ಬೆಂಗಳೂರಿಗರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್!

ಬೆಂಗಳೂರಿನ ನಿವಾಸಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು - ನಾಲ್ಕು ತಿಂಗಳಿನಿಂದ ರಸ್ತೆ ಗುಂಡಿ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಇದೀಗ ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ.

ಬೆಂಗಳೂರಿನಲ್ಲಿ ಬರೋಬ್ಬರಿ 13,000 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಅಲ್ಲದೇ 550 ಕಿ.ಮೀ ಮುಖ್ಯರಸ್ತೆ ಅಭಿವೃದ್ಧಿಗೆ ₹1100 ಕೋಟಿ ಮೊತ್ತದ ಕಾರ್ಯಯೋಜನೆ ಸಿದ್ಧತೆಗೆ ಸೂಚನೆ ನೀಡಲಾಗಿದೆ. ಅಲ್ಲದೇ ವಾರ್ಡ್ ಮಟ್ಟದ ರಸ್ತೆ ಸುಧಾರಣೆಗೆ ಶಾಸಕರಿಗೆ ₹1100 ಕೋಟಿ ಹಂಚಲು ತೀರ್ಮಾನ ಮಾಡಲಾಗಿದೆ ಎಂದೂ ಇದೇ ಸಂದರ್ಭದಲ್ಲಿ ಹೇಳಿದ್ದಾರೆ, ಇದರ ವಿವರ ಮುಂದೆ ನೋಡೋಣ.

DCM D K Shivakumar Brings Good News for Bengaluru Residents

ಬೆಂಗಳೂರಿನಲ್ಲಿ ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ಯಾರು ಬೇಕಾದರೂ ಇದನ್ನು ಪರಿಶೀಲನೆ ಮಾಡಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಾಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಸಿಟಿ ರೌಂಡ್ ನಡೆಸಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ್ದಾರೆ.

ಸಿಟಿ ರೌಂಡ್ಸ್‌ನಂತರ ಮಾತನಾಡಿರುವ ಅವರು, ಅಧಿಕಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ 550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹1100 ಕೋಟಿ ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ ಎಂದು ಅವರು ನೀಡಿದ್ದಾರೆ.

ಅಲ್ಲದೇ ಬೆಂಗಳೂರಿನಲ್ಲಿ ಇನ್ನು ಮುಖ್ಯರಸ್ತೆಗಳ ಜಂಕ್ಷನ್‌ನಲ್ಲಿ ಕಾಂಕ್ರೀಟ್ ಹಾಕಲು 26 ದಿನಗಳ ಅಗತ್ಯವಿದ್ದು, ಟ್ರಾಫಿಕ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನಾನು ಬೆಂಗಳೂರು ರಸ್ತೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದೇನೆ. ಇನ್ನು ರಸ್ತೆಗುಂಡಿ ಮುಚ್ಚುವುದಕ್ಕಾಗಿ ₹750 ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇನ್ನು ಬೆಂಗಳೂರಿನ ವಾರ್ಡ್ ಮಟ್ಟದ ರಸ್ತೆಗಳ ಅಭಿವೃದ್ಧಿಗೆ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲು ₹1100 ಕೋಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಈ ಅನುದಾನವನ್ನು ರಸ್ತೆಗಳ ಸುಧಾರಣೆಗೆ ಬಳಸಲು ಸೂಚನೆ ನೀಡಲಾಗಿದೆ ದೇಶದಲ್ಲಿ ಯಾವುದೇ ನಗರದ ಯಾವುದೇ ಸಚಿವರು ರಸ್ತೆಯಲ್ಲಿ ಗುಂಡಿ ಕಂಡರೆ ಮಾಹಿತಿ ನೀಡಿ ಎಂದು ಸಾರ್ವಜನಿಕರಿಗೆ ಕರೆ ನೀಡಿರಲಿಲ್ಲ.

ಆದರೆ ನಾನು ಇದಕ್ಕಾಗಿ ಪ್ರತ್ಯೇಕ ಆಪ್ ಸಿದ್ಧಪಡಿಸಿ, ಪೋಲೀಸರ ಸಹಕಾರದಲ್ಲಿ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ಇಂತಹ ಪ್ರಯತ್ನ ನಡೆದಿರುವುದು ಕರ್ನಾಟಕದಲ್ಲಿ ಮಾತ್ರ. ಬೆಂಗಳೂರು ಜಾಗತಿಕ ನಗರ ಹೀಗಾಗಿ ಎಲ್ಲರೂ ಬೆಂಗಳೂರು ರಸ್ತೆಗುಂಡಿಗಳ ಬಗ್ಗೆ ಮಾತ್ರ ಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.

ಕಸ ಹಾಕಿರುವವನನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿ: ಇನ್ನು ಬೆಂಗಳೂರಿನಲ್ಲಿ ಕಸ ಸಮಸ್ಯೆಗೂ ಪರಿಹಾರ ಕಂಡುಕೊಳ್ಳುವುದರ ಬಗ್ಗೆಯೂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆಯೂ ಇದೆ. ಇಂದು ಕಾಂಗ್ರೆಸ್ ಕಚೇರಿಗೆ ಹೋಗುವಾಗ ಜಯಮಹಲ್ ರಸ್ತೆಯಲ್ಲಿ ಯಾರೋ ಒಂದು ಲೋಡ್ ಕಸ ಸುರಿದಿದ್ದಾರೆ. ನಿನ್ನೆ ರಾತ್ರಿ ಇರಲಿಲ್ಲ. ರಾತ್ರೊರಾತ್ರಿ ಬಂದು ಸುರಿದಿದ್ದಾರೆ ಎಂದರು.

ಈ ಕಸ ಸುರಿದವರು ಯಾರು ಎಂದು ಸಿಸಿಟಿವಿಯಲ್ಲಿ ಪತ್ತೆ ಮಾಡಿ ಅವನ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಅವನ ಗಾಡಿ ಸೀಜ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. "ಸಾರ್ವಜನಿಕರು ಸಹ ನಮ್ಮ ನಗರದ ಕಸದ ಸಮಸ್ಯೆಗೆ ನಮಗೆ ಸಹಕಾರ ನೀಡುತ್ತಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+