ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಸಂವಿಧಾನದ ಪೀಠಿಕೆ ಹಂಚಿ ಗಣರಾಜ್ಯೋತ್ಸವ ಆಚರಣೆ

|
Google Oneindia Kannada News

ಬೆಂಗಳೂರು ಜನವರಿ 26: ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು ವಿಧಾನಸೌಧದ ಎದುರು ಸಂವಿಧಾನಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ವೇಷಧಾರಿಯಾಗಿ ಸಂವಿಧಾನದ ಪೀಠಿಕೆಯ ಪ್ರತಿ ಹಾಗೂ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ವಿತರಿಸಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.

Dalit leader distributes Constitution preface copy and celebrates Republic day

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್‌ ರಘು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರಿಗೆ ವಿತರಣೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಅವರು ಸಂವಿಧಾನದ ಮೂಲ ಆಶಯಗಳನ್ನು ನಾವು ಮರೆಯುತ್ತಿದ್ದೇವೆ ಎನ್ನಿಸುತ್ತಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಸಂವಿಧಾನದ ಪ್ರತಿಗಳನ್ನು ನೀಡುವ ಉದ್ದೇಶದಿಂದ ನಾವು ಸಂವಿಧಾನದ ಪೀಠಿಕೆಯ ಪ್ರತಿಗಳು ಹಾಗೂ ಸ್ಯಾನಿಟೈಸರ್‌ ಮತ್ತು ಮಾಸ್ಕ್‌ಗಳನ್ನು ವಿತರಿಸಿದ್ದೇವೆ. ಸಂವಿಧಾನ ಸಂರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಜನಜಾಗೃತಿಯ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

Dalit leader distributes Constitution preface copy and celebrates Republic day

ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್‌ ರಘು ಅವರು, ಇಂದು ವಿಧಾನಸೌಧಧ ಎದುರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ವೇಷಧಾರಿಯಾಗಿ ಸಾರ್ವಜನಿಕರಿಗೆ ಸಂವಿಧಾನದ ಪೀಠಿಕೆ ಪ್ರತಿಗಳನ್ನು ಹಾಗೂ ಉಚಿತ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ವಿತರಿಸಿದರು. ಈ ಮೂಲಕ ಸಂವಿಧಾನದ ಮೂಲ ಆಶಯಗಳು ಜನಬಳಕೆಯಾಗಬೇಕು ಎನ್ನುವ ಜನಜಾಗೃತಿ ಅಭಿಯಾನವನ್ನು ನಡೆಸಿಕೊಟ್ಟರು.

Recommended Video

ಬೆಂಗಳೂರು: ನೆಲಮಂಗಲದಲ್ಲಿ ಅನ್ನದಾತರ ಬೃಹತ್ ಪ್ರೊಟೆಸ್ಟ್..! | Oneindia Kannada

English summary
Karnataka dalit sangharsha samiti leader Raghu today distributed Constitution text preface copy and celebrates Republic day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X