ದಂಡು-ಬೈಯಪ್ಪನಹಳ್ಳಿ ನಡುವೆ ಸ್ವಯಂ ಚಾಲಿತ ರೈಲ್ವೆ ಸಿಗ್ನಲ್
ಬೆಂಗಳೂರು, ಫೆಬ್ರವರಿ 12: ದಂಡು-ಬೈಯಪ್ಪನಹಳ್ಳಿ ರೈಲು ನಿಲ್ದಾಣದ ನಡುವೆ ಹಮ್ಮಿಕೊಂಡಿದ್ದ ಸ್ವಯಂಚಾಲಿತ ಸಿಗ್ನಲ್ ವ್ಯವಸ್ಥೆ ಅಳವಡಿಕೆ ಕಾಮಗಾರಿಯನ್ನು ಪೂರ್ಣಗೊಳಿಸಿದೆ.
ನೈಋತ್ಯ ರೈಲ್ವೆಯು ಬೆಂಗಳೂರು ವಿಭಾಗದ ದಂಡು ರೈಲ್ವೆ ನಿಲ್ದಾಣ-ಬೈಯಪ್ಪನಹಳ್ಳಿ ಒಟ್ಟು 6 ಕಿ.ಮೀ ವ್ಯಾಪ್ತಿಯಲ್ಲಿ ಸಿಗ್ನಲ್ ಅಳವಡಿಸಲಾಗಿದೆ. 2013-14ನೇ ಸಾಲಿನಲ್ಲಿ 19.75 ಕೋಟಿ ವೆಚ್ಚದಲ್ಲಿ ನಗರದ ದಂಡು ರೈಲ್ವೆ ನಿಲ್ದಾಣ-ವೈಟ್ಫೀಲ್ಡ್ ನಡುವೆ ಸ್ವಯಂ ಚಾಲೊತ ಸಿಗ್ನಲ್ ವ್ಯವಸ್ಥೆ ಅಳವಡಿಸುವ ಯೋಜನೆ ರೂಪಿಸಲಾಗಿತ್ತು.
ಈ ಮಾರ್ಗದಲ್ಲಿ ದಂಡು, ಬೆಂಗಳೂರು ಪೂರ್ವ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ, ಹೂಡಿ ಮತ್ತು ವೈಟ್ಫೀಲ್ಡ್ ರೈಲು ನಿಲ್ದಾಣಗಳಿವೆ. ಇದೀಗ ಮೊದಲ ಹಂತದಲ್ಲಿ ದಂಡು-ಬೈಯಪ್ಪನಹಳ್ಳಿ ನಡುವಿನ ಸ್ವಯಂ ಚಾಲತ ಸಿಗ್ನಲ್ ವ್ಯವಸ್ಥೆ ಕಾಮಗಾರಿ ಪೂರ್ಣಗೊಂಡಿದೆ.

ಬೈಯಪ್ಪನಹಳ್ಳಿ-ವೈಟ್ಫೀಲ್ಡ್ ನಡುವಿನ ಕಾಮಗಾರಿ ಪ್ರಗತಿಯಲ್ಲಿದ್ದು, ಈ ತಿಂಗಳ ಅಂತ್ಯದೊಳಗೆ ಪೂರ್ಣ ಗೊಳ್ಳಲಿದೆ. ಬೆಂಗಳೂರು-ಬೈಯಪ್ಪನಹಳ್ಳಿ-ವೈಟ್ಫೀಲ್ಡ್ ಮಾರ್ಗವು ಪ್ರಮುಖ ಮಾರ್ಗವಾಗಿದ್ದು, ಪ್ರತಿ ದಿನ 86 ರೈಲುಗಳು ಸಂಚರಿಸುತ್ತವೆ.

ದಂಡು-ಬೈಯಪ್ಪನಹಳ್ಳಿ ನಡುವಿನ ಸ್ವಯಂ ಚಾಲಿತ ಸಿಗ್ನಲ್ ವ್ಯವಸ್ಥೆಯಿಂದ ರೈಲುಗಳು ಮತ್ತಷ್ಟು ವೇಗವಾಗಿ ಚಲಿಸಲು ಸಹಕಾರಿಯಾಗಲಿದೆ. ಕೆಎಸ್ಆರ್ ನಿಲ್ದಾಣಕ್ಕೆ ಬರುವ ರೈಲುಗಳು ಸಿಗ್ನಲ್ಗಾಗಿ ಮಾರ್ಗದ ರೈಲು ನಿಲ್ದಾಣಗಳಲ್ಲಿ ಕಾಯುವುದು ಕಡಿಮೆಯಾಗಿದೆ.
-
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications