'ಅಶ್ಲೀಲ ಮೆಸೇಜ್ ದರ್ಶನ್‌ಗೆ ತೋರಿಸಿ ತಪ್ಪು ಮಾಡಿದೆ': ಪೊಲೀಸರ ಮುಂದೆ ಕಣ್ಣೀರಿಟ್ಟ ಪವಿತ್ರ ಗೌಡ
ಬೆಂಗಳೂರು, ಜೂನ್ 12: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆರೋಪದ ಮೇಲೆ ನಟ ದರ್ಶನ್ ಜೈಲು ಪಾಲಾಗಿದ್ದು, ಪ್ರೇಯಸಿ ಪವಿತ್ರಾ ಗೌಡರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರ ಗೌಡರಿಗೆ ಕೆಟ್ಟ ಮೇಲೆ ಬುದ್ಧಿ ಬಂದಿದ್ದು, ಪೊಲೀಸರ ಮುಂದೆ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸ್ ವಿಚಾರಣೆ ಪವಿತ್ರಾ ಗೌಡ, 'ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ದರ್ಶನ್ ಹೇಳಿ ತಪ್ಪು ಮಾಡಿದೆ ಎಂದು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಕೊಲೆಯಾದ ರೇಣುಕಾಸ್ವಾಮಿ ನನಗೆ ಕಳುಹಿಸುತ್ತಿದ್ದ ಮೆಸೇಜ್‌ಗಳ ಬಗ್ಗೆ ದರ್ಶನ್‌ಗೆ ಹೇಳಿ ತಪ್ಪು ಮಾಡಿದೆ. ಅಶ್ಲೀಲ ಮೆಸೇಜ್ ತೋರಿಸಿ, ಹೇಳಿದ್ದಕ್ಕೆ ಇಷ್ಟೆಲ್ಲಾ ಆಯ್ತು' ಎಂದು ಪೊಲೀಸರ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.

'ನಾನೇ ಈ ಬಗ್ಗೆ ಪೊಲೀಸರಿಗೆ ದೂರು ಕೊಡಬಹುದಿತ್ತು. ಅಶ್ಲೀಲ ಮೆಸೇಜ್ ಬಗ್ಗೆ ದೂರು ಕೊಟ್ಟಿದ್ದರೆ ಕಾನೂನು ಕ್ರಮ ಆಗುತ್ತಿತ್ತು. ಅದನ್ನು ಬಿಟ್ಟು ಪ್ರತಿಯೊಂದು ಮೆಸೇಜ್ ತೋರಿಸಿ ಹೇಳಿದ್ದು ತಪ್ಪಾಯಿತು. ಅಶ್ಲೀಲ ಮೆಸೇಜ್‌ಗಳನ್ನು ಅವರಿಗೆ ತೋರಿಸಿ ಹೇಳಬಾರದಿತ್ತು. ಇದು ಕೊಲೆಯಾಗುವ ಹಂತಕ್ಕೆ ಹೋಗುತ್ತದೆ ಅಂತಾ ಅಂದುಕೊಂಡಿರಲಿಲ್ಲ' ಎಂದು ಪೊಲೀಸರ ಮುಂದೆ ನಟಿ ಪವಿತ್ರ ಗೌಡ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಪವಿತ್ರಾ ಮೇಲೆ ದರ್ಶನ್ ಹಲ್ಲೆ..?
ಇನ್ನು ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್, ಪವಿತ್ರಾ ಗೌಡ ಮೇಲೆ ದರ್ಶನ್ ಹಲ್ಲೆ ಮಾಡಿದ್ದು. ಈ ಹಲ್ಲೆಯಲ್ಲಿ ಗಾಯಗೊಂಡಿದ್ದ ನಟಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೂಡ ಪಡೆದಿದ್ದರು ಎನ್ನಲಾಗಿದೆ, ರೇಣುಕಾಸ್ವಾಮಿ ಮೇಲೆ ಹಲ್ಲೆ ಬಳಿಕ 'ನಿನ್ನಿಂದಲೇ ಹೀಗೆಲ್ಲಾ ಆಯಿತು' ಎಂದು ಪವಿತ್ರಾ ಗೌಡ ಮೇಲೆ ಕೂಗಾಡಿದ್ದ ದರ್ಶನ್ ಆಕೆ ಮೇಲೆ ಹಲ್ಲೆ ಕೂಡ ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ಹಲ್ಲೆಗೊಳಗಾದ ಪವಿತ್ರಾಗೆ ಬೆಂಗಳೂರಿನ ಆರ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಮವಾರ (ಜೂನ್ 10) ಪವಿತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.
ರೇಣುಕಾ ಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದ ತೆ ಎಲ್ಲಾ 13 ಮಂದಿ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸದ್ಯ ಆರೋಪಿಗಳನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ ಕೋರ್ಟ್ ಒಪ್ಪಿಸಿದ್ದು, ಪವಿತ್ರಾ ಗೌಡರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಇನ್ನು ಇಂದು ಸ್ಥಳ ಮಹಜರು ನಡೆಯಲಿದ್ದು, ಆರೋಪಿಗಳನ್ನು ಪೊಲೀಸರು ಘಟನಾ ಸ್ಥಳಕ್ಕೆ ಕರೆದುತರಲಿದ್ದಾರೆ.












Click it and Unblock the Notifications