ಇನ್ನೈದು ವರ್ಷ, ಬೆಂಗಳೂರಲ್ಲಿ ಸಂಪೂರ್ಣ ಎಲೆಕ್ಟ್ರಿಕ್ ಬಸ್ ಸಂಚಾರ: ಪರಂ

ಬೆಂಗಳೂರು, ಆಗಸ್ಟ್ 29: ಇನ್ನು ಐದು ವರ್ಷದಲ್ಲಿ ಬೆಂಗಳೂರಲ್ಲಿ ಸಂಪೂರ್ಣವಾಗಿ ಡೀಸೆಲ್ ಮತ್ತು ಪೆಟ್ರೋಲ್ ಬಸ್‌ಗಳ ಸ್ಥಳದಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಸಂಚರಿಸಲಿವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ 8ನೇ ಬಸ್‌ ವರ್ಲ್ಡ್ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರು ಕಳೆದ 20 ವರ್ಷದಲ್ಲಿ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಐಟಿ-ಬಿಟಿ, ಕೈಗಾರಿಕೆ, ವಿಜ್ಞಾನ , ಸಂಶೋಧನೆ, ಏರೋ ಸ್ಪೇಸ್ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಬೆಂಗಳೂರು ಕೇಂದ್ರವಾಗಿದೆ. ಇಲ್ಲಿ ಮೂಲ ಸಮಸ್ಯೆ ಎಂದರೆ ಟ್ರಾಫಿಕ್. ಬೆಂಗಳೂರಿನಲ್ಲಿ ನಿತ್ಯ 70 ಲಕ್ಷ ವಾಹನಗಳು ಸಂಚರಿಸುತ್ತಿವೆ.

ಆದರೆ ಈ ವಾಹನಗಳಿಗೆ ವ್ಯವಸ್ಥಿತ ರಸ್ತೆಗಳಿಲ್ಲ. ಡೀಸೆಲ್, ಪೆಟ್ರೋಲ್ ಬಸ್‌ಗಳಿಂದ ವಾಯುಮಾಲಿನ್ಯ ಕೂಡ ಹೆಚ್ಚಾಗಿದೆ. ಅಷ್ಟೆ ಅಲ್ಲದೆ ಬಿಎಂಟಿಸಿಯಿಂದ‌ 6 ಸಾವಿರ ವಾಹನಗಳು ಸಂಚರಿಸುತ್ತಿವೆ. ಈ ಎಲ್ಲವೂ ಡೀಸೆಲ್ ಆಗಿರುವುದರಿಂದ ವಾಯುಮಾಲಿನ್ಯ ಕೂಡ ಹೆಚ್ಚುತ್ತವೆ. ಹೀಗಾಗಿ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸುವುದು ಉತ್ತಮ ಎಂದರು.

DCM assures e-bus in Bengaluru instead Petrol and Diesel bus!

ಹೈದರಾಬಾದ್‌ನಿಂದ ಬೆಂಗಳೂರಿಗೆ ವರ್ಷದ ತೆರಿಗೆ 26 ಲಕ್ಷ ಪಾವತಿಸಬೇಕಿದೆ. ಈ ನಿಯಮವನ್ನು ಸಡಿಲಿಸಿ, ತೆರಿಗೆ ಕಡಿಮೆ ಮಾಡುವ ಕುರಿತು ಚರ್ಚಿಸಲಾಗುವುದು ಎಂದರು. ಈ ಬಾರಿ ಬಸ್‌ ವರ್ಲ್ಡ್ ಬೆಂಗಳೂರಿನಲ್ಲಿ ನಡೆಯುತ್ತಿರುವುದು ನಮ್ಮ‌ನಗರಕ್ಕೆ ಹೆಮ್ಮೆಯ ವಿಚಾರ. ಇದರಿಂದ ಸಾರಿಗೆ ಕ್ಷೇತ್ರದಲ್ಲಿ ಹೂಡಿಕೆ ಕೂಡ ಹೆಚ್ಚುವ ನಿರೀಕ್ಷೆ ಇದೆ.

DCM assures e-bus in Bengaluru instead Petrol and Diesel bus!

ಈ ಪ್ರದರ್ಶನದಲ್ಲಿ ಚೈನಾ, ಕೊರಿಯಾ , ಆಸ್ಟ್ರೇಲಿಯಾ, ಬೆಲ್ಜಿಯಂನಿಂದ ಕಂಪನಿಗಳು ಆಗಮಿಸಿದ್ದು, ತಂತಮ್ಮ ತಂತ್ರಜ್ಞಾನವನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+