Darshan Thoogudeepa: ನಟ ದರ್ಶನ್- ಪವಿತ್ರಾ ಗೌಡ ಜಾಮೀನು ಆಸೆ ಮತ್ತೆ ನಿರಾಸೆ

ಬೆಂಗಳೂರು, ಡಿಸೆಂಬರ್ 03: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ ತೂಗುದೀಪ್ ಅವರು ಷರತ್ತು ಬದ್ಧ ಜಾಮೀನು ಪಡೆದು ಸದ್ಯ ಆಸ್ಪತ್ರೆಯಲ್ಲಿದ್ದಾರೆ. ಇತ್ತ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ನಟಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿಯೇ ಉಳಿಯುವಂತಾಗಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟಿ ಆಸೆ ಹುಸಿಯಾಗಿದೆ. ದರ್ಶನ್ ಆಂಡ್ ಗ್ಯಾಂಗ್ ಅರ್ಜಿ ವಿಚಾರಣೆಯನ್ನು ಕೋರ್ಟ್ ಇದೇ ಡಿಸೆಂಬರ್ 6ಕ್ಕೆ ಮುಂದೂಡಿದೆ.

ರೇಣುಕಾಸ್ವಾಮಿ ಸಾವಿನ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾದರೆ, ನಟಿ ಪವಿತ್ರಾ ಗೌಡ ಎ1 ಆರೋಪಿ ಯಾಗಿದ್ದಾರೆ. ಬಳ್ಳಾರಿ ಜೈಲಿನಲ್ಲಿದ್ದಾಗಲೇ ನಟ ದರ್ಶನ್ ಪ್ರಕರಣದಿಂದ ಸಾಮಾನ್ಯ (ರೆಗ್ಯುಲರ್) ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲಿ ನಟಿ ಪವಿತ್ರಾ ಗೌಡ ಅವರು ಜಾಮೀನು ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಈ ಇಬ್ಬರು ಜಾಮೀನು ಅರ್ಜಿಗಳು ನಡೆದಿವೆ.

Darshan Thoogudeepa Case Pavithra Gowda Bail Plea hearing Adjourned on Dec 6th

ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಾಡುತ್ತಿದ್ದಾರೆ. ಸಾಕ್ಷ್ಯಗಳನ್ನು ಹೆಸರಿಸುವಂತೆ, ದರ್ಶನ್ ಪಾತ್ರ ಇದರಲ್ಲಿ ಇಲ್ಲ, ಅವರಿಗೆ ಪ್ರಕರಣದಿಂದ ಜಾಮೀನು ನೀಡುವಂತೆ ವಾದ ಮಂಡಿಸಿದ್ದಾರೆ.

ಇತ್ತ ಬಂಧನಕ್ಕೊಳಗಾದ ದಿನದಿಂದಲೂ ಜೈಲಿನಲ್ಲೇಯೇ ಕಾಲ ಕಳೆಯುತ್ತಿರುವ ನಟಿ ಪವಿತ್ರಾ ಗೌಡ ಅವರ ಪರವಾಗಿ ಹಿರಿಯ ವಕೀಲ ಸೆಬಾಸ್ಟಿನ್ ಅವರು ವಾದ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರ ಕೈವಾಡ ಇಲ್ಲ. ಇತರರು ಹೊಡೆದ ಪರಿಣಾಮ ಆತ ಮೃತಪಟ್ಟಿರಬೇಕು. ಆದ್ದರಿಂದ ಪವಿತ್ರಾ ಗೌಡ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಅವರು ವಾದ ಮಂಡಿಸಿದರು. ಈ ದರ್ಶನ್ ಹಾಗೂ ಪವಿತ್ರಾ ಗೌಡ ಜೊತೆಗೆ ಇನ್ನೂ ಕೆಲವು ಆರೋಪಿಗಳ ವಿಚಾರಣೆ ಸಹ ನಡೆಯಿತು.

ವಾದ ವಿವಾದ ಆಲಿಸಿದ ಕೋರ್ಟ್ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿದರು. ಅಂದು ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು ಜಾಮೀನು ನೀಡದಂತೆ ವಾದ ಮಾಡಲಿದ್ದಾರೆ. ಸದ್ಯ ಪ್ರಕರಣದಲ್ಲಿ ಜಾಮೀನು ಅರ್ಜಿ ಕುರಿತು ಕುತೂಹಲ ಹೆಚ್ಚಾಗಿದೆ.

ನಟ ದರ್ಶನ್ ಬಳ್ಳಾರಿ ಜೈಲಿನಿಂದ ಬೆನ್ನು ನೋವಿನ ಕಾರಣದಿಂದ ಆರು ವಾರಗಳ ಷರತ್ತು ಬದ್ಧ ಜಾಮೀನು ಪಡೆದಿದ್ದಾರೆ. ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದುವರೆಗೂ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಇದರ ವಿರುದ್ಧ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+