ಕಬ್ಬನ್ ಉದ್ಯಾನ ಅಭಿವೃದ್ಧಿ, ನಿರ್ಮಾಣ ಕೆಲಸಗಳಿಗೆ ಬ್ರೇಕ್: ಹೈಕೋರ್ಟ್ ಸ್ಥಳಾಂತರದ ಅಪ್ಡೇಟ್ಸ್: DCM
ಬೆಂಗಳೂರು, ಅಕ್ಟೋಬರ್ 26: ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿ ಮಾಡಲಾಗುವುದು. ಕಬ್ಬನ್ ಉದ್ಯಾನಗಳಲ್ಲಿ ನಿರ್ಮಾಣ ಕೆಲಸಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಳಾಗುವುದು ಎಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಹೈಕೋರ್ಟ್ ಸ್ಥಳಾಂತರ ವಿಚಾರ ಕುರಿತು ಮಾಹಿತಿ ನೀಡಿದರು.
ಕಬ್ಬನ್ ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಹವಾಲು ಸ್ವೀಕರಿಸಿ ಮಾತನಾಡಿದರು. ಕಬ್ಬನ್ ಉದ್ಯಾನವನದ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಕೋರಿದ್ದಾರೆ. ಅವರ ಬೇಡಿಕೆಯಂತೆ ಬಿಡಿಎಯಿಂದ 05 ಕೋಟಿ ರೂಪಾಯಿ ಹಣದಲ್ಲಿ ಅಭಿವೃದ್ಧಿ ಮಾಡಲಾಗುವುದು. ಅಗತ್ಯ ಉಳಿದ ಅನುದಾನವನ್ನು ತೋಟಗಾರಿಕೆ ಇಲಾಖೆ ಬಿಡುಗಡೆ ಮಾಡಲು ಸೂಚಿಸಲಾಗುವುದು. ಈ ಉದ್ಯಾನದ ಆವರಣದಲ್ಲಿ ಯಾವುದೇ ರೀತಿಯ ನಿರ್ಮಾಣ ಕೆಲಸಗಳಿಗೆ ಆಸ್ಪದ ನೀಡದೇ, ಉದ್ಯಾನಗಳ ರಕ್ಷಣೆ ಆಗಬೇಕೆಂದು ಹೇಳಿದರು.

"ಉದ್ಯಾನದಲ್ಲಿ ಸರ್ಕಾರದ ವತಿಯಿಂದಲೇ ಒಂದಷ್ಟು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ಇದೆ. ಕಬ್ಬನ್ ಪಾರ್ಕ್ ಅನ್ನು ಅತ್ಯುತ್ತಮವಾಗಿ ನಿರ್ವಹಿಸಲಾಗಿದೆ. ಮದುವೆಯಾದ ಹೊಸತರಲ್ಲಿ ನಾನು ನನ್ನ ಹೆಂಡತಿಯನ್ನ ಕಬ್ಬನ್ ಪಾರ್ಕ್ ತೋರಿಸಲು ಕರೆದುಕೊಂಡು ಬಂದಿದ್ದೆ. ವಿದ್ಯಾರ್ಥಿ ನಾಯಕನಾಗಿದ್ದಾಗಲೂ ಇಲ್ಲಿಗೆ ಬಂದು ಸಮಯ ಕಳೆಯುತ್ತಿದ್ದೆ ಎಂದು ಸ್ಮರಿಸಿದರು.
"ಅರಣ್ಯ ಇಲಾಖೆಯ ಜೊತೆ ಚರ್ಚೆ ಮಾಡಿ ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳಲ್ಲಿ ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ಮಾದರಿಯಲ್ಲಿ ಉದ್ಯಾನಗಳ ಅಭಿವೃದ್ಧಿ ಮಾಡಿ 'ಟ್ರೀ ಪಾರ್ಕ್' ಸ್ಥಾಪಿಸುವ ನಿರ್ಧರಿಸಲಾಗಿದೆ. ಉದ್ಯಾನದೊಳಗಿನ ಯಾವುದೇ ಮರಗಳನ್ನು ಕಡಿಯುವುದಿಲ್ಲ. ಇದರಿಂದಾಗಿ ಹಸಿರಿನ ರಕ್ಷಣೆ ಆಗುತ್ತದೆ. ಈಗಾಗಲೇ ಹತ್ತು ಕೋಟಿ ರೂಪಾಯಿಯಲ್ಲಿ ಲಾಲ್ ಬಾಗ್ ಉದ್ಯಾನ ಅಭಿವೃದ್ಧಿ ಘೋಷಿಸಲಾಗಿದೆ ಎಂದರು.
330 ಎಕರೆ ವಿಸ್ತೀರ್ಣದ ಕಬ್ಬನ್ ಪಾರ್ಕ್ ಈಗ 196 ಎಕರೆಗೆ ಕುಗ್ಗಿದೆ. ಇದನ್ನು ಉಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಪಾರ್ಕಿನ ಒಳಗೆ ಇರುವ ಎಲ್ಲಾ ಗುತ್ತಿಗೆ ಕಟ್ಟಡಗಳನ್ನು ತೆರವುಗೊಳಿಸಬೇಕು, ವಾಣಿಜ್ಯೀಕರಣ ಮಾಡಬೇಡಿ ಎಂದು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ನಾಗರಿಕರೊಬ್ಬರು ಮನವಿ ಸಲ್ಲಿಸಿದರು.
ಹೈಕೋರ್ಟ್ ಸ್ಥಳಾಂತರಕ್ಕೆ ಸ್ಥಳ ಪರಿಶೀಲನೆ
"ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಕಾರ್ಯಕ್ರಮಕ್ಕೆ ಹೋದ ಸಂದರ್ಭದಲ್ಲಿ ಹೈಕೋರ್ಟ್ ಸ್ಥಳಾಂತರಕ್ಕೆ 15- 20 ಎಕರೆ ಜಾಗ ನೀಡಿ ಎಂದು ವಕೀಲರು, ಮುಖ್ಯ ನ್ಯಾಯಮೂರ್ತಿಗಳು ಮನವಿ ಮಾಡಿದ್ದರು. ಸರ್ಕಾರದ ಮುಂದೆಯೂ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ನ್ಯಾಯಾಲಯದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹತ್ತಿರದಲ್ಲಿ ಎಲ್ಲಿ ಸ್ಥಳಾವಕಾಶ ದೊರೆಯಬಹುದು ಎಂದು ಪರಿಶೀಲನೆ ಮಾಡಲಾಗುವುದು. ಹಳೆಯ ಐತಿಹಾಸಿಕ ಕಟ್ಟಡವಾದ ಕಾರಣಕ್ಕೆ ಅದನ್ನು ಏನೂ ಮಾಡಲು ಸಾಧ್ಯವಿಲ್ಲ. ಆದರೆ ಸ್ಥಳವಾಕಾಶ ಚಿಕ್ಕದಿದೆ ಎಂದು ತಿಳಿಸಿದರು.

ನಗರದ ಹೊರಗೆ ಹೈಕೋರ್ಟ್ ಸ್ಥಾಪನೆ ಅಸಾಧ್ಯ. ಸೂಕ್ತ ಸ್ಥಳಗಳನ್ನು ಗುರುತಿಸಬೇಕಿದೆ. ಕಕ್ಷಿದಾರರು, ಲಾಯರ್ ಗಳಿಗೆ ಅನುಕೂಲವಾಗುವಂತಹ ಸ್ಥಳ ನೋಡಬೇಕಿದೆ. ಒಂದಷ್ಟು ಜನ ವಕೀಲರು ಭೇಟಿ ಮಾಡಿ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳುವ ಬಗ್ಗೆ ತಿಳಿಸಿದರು. ಒಂದಷ್ಟು ಕಾನೂನಾತ್ಮಕ ತೊಡಕುಗಳು ಇರುವ ಕಾರಣಕ್ಕೆ ಆನಂತರ ಅದರ ಬಗ್ಗೆ ಆಲೋಚನೆ ಮಾಡೋಣ ಎಂದು ತಿಳಿಸಿದ್ದೇನೆ.
