ದರ್ಶನ್ ಪ್ರಕರಣ: ಕೊಲೆ ಕೇಸ್ ಆರೋಪಿಗಳು ಯಾರು-ಯಾರು?
ಬೆಂಗಳೂರು, ಜೂನ್ 11; ಕನ್ನಡ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಕೊಲೆ ಪ್ರಕರಣವೊಂದರ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಮೂಲದ ಯುವಕನ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿ 10 ಆರೋಪಿಗಳ ವಿಚಾರಣೆ ನಡೆಯುತ್ತಿದೆ.
ಚಿತ್ರದುರ್ಗದ ನಗರದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಮಂಗಳವಾರ ಬೆಳಗ್ಗೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಟ ದರ್ಶನ್, ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಜೂನ್ 9ರಂದು ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿಚಾರಣೆ ಬೆಂಗಳೂರು ನಗರದ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ.
ಆರೋಪಿಗಳು ಯಾರು?: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ದರ್ಶನ್ ಪ್ರೇಯಸಿ ಪವಿತ್ರಾ ಗೌಡ, ಪಟ್ಟಣಗೆರೆ ವಿನಯ್, ಕಿರಣ್, ಮಧು, ಲಕ್ಷ್ಮಣ್, ಆನಂದ್, ರಾಘವೇಂದ್ರ ಸೇರಿ 10 ಜನರನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ಚಿತ್ರದುರ್ಗದಲ್ಲಿ ದರ್ಶನ್ ಅಭಿಮಾನಿಗಳ ಸಂಘ ಕಟ್ಟಿಕೊಂಡಿರುವ ರಾಘವೇಂದ್ರ ಮೂಲಕ ಜೂನ್ 1ರ ಶನಿವಾರ ನಟ ದರ್ಶನ್ ರೇಣುಕಾಸ್ವಾಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿದ್ದಾರೆ. ಕಾಮಾಕ್ಷಿಪಾಳ್ಯದ ಶೆಡ್‌ವೊಂದರಲ್ಲಿ ಕೂಡಿ ಹಾಕಿ, ಹಲ್ಲೆ ಮಾಡಿ ಹತ್ಯೆ ಮಾಡಿ, ಬಳಿಕ ಶವವನ್ನು ಮೋರಿಗೆ ಎಸೆಯಲಾಗಿದೆ ಎಂಬುದು ಆರೋಪ.
ಕಾಮಾಕ್ಷಿಪಾಳ್ಯದಲ್ಲಿರುವ ಪಟ್ಟಣಗೆರೆ ವಿನಯ್‌ಗೆ ಸೇರಿದ ಶೆಡ್‌ನಲ್ಲಿ ರೇಣುಕಾಸ್ವಾಮಿ ಕೂಡಿ ಹಾಕಿ ಹಲ್ಲೆ ಮಾಡಲಾಗಿದೆ. ಜೂನ್ 8ರಂದು ಹತ್ಯೆ ನಡೆದಿದ್ದು, ಸುಮನಹಳ್ಳಿ ಸಮೀಪದ ಅನುಗ್ರಹ ಅಪಾರ್ಟ್‌ಮೆಂಟ್ ಬಳಿಯ ಮೋರಿಯಲ್ಲಿ ಜೂನ್ 9ರಂದು ಶವ ಪತ್ತೆಯಾಗಿದೆ.
ಅಪಾರ್ಟ್‌ಮೆಂಟ್ ಭದ್ರತಾ ಸಿಬ್ಬಂದಿ ರಾಮ್ ದೋರ್ ಜೀ ಮಾಹಿತಿ ನೀಡಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ರೇಣುಕಾಸ್ವಾಮಿ ಶವವನ್ನು ವಶಕ್ಕೆ ಪಡೆದು ಅಪರಿಚಿತ ಶವ ಪತ್ತೆ ಎಂದು ದೂರು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದರು.
ಜೂನ್ 10ರಂದು ಕೆಲವು ಆರೋಪಿಗಳ ವಿಚಾರಣೆ ವೇಳೆ ಕೇಸ್‌ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ನಟ ದರ್ಶನ್ ಹೆಸರು ಕೇಳಿ ಬಂದಿದ್ದು, ಕಾಮಾಕ್ಷಿಪಾಳ್ಯ ಪೊಲೀಸರು ಮಂಗಳವಾರ ಬೆಳಗ್ಗೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಜಿಮ್ ಮಾಡುತ್ತಿದ್ದ ದರ್ಶನ್‌ರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆ ತಂದಿದ್ದಾರೆ.
ಎಲ್ಲಾ ಆರೋಪಿಗಳ ವಿಚಾರಣೆ ಬೆಂಗಳೂರು ನಗರದ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ. ನಟ ದರ್ಶನ್‌ರನ್ನು ಸಹ ಮೈಸೂರಿನಿಂದ ಕರೆತಂದ ಪೊಲೀಸರು ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ. ದರ್ಶನ್ ಇಬ್ಬರು ಬೌನ್ಸರ್‌ಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಆದರೆ ಹಲ್ಲೆ ನಡೆದಾಗ ದರ್ಶನ್, ಪವಿತ್ರಾ ಗೌಡ ಅಲ್ಲಿದ್ದರೆ? ಎಂಬ ಬಗ್ಗೆ ತನಿಖೆ ಮುಂದುವರೆದಿದೆ.
ರೇಣುಕಾಸ್ವಾಮಿ ಕೊಲೆಯಾಗಿರುವ ಕುರಿತು ಪೊಲೀಸರು ಅವರ ಕುಟುಂಬದವರಿಗೆ ಜೂನ್ 10ರಂದು ಮಾಹಿತಿ ನೀಡಿದ್ದರು. ಮಂಗಳವಾರ ಕುಟುಂಬದವರು ಬೆಂಗಳೂರಿಗೆ ಆಗಮಿಸಿದ್ದಾರೆ. ಪೊಲೀಸರು ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಬೆಂಗಳೂರು ನಗರ ಪೊಲೀಸರು ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಮುಂದೆ ದರ್ಶನ್ ಅಭಿಮಾನಿಗಳು ಜಮಾವಣೆಗೊಳ್ಳುತ್ತಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಬಂದೋಬಸ್ತ್ ಮಾಡಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications