• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿದ್ಧಾಂತ ಬೇರೆ ಆಗಿದ್ದರೂ ಅನಂತ ಆತ್ಮೀಯರಾಗಿದ್ದರು: ಪರಮೇಶ್ವರ

|

ಬೆಂಗಳೂರು, ನವೆಂಬರ್ 12: ಕೇಂದ್ರ ಸಚಿವ ಅನಂತ ಕುಮಾರ್ ಅವರು ಬಿಜೆಪಿ ಪಕ್ಷದಲ್ಲಿದ್ದರೂ ನನಗೆ ಉತ್ತಮ ಸ್ನೇಹಿತರಾಗಿದ್ದರು. ಅವರ ಅಗಲಿಕೆ ವೈಯಕ್ತಿಯವಾಗಿ ದುಃಖ ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಸಂತಾಪ ಸೂಚಿಸಿದ್ದಾರೆ.

ಅನಂತ ಕುಮಾರ್ ನಮ್ಮ ನೆನಪಿನಿಂದ ಎಂದಿಗೂ ಮಾಸಲಾರರು: ಕುಮಾರಸ್ವಾಮಿ

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನಂತ ಕುಮಾರ್ ನನಗೆ ಅತ್ಯಂತ ಆತ್ಮೀಯರು. ಆರು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಜನ ಪರ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.‌ ಅವರೊಬ್ಬ ಸಜ್ಜನ‌ ರಾಜಕಾರಣಿಯಾಗಿದ್ದರು. ರಾಜಕೀಯ ಸಿದ್ಧಾಂತ ಬೇರೆಯೇ ಇದ್ದರೂ ಸಾರ್ವಜನಿಕ ಬದುಕಿನಲ್ಲಿ‌ ಮಾದರಿಯಾಗಿದ್ದಾರೆ.

ಅನಂತತಾನಂತವಾಗಿ.... ಅಗಲಿದ ನಾಯಕಗೆ ಗಣ್ಯರ ಅಶ್ರುತರ್ಪಣ

ಬಹುಶಃ ಅವರ ಆರೋಗ್ಯದ ಬಗ್ಗೆ ಮೊದಲೇ ತಿಳಿದಿದ್ದರೆ ಇಂಥ ಅನಾಹುತವಾಗುತ್ತಿರಲಿಲ್ಲ. ಇತ್ತೀಚೆಗೆ ವಾಜಪೇಯಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಇಬ್ಬರು ಅಕ್ಕ ಪಕ್ಕ ಕುಳಿತಿದ್ದವು. ಆಗಲೂ ಅವರು ಆರೋಗ್ಯವಂತರಾಗಿಯೇ ಕಂಡರು. ಅವರ ಕೆಲಸವನ್ನು ಪಕ್ಷಾತೀತವಾಗಿ ಎಲ್ಲರೂ ಸ್ಮರಿಸುವಂಥದ್ದು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಶೋಕ ವ್ಯಕ್ತಪಡಿಸಿದರು.

English summary
Deputy chief minister Dr. G. Parameshwar has said that he had differences by ideology not by friendship with union minister Ananth Kumar and both were good friends for the decades
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X