ಕರ್ನೂಲ್ ಬಸ್ ದುರಂತ ಬೆನ್ನಲ್ಲೆ ಎಚ್ಚೆತ್ತ ಕರ್ನಾಟಕ: ಸಾರಿಗೆ ಸಚಿವರ ಮಹತ್ವದ ಸೂಚನೆ
"ಈ ಮೊದಲು ಎಲ್ಲಾ ಹೋರಾಟಗಳು, ಪ್ರತಿಭಟನೆಗಳು ಕಬ್ಬನ್ ಪಾರ್ಕ್ ಅಲ್ಲಿಯೇ ನಡೆಯುತ್ತಿತ್ತು. ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಇದನ್ನು ಸ್ವಾತಂತ್ರ್ಯ ಉದ್ಯಾನಕ್ಕೆ ಸ್ಥಳಾಂತರ ಮಾಡಲಾಯಿತು. ನಗರದ ಶ್ವಾಸಕೋಶದಂತೆ ಇರುವ ಈ ಉದ್ಯಾನ ಉಳಿಸಿಕೊಳ್ಳಲು ಏನು ಮಾಡಬೇಕೊ ಅದನ್ನು ನಾನು ಮಾಡುತ್ತೇನೆ. ಎಷ್ಟು ಗಂಟೆಗೆ ಯಾರು ಒಳ ಬಂದರು ಹೊರ ಹೋದರು ಎಂಬುದನ್ನು ದಾಖಲು ಮಾಡಲು ಕಬ್ಬನ್ ಪಾರ್ಕ್ ನಲ್ಲಿ ಹೈಟೆಕ್ ಕ್ಯಾಮೆರಾ ಗಳನ್ನು ಅಳವಡಿಕೆ ಮಾಡಬೇಕು. ಆಯುಕ್ತರ ಕಚೇರಿಯಲ್ಲಿಯೂ ಸಹ ಇದರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಆಸ್ತಿ ದಾಖಲೆಗಳನ್ನು ಸ್ಕ್ಯಾನ್, ಸುಭದ್ರ
"ಬೆಂಗಳೂರು ನಗರದ ಉತ್ತಮ ಆಡಳಿತಕ್ಕಾಗಿ 5 ಪಾಲಿಕೆಗಳನ್ನು ರಚಿಸಲಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಎಲ್ಲಾ ಆಸ್ತಿ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈ ಮೂಲಕ ಎಲ್ಲರ ಆಸ್ತಿಗಳನ್ನು ಭದ್ರಗೊಳಿಸಲಾಗುತ್ತಿದೆ. ಬಿ ಖಾತೆಯಿಂದ ಎ ಖಾತೆ ಬದಲಾವಣೆ ವಿಚಾರವಾಗಿ ಸಾವಿರಾರು ಜನರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೂ ಒಂದಷ್ಟು ಜನ ಟೀಕೆ ಮಾಡುತ್ತಿದ್ದಾರೆ. ಇದರಿಂದ ಅನೇಕರಿಗೆ ಉಪಯೋಗವಾಗಲಿದೆ. ಇದೊಂದು ಕ್ರಾಂತಿಕಾರಕ ಆಲೋಚನೆ ಎಂದು ವಿವರಿಸಿದರು.
"ಚಿಕ್ಕಪೇಟೆ ಸೇರಿದಂತೆ ಪ್ರಮುಖ ಪೇಟೆ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿ ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಇದರ ಸಾಧಕ ಬಾಧಕಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ತಿಳಿಸಲಾಗುವುದು. ರಸ್ತೆ ನಿಯಮ ಉಲ್ಲಂಘನೆ ಮಾಡಿದವರ ದಂಡದ ಪ್ರಮಾಣ ಹೆಚ್ಚಿಸಬೇಕು. ಇತರ ಎಲ್ಲ ಸಮಸ್ಯೆಗಳ ಬಗ್ಗೆ ಸ್ಥಳೀಯ ಶಾಸಕರ ಜತೆ ಚರ್ಚೆ ನಡೆಸಿ ಯಾವ ಅನುದಾನದ ಮೂಲಕ ಇವುಗಳನ್ನು ಬಗೆಹರಿಸಬಹುದು ಎಂದು ಚರ್ಚಿಸಲಾಗುವುದು ಎಂದು ತಿಳಿಸಿದರು.
