ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹತ್ರಾಸ್‌ ಅತ್ಯಾಚಾರ ಪ್ರಕರಣ ಖಂಡಿಸಿದ ದಲಿತ ಸಂಘರ್ಷ ಸಮಿತಿ

|
Google Oneindia Kannada News

ಬೆಂಗಳೂರು ಅಕ್ಟೋಬರ್‌ 2: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕ್ರೂರವಾಗಿ ಹತ್ಯೆ ಮಾಡಿದ ಆರೋಪಿಗಳಿಗೆ ಕೂಡಲೇ ಶಿಕ್ಷಿಸಿ ಹಾಗೂ ಈ ಪ್ರಕರಣದಲ್ಲಿ ತಾರತಮ್ಯ ಮತ್ತು ನಿರ್ಲಕ್ಷತೆ ತೋರಿಸಿದ ಅಧಿಕಾರಿ ಹಾಗೂ ರಾಜಕಾರಣಿಗಳ ವಿರುದ್ದ ಕಾನೂನು ಕ್ರಮ ಜರುಗಿಸಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ ಸಿ ಎಸ್‌ ರಘು ಅವರ ನೇತೃತ್ವದಲ್ಲಿ ಇಂದು ಪ್ರತಿಭಟನೆಯನ್ನು ನಡೆಸಲಾಯಿತು.

ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ನಂತರ ಗಂಭೀರವಾಗಿ ಗಾಯಗೊಳಿಸಲಾಗಿತ್ತು. ದೆಹಲಿಯ ಆಸ್ಪತ್ರೆಗೆ ದಾಖಲಾಗಿ 14 ದಿನಗಳ ಕಾಲ ಜೀವನ ಮರಣದ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿರುತ್ತಾರೆ. ನಂತರ ಹೆಣ್ಣು ಮಗಳ ಮೃತದೇಹವನ್ನು ಕುಟುಂಬಕ್ಕೆ ಒಪ್ಪಿಸದೆ ಆಕೆಯ ಅಂತಿಮ ದರ್ಶನಕ್ಕೂ ಸಹ ಸರಕಾರ ಅವಕಾಶ ನೀಡದೆ ರಾತ್ರೋರಾತ್ರಿ ಪೊಲೀಸ್‌ ಬಂದೋಬಸ್ತಿನಲ್ಲಿ ಮೃತದೇಹವನ್ನು ಸುಟ್ಟುಹಾಕಿರುತ್ತಾರೆ.

Dalit Sangarsh Samiti condemns Hatras Rape incident, demand action

 ತಮ್ಮದೇ ಪಕ್ಷದ ಯೋಗಿ ವಿರುದ್ಧ ಉಮಾ ಭಾರತಿ ಆಕ್ರೋಶ ತಮ್ಮದೇ ಪಕ್ಷದ ಯೋಗಿ ವಿರುದ್ಧ ಉಮಾ ಭಾರತಿ ಆಕ್ರೋಶ

Recommended Video

BY Vijayendra ಅವರಿಗೆ ಕೊರೊನ ಸೋಂಕು , ಟ್ವಿಟ್ಟರ್ ನಲ್ಲಿ ಹೇಳಿದ್ದೇನು | Oneindia Kannada

ಇದು ಯುವತಿಯ ಸಾವಿನ ಘೋರಕೃತ್ಯಕ್ಕೆ ಕಾರಣರಾದ ಆರೋಪಿಗಳನ್ನು ರಕ್ಷಿಸುವ ಹೀನ ಕೃತ್ಯವಾಗಿದೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾದ ಕೇಂದ್ರ ಹಾಗೂ ರಾಜ್ಯ ಸರಕಾರದ ಸರ್ವಾಧಿಕಾರಿ ದೋರಣೆ ತೋರುತ್ತರುವ ಉತ್ತರಪ್ರದೇಶದ ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

English summary
Karnataka's Dalit Sangarsh Samiti condemns Hatras Rape incident, demand strict action against politicians and officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X