ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಡಿಎ ಮನೆ ಖರೀದಿಸುವವರಿಗೆ ಬಂಪರ್ ಆಫರ್ ಘೋಷಿಸಿದ ಡಿಸಿಎಂ

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 7: ಮೈಸೂರು ರಸ್ತೆ ಭಾಗದಲ್ಲಿ ಬಿಡಿಎ ನಿರ್ಮಿಸಿರುವ ಬಿಡಿಎ ಅಪಾರ್ಟ್ ಮೆಂಟ್ ಖರೀದಿಗೆ ಮುಂದಾಗುವ ಸಾರ್ವಜನಿಕರಿಗೆ ಶೇ5ರಷ್ಟು ಹಾಗೂ ಒಮ್ಮೆಲೆ 10ಕ್ಕೂ ಹೆಚ್ಚು ಅಪಾರ್ಟ್ ಮೆಂಟ್ ಖರೀದಿಸುವವರಿಗೆ ಶೇ.10 ರಷ್ಟು ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದರು.

ಬಿಡಿಎ ಕಚೇರಿಯಲ್ಲಿ ನಡೆದ ಬಿಡಿಎ ಆಡಳಿತ ಮಂಡಳಿ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರು ರಸ್ತೆ ಭಾಗದಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಿದ್ದು, ಇದರ ಖರೀದಿಗೆ ಮುಂದಾಗುವವರಿಗೆ ಆಫರ್ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಶೀಘ್ರವೇ ಅಪಾರ್ಟ್ ಮೆಂಟ್ ಖರೀದಿಯಾದರೆ ಮುಂದಿನ ಪ್ರಾಜೆಕ್ಟ್ ಕೈಗೊಳ್ಳಲು ಸಾಧ್ಯ. ಹೀಗಾಗಿ ರಿಯಾಯಿತಿ ಘೋಷಿಸಿದ್ದೇವೆ ಎಂದರು.

ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎಯಿಂದ ನಿವೇಶನ ಹಂಚಿಕೆ ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎಯಿಂದ ನಿವೇಶನ ಹಂಚಿಕೆ

ಡಾ.ಶಿವರಾಂ ಕಾರಂತರ ಬಡಾವಣೆ 17 ಗ್ರಾಮಗಳಲ್ಲಿ 3564 ಎಕರೆ ಜಮೀನು ಸ್ವಾಧೀನ ಮಾಡಿ, ಸಾರ್ವಜನಿಕರಿಗೆ ನಿವೇಶನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.‌ ಈ ಪ್ರಕರಣ ಕುರಿತು ಸುಪ್ರೀಂಕೋರ್ಟ್ ಮೂರು ತಿಂಗಳೊಳಗೆ ನೋಟಿಫೈ ಮಾಡಲು ಆದೇಶ ನೀಡಿತ್ತು.

ಅಂತೆಯೇ, ನಿವೇಶ ಹಂಚಿಕೆ ಸಂಬಂಧ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿ, ಸಚಿವ ಸಂಪುಟದಿಂದ ಒಪ್ಪಿಗೆ ಪಡೆದುಕೊಳ್ಳಲಾಗುವುದು, ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ.

 ಈ ಆಫರ್ ಏಕೆ ಗೊತ್ತಾ?

ಈ ಆಫರ್ ಏಕೆ ಗೊತ್ತಾ?

ಮೈಸೂರು ರಸ್ತೆಯಲ್ಲಿ ಬಿಡಿಎ ನಿರ್ಮಿಸಿದ್ದ ಅಪಾರ್ಟ್ ಮೆಂಟ್ ಗಳು 2015ರಿಂದ ಮಾರಾಟವಾಗದೇ ಉಳಿದಿದೆ. ಗ್ರೂಫ್ ಹೌಸಿಂಗ್ ಕಾನ್ಸೆಪ್ಟ್ ಅಡಿಯಲ್ಲಿ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ನಿರ್ಮಿಸಿದ್ದರಿಂದ ಮನೆಗಳು ತೀರಾ ಕಿರಿದಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಲವಾರು, ಅಪಾರ್ಟ್ ಮೆಂಟ್ ಗಳು ಮಾರಾಟವಾಗದೆ ಉಳಿದಿವೆ.. ಖಾಲಿ ಇರುವ ಅಪಾರ್ಟ್ ಮೆಂಟ್ ಗಳನ್ನು ಮಾರಾಟ ಮಾಡಿದರೆ, ಅದಕ್ಕೆ ಹೂಡಿಕೆ ಮಾಡಿರುವ ಹಣವನ್ನು ವಾಪಾಸ್ ಪಡೆದು, ಹೊಸ ಯೋಜನೆಗಳನ್ನು ರೂಪಿಸಬಹುದು ಎಂದು ಬಿಡಿಎ ಚಿಂತನೆಯಾಗಿದೆ. ಆದರೆ ಆದರೆ ಮೈಸೂರು ರಸ್ತೆ ಹಾಗೂ ಸೂರ್ಯನಗರದ ಬಡಾವಣೆ, ಹೂಡಿಕೆ ಮಾಡಿರುವ ಮನೆಗಳು, ಮಾರಾಟವಾಗುತ್ತಿಲ್ಲ, ಹೀಗಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿದೆ,

