಮೆಟ್ರೊ ನಿಲ್ದಾಣಕ್ಕೂ ಶಂಕರ್ ನಾಗ್ ಹಸರಿಡಿ ಎಂದಿದ್ದಾರೆ.
ಒಂದು, ಒಂದೇ ಒಂದು ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡಿ. ಅವರ ಹೆಸರ ಜೊತೆಗೆ ನಿಮ್ಮ ಹೆಸರು, ನಿಮ್ಮ ಸರ್ಕಾರಕ್ಕೂ ಗೌರವ ಬರುತ್ತದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.
-
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications