Actor Darshan: ಸಿಕ್ಕೇ ಬಿಡ್ತು ಮತ್ತೊಂದು ಮಹತ್ವದ ಸಾಕ್ಷಿ.! ನಟ ದರ್ಶನ್‌ಗೆ ಢವಢವ..

Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ & ಪಟಾಲಂ ಗ್ಯಾಂಗ್‌ ಜೈಲು ಸೇರಿದೆ. ಈ ಪ್ರಕರಣದ ತನಿಖಿಯನ್ನು ಪೊಲೀಸರು ಚುರುಕುಗೊಳಿಸಿದ್ದು, ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅಲ್ಲದೆ, ಇತ್ತೀಗಷ್ಟೇ ದರ್ಶನ್‌ ಬಟ್ಟೆ ಮೇಲಿದ್ದ ರಕ್ತದ ಕಲೆಗಳು ರೇಣುಕಾಸ್ವಾಮಿಯವರದ್ದೇ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ತಿಳಿದುಬಂದಿತ್ತು. ಇದೀಗ ಮತ್ತೊಂದು ಮಹತ್ವದ ಸಾಕ್ಷಿ ಸಿಕ್ಕಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ಅಲ್ಲದೆ, ಪತಿಗಾಗಿ ವಿಜಯಲಕ್ಷ್ಮಿ ಟೆಂಪಲ್‌ ರನ್‌ ಕೂಡ ಮುಂದುವರೆಸಿದ್ದಾರೆ. ಆದರೂ ನಟ ದರ್ಶನ್‌ಗೆ ದಿನದಿಂದ ದಿನಕ್ಕೆ ಉರುಳು ಬಿಗಿಯಾಗುತ್ತಲೇ ಇದೆ. ಸಾಲದೆಂಬಂತೆ ಒಂದೊಂದೇ ಸಾಕ್ಷಿಗಳನ್ನು ಕೆದಕಿ ತೆಗೆಯುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಇದನೆಲ್ಲ ಗಮನಿಸಿದರೆ, ದರ್ಶನ್‌ಗೆ ಬೇಲ್‌ ಸಿಗುವುದು ಕಷ್ಟಸಾಧ್ಯ ಎನ್ನುವಂತಾಗಿದೆ.

Darshan Thoogudeepa Another important witness against actor Darshan

ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆದೊಯ್ದು ನಟ ದರ್ಶನ್‌ & ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿರುವುದಾಗಿ ಗಂಭೀರ ಆರೋಪ ಇದ್ದು, ಈ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಮಂದಿ ಜೈಲು ಪಾಲಾಗಿದ್ದಾರೆ. ಮತ್ತೊಂದೆಡೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ ಅಂತಾ ಪೊಲೀಸರೇನೂ ಕೈಕಟ್ಟಿ ಸುಮ್ಮನೆ ಕುಳಿತಿಲ್ಲ. ಬದಲಾಗಿ ಮಹತ್ವದ ಸಾಕ್ಷ್ಯಗಳ ಮೇಲೆ ಕಣ್ಣಿಟ್ಟಿದ್ದಾರೆ.

ಅಲ್ಲದೆ, ಈ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದಲ್ಲಿ ಬಗೆದಷ್ಟು ಸಾಕ್ಷಿಗಳು ಬಯಲಾಗುತ್ತಕೇ ಇವೆ. ಇದೀಗ ಪಟ್ಟಣಗೆರೆ ಶೆಡ್‌ನಲ್ಲಿ ಪೊಲೀಸರು ವಶಕ್ಕೆ ಪಡೆದ ಬಿರಯ್‌ ಬಾಟಲ್‌ಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎಂದು ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಇತ್ತೀಚೆಗಷ್ಟೇ ಎಫ್‌ಎಸ್‌ಎಲ್‌ ವರದಿ ಪ್ರಕಾರ, ದರ್ಶನ್‌ ಬಟ್ಟೆ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದು, ಇದೀಗ ಬಿಯರ್‌ ಬಾಟೆಲ್‌ ಮೇಲೆ ರಕ್ತದ ಕಲೆಗಳು ಪತ್ತೆಯಾಗಿರುವುದು ದರ್ಶನ್‌ಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿಗಳು ಅದೇ ಸ್ಥಳದಲ್ಲೇ ಗುಂಡು, ತುಂಡಿನ ಪಾರ್ಟಿ ಮಾಡಿ, ಖುಷ್ಕವನ್ನೂ ತಿಂದಿದ್ದು, ಇದರಲ್ಲಿ ಒಂದು ಬಿಯರ್ ಬಾಟಲಿ ಮೇಲೆ ರಕ್ತದ ಕಲೆ ಪತ್ತೆ ಆಗಿದೆ. ಅಷ್ಟೇ ಅಲ್ಲದೆ, ಆರೋಪಿಯೊಬ್ಬನ ಬೆರಳಚ್ಚು ಕೂಡ ಇದೆ ಎನ್ನಲಾಗಿದೆ. ಇದೀಗ ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಬಿಯರ್ ಬಾಟಲಿಯನ್ನು ಪ್ರಮುಖ ಸಾಕ್ಷಿಯಾಗಿ ಮಾಡಿರುವ ಪೊಲೀಸರು, ಹೆಚ್ಚಿನ ಸಾಕ್ಷಿಗಳನ್ನು ಕೆದಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+