ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪಾರ್ಟ್‍ಮೆಂಟ್ ಒಕ್ಕೂಟದ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಡಿಸಿಎಂ

|
Google Oneindia Kannada News

ಬೆಂಗಳೂರು, ಮೇ 20: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರು ಅಪಾರ್ಟ್‍ಮೆಂಟ್ ಒಕ್ಕೂಟದ ಪ್ರತಿನಿಧಿಗಳ ಜತೆ ಬುಧವಾರ ವಿಡಿಯೊ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ತಿಂಗಳಲ್ಲಿ ಅರ್ಧ ಗಂಟೆ ಕಾಲ ಅವರ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ನಗರದ 700 ಅಪಾರ್ಟ್‍ಮೆಂಟ್‍ಗಳು ಈ ಒಕ್ಕೂಟದಲ್ಲಿ ಸದಸ್ಯತ್ವ ಪಡೆದಿವೆ. ಒಂದೊಂದು ಕಡೆ ಒಂದೊಂದು ರೀತಿಯ ಸಮಸ್ಯೆಗಳು ಇದ್ದು ಆ ಬಗ್ಗೆ ಚರ್ಚಿಸಿ, ಪರಿಹಾರ ಕಲ್ಪಿಸಲಾಗುವುದು ಅಶ್ವತ್ಥನಾರಾಯಣ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವಾಜ್‌ಗೆ ಅವಾಕ್ಕಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!ಮಾಜಿ ಸಿಎಂ ಸಿದ್ದರಾಮಯ್ಯ ಅವಾಜ್‌ಗೆ ಅವಾಕ್ಕಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!

ಕೋವಿಡ್ ಸಂದರ್ಭದಲ್ಲಿ ಜನಜಾಗೃತಿ ಮೂಡಿಸುವುದರ ಜತೆಗೆ ಕೃಷಿ ಉತ್ಪನ್ನಗಳನ್ನು ನೇರವಾಗಿ ರೈತರಿಂದ ಖರೀದಿಸುವುದರ ಮೂಲಕ ಅಪಾರ್ಟ್‍ಮೆಂಟ್ ನಿವಾಸಿಗಳು ಮಾದರಿ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

DCM C N Ashwath Narayana Conducts Vedio Conference With Bengaluru Apartments Union

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ನಾಗರಾಜ ರಾವ್, ಪ್ರಧಾನ ಕಾರ್ಯದರ್ಶಿ ವಿಕ್ರಮ್ ಸೇರಿದಂತೆ ಇತರರು ಮಾತನಾಡಿದರು. ವಾರ್ಡ್ ಸಮಿತಿಗಳಲ್ಲಿ ಅಪಾರ್ಟ್‍ಮೆಂಟ್ ನಿವಾಸಿಗಳನ್ನೂ ಸದಸ್ಯರನ್ನಾಗಿ ಮಾಡಬೇಕು; ಬೆಂಗಳೂರು ಸಮುದಾಯ ಕಾರ್ಯಪಡೆ ರಚಿಸುವಂತೆಯೂ ಅವರು ಆಗ್ರಹಿಸಿದರು.

English summary
DCM C N Ashwath Narayana Conducts Vedio Conference With Bengaluru Apartments Union ahed of lockdown problem.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X