"ಜೆಪಿ ಪಾರ್ಕ್, ಕೋರಮಂಗಲ, ಕೆ ಆರ್ ಪುರಂ, ಕೆಂಗೇರಿ ಭಾಗದ ಪಾರ್ಕ್ ಗಳಲ್ಲಿ ಸಾವಿರಾರು ಜನರ ಸಮಸ್ಯೆಗಳನ್ನು ಈಗಾಗಲೇ ಆಲಿಸಿದ್ದೇನೆ. ಲಾಲ್ ಬಾಗ್ ನಲ್ಲಿ 50 ಮನವಿಗಳು, ಜೆಪಿ ಪಾರ್ಕ್ ನಲ್ಲಿ 68 ಮನವಿಗಳು, ಕೆ.ಆರ್.ಪುರಂನಲ್ಲಿ 99 ಮನವಿಗಳು, ಕೋರಮಂಗಲ 42, ಕೆಂಗೇರಿಯಲ್ಲಿ 85, ಕಬ್ಬನ್ ಪಾರ್ಕ್ ನಲ್ಲಿ 35 ಮಂದಿ ಅರ್ಜಿಗಳನ್ನು ನೀಡಿದ್ದಾರೆ. ನಗರದಾದ್ಯಂತ ಹೆಚ್ಚು, ಹೆಚ್ಚು ಜನರು ಭಾಗವಹಿಸಬೇಕು ಎಂಬುದು ನಮ್ಮ ಅಭಿಲಾಷೆ. ಈ ಹಿಂದೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದ ಮೂಲಕ ಸಾವಿರಾರು ಸಮಸ್ಯೆಗಳನ್ನು ಬಗೆಹರಿಸಲಾಗಿತ್ತು. ಹೆಚ್ಚು ಜನರು ಭಾಗವಹಿಸಿದಷ್ಟು ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬಹುದು" ಎಂದರು.
"ಜಿಬಿಎ ಚುನಾವಣೆ ವೇಳೆ ಜನರಿಗೆ ಹೆಚ್ಚು ಸ್ಪಂದಿಸುವವರು ಅರ್ಜಿ ಸಲ್ಲಿಸಲಿ. ಅಂತಹವರಿಗೆ ಅವಕಾಶ ಕಲ್ಲಿಸಿಕೊಡಲಾಗುವುದು" ಎಂದರು. ಆಗ ನಾಗರಿಕರು ಕಳೆದ 10-15 ವರ್ಷಗಳಿಂದಲೂ ಒಬ್ಬರೇ ಪಾಲಿಕೆ ಸದಸ್ಯರಿದ್ದಾರೆ ಎಂದಾಗ, "ನಾನು 35 ವರ್ಷಗಳಿಂದ ಶಾಸಕನಿದ್ದೇನೆ" ಎಂದು ಹಾಸ್ಯ ಚಟಾಕಿ ಹಾರಿಸಿದರು.
ಬೆಸ್ಕಾಂನಿಂದ ಅಕ್ರಮ ಕಟ್ಟಡಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿ ಸಂಸ್ಥೆಗೆ ನಷ್ಟ ಉಂಟು ಮಾಡಲಾಗುತ್ತಿದೆ ಎನ್ನುವ ದೂರಿನ ಬಗ್ಗೆ ನಾಗರಿಕರು ಮನವಿ ಸಲ್ಲಿಸಿದರು. "ಕೂಡಲೇ ಇದರ ಬಗ್ಗೆ ಕ್ರಮ ವಹಿಸಲು ಸೂಚಿಸಲಾಗುವುದು. ದೇವನಹಳ್ಳಿ, ನೈಸ್ ರಸ್ತೆ ಸಂತ್ರಸ್ತ ರೈತರ ಪರವಾಗಿ ಡಿಸಿಎಂ ಅವರು ನಿಲ್ಲಬೇಕು" ಎಂದು ರೈತ ಮುಖಂಡರೊಬ್ಬರು ಮನವಿ ಮಾಡಿದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications