Get Updates
Get notified of breaking news, exclusive insights, and must-see stories!

ಬೆಂಗಳೂರಲ್ಲಿ Sunday Ride ಎಂದು ವಿಡಿಯೋ ಹಂಚಿಕೊಂಡ ಡಿ.ಕೆ ಶಿವಕುಮಾರ್, ಜನರ ಮಸ್ತ್‌ ರಿಯಾಕ್ಷನ್‌!

ಬೆಂಗಳೂರಿನ ರಸ್ತೆಗುಂಡಿಗಳ ಸಮಸ್ಯೆಯ ಬಗ್ಗೆ ಬೆಂಗಳೂರಿಗರು ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ ಬಂದಾಗ ರಸ್ತೆ ಗುಂಡಿಗಳು ನಿರ್ಮಾಣವಾಗುವುದು ಸಹಜ ಎನ್ನುವಂತೆ ಆಗಿದೆ. ಆದರೆ ಈ ಬಾರಿ ಬೆಂಗಳೂರಿನ ತುಂಬಾ ರಸ್ತೆ ಗುಂಡಿಗಳು ನಿರ್ಮಾಣವಾಗಿದ್ದು. ಸಮಸ್ಯೆ ಹೆಚ್ಚಳವಾಗಿದೆ. ಇದೀಗ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬುಲೆಟ್ ಬೈಕ್‌ನಲ್ಲಿ ನಗರ ಸುತ್ತಾಟ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಶೇರ್ ಮಾಡಿಕೊಂಡಿದ್ದು. ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದರ ನಡುವೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಯ ಆಯುಕ್ತರು ಆಯಾ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಹಾಗೂ ಕಸದ ಸಮಸ್ಯೆ ಸೇರಿದಂತೆ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ನಗರಾಭಿವೃದ್ಧಿ ಸಚಿವ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಪಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಭಾನುವಾರ ಬೆಂಗಳೂರು ಸುತ್ತಾಡಿದ್ದಾರೆ. ಅದರ ಅನುಭವವನ್ನು ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

D K Shivakumar s Sunday Ride in Bengaluru Video Goes Viral Public Reactions Pour

ಡಿ.ಕೆ ಶಿವಕುಮಾರ್ ಅವರು ತಮ್ಮ ನಿವಾಸದಿಂದ ಕೆಪಿಸಿಸಿ ಕಚೇರಿಯವರೆಗೂ ತಾವೇ ಬೈಕ್ ಓಡಿಸಿಕೊಂಡು ಹೋಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್ ಅವರು, ಭಾನುವಾರದ ಸವಾರಿ!
ಇಂದು ಬಿಡುವಿಲ್ಲದ ವೇಳಾಪಟ್ಟಿಯ ನಡುವೆ, ನನ್ನ ಯೌವನದ ದಿನಗಳನ್ನು ಮತ್ತೆ ಅನುಭವಿಸಲು ನಾನು ಸ್ವಲ್ಪ ಸಮಯ ತೆಗೆದುಕೊಂಡೆ - ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿನ ಬೀದಿಗಳಲ್ಲಿ ಬೈಸಿಕಲ್ ಸವಾರಿ ಮಾಡಿದೆ.

ಇದು ಕೇವಲ ಸವಾರಿಗಿಂತ ಹೆಚ್ಚಿನದಾಗಿತ್ತು; ನಗರದೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಮತ್ತು ನಮ್ಮ ಜನ ಎದುರಿಸುತ್ತಿರುವ ಗುಂಡಿಗಳಂತಹ ದೈನಂದಿನ ಸವಾಲುಗಳನ್ನು ನೇರವಾಗಿ ವೀಕ್ಷಿಸಲು ಇದು ಒಂದು ಅವಕಾಶವಾಗಿತ್ತು. ನಾವು ಒಟ್ಟಿಗೆ ಇದ್ದೇವೆ, ಕೇಳುತ್ತಿದ್ದೇವೆ, ನೋಡುತ್ತಿದ್ದೇವೆ ಮತ್ತು ಉತ್ತಮ ಬೆಂಗಳೂರನ್ನು ನಿರ್ಮಿಸಲು ಬದ್ಧರಾಗಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ಏರಿಯಾ ಕಡೆ ಬನ್ನಿ: ಇನ್ನು ಬೆಂಗಳೂರಿನ ಜನ ಈ ಟ್ವೀಟ್‌ಗೆ ಭಿನ್ನವಾಗಿ ರಿಯಾಕ್ಟ್‌ ಮಾಡಿದ್ದಾರೆ. ಸರ್ ಪೀಣ್ಯದ ಕಡೆ ಒಮ್ಮೆ ಬನ್ಮಿ ಎಂದೂ, ವರ್ತೂರು ಕಡೆ ಬನ್ನಿ... ವೈಟ್‌ಫೀಲ್ಡ್‌ನ ರಸ್ತೆಗಳು ಅಧ್ವಾನವಾಗಿವೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ನೀವು ಓಡಾಡುವ ರಸ್ತೆಗಳಲ್ಲಿ ರಸ್ತೆ ಗುಂಡಿ ಇರುವುದಿಲ್ಲ ಅಲ್ಲದೇ ಟ್ರಾಫಿಕ್ ಜಾಮ್ ಸಮಸ್ಯೆಯೂ ಇರುವುದಿಲ್ಲ. ಆದರೆ ನಮ್ಮ ಕಷ್ಟ ಯಾರಿಗೆ ಹೇಳಿಕೊಳ್ಳಬೇಕು ಎಂದು ಜನ ರಿಯಾಕ್ಟ್‌ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+