ಲೋಕಾಸಭಾ ಚುನಾವಣೆಗೆ ಮುಹೂರ್ತ ನಿಗದಿ: ಬೆಂಗಳೂರಿನಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಆದೇಶ-ಮಾಹಿತಿ, ವಿವರ
ಬೆಂಗಳೂರು, ಮಾರ್ಚ್, 16: ಶನಿವಾರ (ಮಾರ್ಚ್ 16) ಎಲೆಕ್ಷನ್ ಕಮಿಷನ್ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಈ ಹಿನ್ನೆಲೆ ಜಿಲ್ಲಾ ಚುನಾವಣಾಧಿಕಾರಿ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ತುಷಾರ್ ಗಿರಿನಾಥ್ ಅವರು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ಸೂಚನೆ ನೀಡಿದ್ದಾರೆ, ಕಚೇರಿ, ಸರ್ಕಾರಿ ಜಾಗ ಸೇರಿ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನು ತೆಗೆಯಲು ಸೂಚನೆ ನೀಡಿದ್ದಾರೆ.

ಯಾವುದೇ ಫ್ಲೆಕ್ಸ್, ಪೋಸ್ಟರ್, ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ , ಎಲ್ಲಾ ಬ್ಯಾನರ್, ಭಾವಚಿತ್ರ ಹಾಗೂ ಜಾಹೀರಾತುಗಳನ್ನು ತೆಗೆಯಲು ಸೂಚಿಸಿದ್ದಾರೆ.
2 ಹಂತದಲ್ಲಿ ಮತದಾನ: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಆಗಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಉಡುಪಿ-ಚಿಕ್ಕಮಗಳೂರು, ಕೋಲಾರ, ಚಾಮರಾಜನಗರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು-ಕೊಡಗು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಈ ಕ್ಷೇತ್ರಗಳಲ್ಲಿ 2ನೇ ಹಂತದ ಮತದಾನ: ಕಲಬುರಗಿ, ಬೀದರ್, ರಾಯಚೂರು, ದಾವಣಗೆರೆ, ಧಾರವಾಡ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗದಲ್ಲಿ ಮೇ 7ರಂದು 2ನೇ ಹಂತದ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.












Click it and Unblock the Notifications