FIBA ಏಷಿಯಾ ಮಹಿಳಾ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಬೆಂಗಳೂರು ಸಜ್ಜು
ಬೆಂಗಳೂರು, ಅಕ್ಟೋಬರ್ 15: ಫೀಬಾ ಏಷಿಯಾ ಯು18 ಮಹಿಳಾ ಬಾಸ್ಕೆಟ್ ಬಾಲ್ ಪಂದ್ಯಾವಳಿ ಅಕ್ಟೋಬರ್ 28ರಿಂದ ನವೆಂಬರ್ 3ರವರೆಗೆ ಬೆಂಗಳೂರಲ್ಲಿ ನಡೆಯಲಿದ್ದು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಬಾಸ್ಕೆಟ್ ಬಾಲ್ ಪಂದ್ಯಾವಳಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.ಫೀಬಾ ಏಷಿಯಾ ಯು-18 ಮಹಿಳಾ ಬಾಸ್ಕೆಟ್ ಪಂದ್ಯಾವಳಿ ಕಂಠೀರವ ಸ್ಟೇಡಿಯಂ ಹಾಗೂ ಕೋರಮಂಗಲದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸತತ ಮೂರನೇ ಬಾರಿಗೆ ಬೆಂಗಳೂರಿನಲ್ಲಿ ಫೀಬಾ ಏಷಿಯಾ ಅಂಡರ್ 18 ಮಹಿಳಾ ಬಾಸ್ಕೆಟ್ ಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ.

ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಚೀನಾ, ಜಪಾನ್, ಮಲೇಶಿಯಾ, ಇಂಡೋನೇಶಿಯಾ ಸೇರಿದಂತೆ ಒಟ್ಟು 16 ರಾಷ್ಟ್ರದಿಂದ 16 ತಂಡಗಳ 320 ಆಟಗಾರ್ತಿಯರು ಆಗಮಿಸುತ್ತಿದ್ದಾರೆ.
ಎರಡು ಕೋಟಿ ರೂ. ವೆಚ್ಚದಲ್ಲಿ ಸ್ಟೇಡಿಯಂನನ್ನು ಮೇಲ್ದರ್ಜೆಗೇರಿಸಿದ್ದು, ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಇದಾಗಿದೆ. ಈ ಬಾರಿ ಪಂದ್ಯಾವಳಿ ವೀಕ್ಷಿಸಲು ಪ್ರವೇಶ ಶುಲ್ಕವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಕ್ಟೋಬರ್ 27 ಕ್ಕೆ ಇದರ ಉದ್ಘಾಟನೆ ನೆರವೇರಲಿದೆ. ರಾಜ್ಯಪಾಲ ವಿ.ಆರ್. ವಾಲಾ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.












Click it and Unblock the Notifications