Dare devil Mustafa : ಡೇರ್ ಡೆವಿಲ್ ಮುಸ್ತಫಾ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಕರ್ನಾಟಕ ಸರ್ಕಾರ

ವಿಶ್ವದಾದ್ಯಂತ ತೆರೆ ಕಂಡು ಗಮನ ಸೆಳೆಯುತ್ತಿರುವ ಡೇರ್ ಡೆವಿಲ್ ಮುಸ್ತಫಾ ಚಲನಚಿತ್ರಕ್ಕೆ ಕರ್ನಾಟಕ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಡೇರ್ ಡೆವಿಲ್ ಮುಸ್ತಫಾ ಚಿತ್ರತಂಡ ತೆರಿಗೆ ವಿನಾಯಿತಿ ನೀಡುವಂತೆ, ಮತ್ತು ಸಿನಿಮಾ ವೀಕ್ಷಿಸುವಂತೆ ಮಾಡಿಕೊಂಡಿತ್ತು.

ಶಶಾಂಕ್ ಸೋಗಾಲ ನಿರ್ದೇಶನದ ಹೊಸ ಹುಡುಗರ ತಂಡದ ಡೇರ್ ಡೆವಿಲ್ ಮುಸ್ತಫಾ' ಚಿತ್ರವು ಮೇ 19 ರಂದು ತೆರೆಗೆ ಬಂದಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚಿತ್ರದ ಆಶಯ ಏನು, ತೆರಿಗೆ ವಿನಾಯಿತಿ ಏಕೆ ಬೇಕು ಎಂದು ಮನವರಿಕೆ ಮಾಡಿಕೊಡಲಾಗಿತ್ತು.

Daredevil Mustafa Movie Gets Tax Exemption In Karnataka

ಈಗಾಗಲೇ ರಾಜ್ಯಾದ್ಯಂತ ಡೇರ್ ಡೆವಿಲ್ ಮುಸ್ತಫಾ ಚಿತ್ರದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 99 ರೂಪಾಯಿಗೆ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಚಿತ್ರವನ್ನು ವೀಕ್ಷಿಸಬಹುದಾಗಿದೆ. ತೆರಿಗೆ ವಿನಾಯಿತಿ ಸಿಕ್ಕರೆ ಇನ್ನಷ್ಟು ಹೆಚ್ಚಿನ ಜನಕ್ಕೆ ಚಿತ್ರವನ್ನು ತಲುಪಿಸಬಹುದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ತೇಜಸ್ವಿ ಅವರ ಕತೆ ಆಧರಿಸಿದ ಸಿನಿಮಾ

ಖ್ಯಾತ ಬರಹಗಾರ ಪೂರ್ಣಚಂದ್ರ ತೇಜಸ್ವಿ ಅವರ ಕತೆಯನ್ನು ಆಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ. ಚಿತ್ರದ ನಿರ್ದೇಶಕ ಶಶಾಂಕ್ ಸೋಗಾಲ ಅವರು ಅಚ್ಚುಕಟ್ಟಾಗಿ ಚಿತ್ರವನ್ನು ತೆರೆಗೆ ತಂದಿದ್ದು, ಚಿತ್ರ ನೋಡಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲಿ ಕೂಡ ಚಿತ್ರ ಪ್ರದರ್ಶನ ಕಾಣುತ್ತಿದ್ದು, ಮೆಚ್ಚುಗೆ ಗಳಿಸಿಕೊಂಡಿದೆ.

ಇದೇ ಮೊದಲ ಬಾರಿಗೆ ಸಾಹಿತಿ ಓದುಗರು ಒಟ್ಟಾಗಿ ಸೇರಿಕೊಂಡು ಚಿತ್ರವೊಂದಕ್ಕೆ ಬಂಡವಾಳ ಹಾಕಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇತ್ತೀಚೆಗೆ ಹಿರಿಯ ನಟ ಪ್ರಕಾಶ್ ರಾಜ್ ಕೂಡ ಚಿತ್ರವನ್ನು ವೀಕ್ಷಣೆ ಮಾಡಿ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹಲವು ಹಿರಿಯ ನಟರು ಕೂಡ ಚಿತ್ರವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿನಿಮಾದಲ್ಲಿ ಹಿಂದೂ-ಮುಸ್ಲಿಂ ಕೋಮು ಸಾಮರಸ್ಯದ ಸಂದೇಶ ಸಾರಲಾಗಿದ್ದು, ಮಲೆನಾಡಿನ ಸುಂದರ ಪರಿಸರದಲ್ಲಿ ಸಿನಿಮಾನವನ್ನು ಚಿತ್ರಿಸಲಾಗಿದೆ. ತಮಾಷೆಯ ಮೂಲಕ ಗಂಭೀರವಾದ ಸಂದೇಶವನ್ನು ಚಿತ್ರದ ಮೂಲಕ ನೀಡಲಾಗಿದೆ. ಇದೇ ಮೊದಲ ಬಾರಿಗೆ ಚಿತ್ರಮಂದಿರದ ಮುಂದೆ ಸಾಹಿತಿಯೊಬ್ಬರ ಕಟೌಟ್ ನಿಲ್ಲಿಸುವ ಮೂಲಕ ಗೌರವ ಸಲ್ಲಿಸಲಾಗಿದೆ. ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಮುಂದೆ ತೇಜಸ್ವಿ ಅವರ ಕಟೌಟ್ ಹಾಕಲಾಗಿದೆ.

ಕೇರಳ ಸ್ಟೋರಿ, ಕಾಶ್ಮೀರ ಫೈಲ್ಸ್‌ಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಶ್ಮೀರ ಫೈಲ್ಸ್ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿತ್ತು. ಬಿಜೆಪಿ ಅಧಿಕಾರದಲ್ಲಿರುವ ಬಹುತೇಕ ರಾಜ್ಯಗಳಲ್ಲಿ ಕಾಶ್ಮೀರ ಫೈಲ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದರೆ, ಇತ್ತೀಚೆಗೆ ಬಿಡುಗಡೆಯಾಗಿದ್ದ ದಿ ಕೇರಳ ಸ್ಟೋರಿ ಸಿನಿಮಾಗೂ ಹಲವು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಸಿಕ್ಕಿದೆ. ಕರ್ನಾಟಕದಲ್ಲಿ ಕೂಡ ಹಲವು ಚಿತ್ರಮಂದಿರಗಳಲ್ಲಿ ದಿ ಕೇರಳ ಸ್ಟೋರಿ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+