Darshan: ದರ್ಶನ ಬಂಧನ: ಪೊಲೀಸ್‌ ಠಾಣೆ ಎದುರು ಜಮಾಯಿಸಿದ ಫ್ಯಾನ್ಸ್‌

ಚಂದನವನದ ಸ್ಟಾರ್ ನಟ ದರ್ಶನ ಅವರನ್ನು ಮೈಸೂರಿನ ರ್ಯಾಡಿಸನ್‌ ಹೋಟೆಲ್‌ನಲ್ಲಿ ಬಂಧಿಸಲಾಗಿದೆ. ದರ್ಶನ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ದರ್ಶನ ಫ್ಯಾನ್ಸ್‌ ಠಾಣೆಯ ಮುಂದೆ ಜಮಾಯಿಸಿದ್ದಾರೆ.

ಸ್ಯಾಂಡಲ್‌ವುಡ್ ಚಾಲೆಂಜಿಂಗ್‌ ಸ್ಟಾರ್‌ ಕೊಲೆ ಪ್ರಕರಣದ ಆರೋಪದಲ್ಲಿ ಬಂಧಿಸಲಾಗಿದೆ. ಚಂದನವನದ ಸ್ಟಾರ್ ನಟ ದರ್ಶನ ಅವರನ್ನು ಮೈಸೂರಿನ ರ್ಯಾಡಿಸನ್‌ ಹೋಟೆಲ್‌ನಲ್ಲಿ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 10 ಜನರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.

Darshan Arrested in Murder Case Fans Gather Outside Police Station

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವನು ನಟ ದರ್ಶನ ಪ್ರೇಯಸಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೇಸೆಜ್‌ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಜೂನ್‌ 9 ರಂದು ರೇಣುಕಾಸ್ವಾಮಿ ಅವರ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ, ನಾಲ್ವರನ್ನು ಬಂಧಿಸಿದ್ದರು.

ಬಂಧಿತರನ್ನು ವಿಚಾರಣೆ ನಡೆಸುವಾಗ, ಬಂಧಿತರು ದರ್ಶನ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ನಟ ದರ್ಶನರನ್ನು ಬಂಧಿಸಲಾಗಿದೆ. ದರ್ಶನ ಅವರನ್ನು ಮೈಸೂರಿನಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು ಅನ್ನಪೂರ್ಣೆಶ್ವರಿ ನಗರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ದರ್ಶನ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ದರ್ಶನ ಫ್ಯಾನ್ಸ್‌ ಠಾಣೆಯ ಮುಂದೆ ಜಮಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+