ಕೆಂಪೇಗೌಡ ಬಡಾವಣೆ ನಿವೇಶನ ಹಂಚಿಕೆ 2 ತಿಂಗಳು ಮುಂದಕ್ಕೆ ಕೆಂಪೇಗೌಡ ಬಡಾವಣೆ ನಿವೇಶನ ಹಂಚಿಕೆ 2 ತಿಂಗಳು ಮುಂದಕ್ಕೆ

ಹಳೇ ಮದ್ರಾಸ್ ರಸ್ತೆಯಲ್ಲಿ ಇನೋವೇಟಿವ್ ಸಿಟಿ ನಿರ್ಮಾಣ

ಹಳೇ ಮದ್ರಾಸ್ ರಸ್ತೆಯಲ್ಲಿ ಇನೋವೇಟಿವ್ ಸಿಟಿ ನಿರ್ಮಾಣ

65 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ 5 ಸಾವಿರ ಕೋಟಿ ರೂ. ಅಂದಾಜು ಮಾಡಲಾಗಿದೆ. ಜೈಕಾ ಕಂಪನಿ ಸಹಯೋಗದೊಂದಿಗೆ ಈ ಯೋಜನೆ ಕಾರ್ಯಗತವಾಗಲಿದೆ. ಹಳೇ ಮದ್ರಾಸ್ ರಸ್ತೆ ಕೋಣದಾಸಪುರದ ಬಳಿ 165 ಎಕರೆಯಲ್ಲಿ ಇನೋವೇಟಿವ್ ಸಿಟಿ ನಿರ್ಮಾಣಕ್ಕೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಹಿಂದಿನ ಸರಕಾರದಲ್ಲಿಯೇ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದೀಗ ಈ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಂಡಿದ್ದು, ಆದಷ್ಟು ಶೀಘ್ರವೇ ಯೋಜನೆಯ ವರದಿ ಸಲ್ಲಿಸಲು ಸಂಬಂಧ ಪಟ್ಟ ಖಾಸಗಿ ಕಂಪನಿಗೆ ಸೂಚಿಸಲಾಗಿದೆ. ಇದರ ಡಿಪಿಆರ್ ಆದ ಮೇಲೆ ಅಂದಾಜು ವೆಚ್ಚ ತಿಳಿಯಲಿದೆ ಎಂದರು.

ಕೆಂಪೇಗೌಡ ಬಡಾವಣೆ ಸೈಟ್: ವಿಕಲಚೇತನರಿಗೆ ಕೋಟಾ ಹೆಚ್ಚಳ ಕೆಂಪೇಗೌಡ ಬಡಾವಣೆ ಸೈಟ್: ವಿಕಲಚೇತನರಿಗೆ ಕೋಟಾ ಹೆಚ್ಚಳ

ಬನಶಂಕರಿಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ

ಬನಶಂಕರಿಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ

ಬನಶಂಕರಿ 6ನೇ ಹಂತದಲ್ಲಿ 6 ಎಕರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಲು ತೀರ್ಮಾನಿಸಲಾಗಿದೆ. ತುಮಕೂರು ರಸ್ತೆ ದಾಸನಪುರ ಹಳ್ಳಿದಲ್ಲಿ ವಿಲ್ಲಾ ಕಟ್ಟಿದ್ದೇವೆ. ಇದಕ್ಕೆ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ‌ ಮುಂದಿನ ದಿನಗಳಲ್ಲಿ 250 ಕೋಟಿ ರು. ವೆಚ್ಚದಲ್ಲಿ ಇನ್ನಷ್ಟು ವಿಲ್ಲಾ ಕಟ್ಟಲು ಮಂಜೂರಾತಿ ಕೊಟ್ಟಿದ್ದೇವೆ.

25ಕ್ಕೆ ಕೆಂಪೇಗೌಡ ನಿವೇಶನ ಹಂಚಿಕೆ

25ಕ್ಕೆ ಕೆಂಪೇಗೌಡ ನಿವೇಶನ ಹಂಚಿಕೆ

ಕೆಂಪೇಗೌಡ ಬಡಾವಣೆಯಲ್ಲಿನ5ಸಾವಿರ ನಿವೇಶನವನ್ನು ಸೆ.25ಕ್ಕೆ ಲಾಟರಿ ಮೂಲಕ ಹಂಚಿಕೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಈ ವೇಳೆ 5 ಸಾವಿರ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

English summary
Deputy chief minister Dr.G. Parameshwara has announced that Bangalore Development Authority will give 5 percent subsidy on single house and 10 percent on more than ten house sale in its Mysuru road apartments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X