Brand Bengaluru: ಬೆಂಗಳೂರು ಅಭಿವೃದ್ಧಿಗೆ ನಾನಾ ಯೋಜನೆಗಳು ಸಿದ್ಧ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡುತ್ತಿದೆ. ಅದ್ರಲ್ಲೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 'ಬ್ರಾಂಡ್ ಬೆಂಗಳೂರು' ಕನಸಿಗೆ ನೀರೆರೆಯುತ್ತಿದ್ದಾರೆ. ಇದೀಗ ಆ ಕುರಿತು ಸಭೆಗಳ ಮೇಲೆ ಸಭೆಗಳನ್ನ ನಡೆಸಲಾಗುತ್ತಿದ್ದು, ಇಂದು ಕೂಡ ಹೀಗೆ ಮಹತ್ವದ ಮೀಟಿಂಗ್ ಮಾಡಿದ್ದಾರೆ ಡಿಸಿಎಂ.

ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗೆ ಅಲೆಯುವ ಅಗತ್ಯ ಇರಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆ ತಲುಪಿಸುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ ಎಂದು ತಿಳಿಸಿದರು. ಖಾತೆ ಎಂದು ಕರೆಯುವ ಬದಲು ಅದಕ್ಕೆ ಬೇರೆ ಹೆಸರು ಇಟ್ಟು, ಎಲ್ಲ ಆಸ್ತಿ ದಾಖಲೆಗಳನ್ನು ಒದಗಿಸಲಾಗುವುದು. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಹಳ್ಳಿಗಳಲ್ಲಿ ಮನೆ ಬಾಗಿಲಿಗೆ ಪಹಣಿ ನೀಡುವ 'ಭೂಮಿ' ವ್ಯವಸ್ಥೆ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಬೆಂಗಳೂರಲ್ಲಿ ಮನೆ ಬಾಗಿಲಲ್ಲೇ ಆಸ್ತಿ ದಾಖಲೆ ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದೆಂದು ಮಾಹಿತಿ ನೀಡಿದ್ದಾರೆ.

DCM DK Shivakumar

ತೆರಿಗೆ ಪಾವತಿಸದಿದ್ದರೆ ಸಂಕಷ್ಟ!

ಆಸ್ತಿ ತೆರಿಗೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆಯಾಗಿದ್ದು, ಕಾನೂನು ರೀತಿಯಲ್ಲಿ ತೆರಿಗೆ ಕಟ್ಟುತ್ತಿರುವವರಿಗೆ ತೊಂದರೆಯಾಗುತ್ತಿದೆ. ತೆರಿಗೆ ಕಟ್ಟದವರಿಗೆ ರಕ್ಷಣೆ ಸಿಗುತ್ತಿದೆ ಎಂಬ ವಿಚಾರ ಪ್ರಸ್ತಾಪಿಸಲಾಯಿತು. ನಾವು ಮನೆ ಬಾಗಿಲಲ್ಲೇ ಆಯಾ ಆಸ್ತಿ ದಾಖಲೆಗಳನ್ನು ತಲುಪಿಸಿದರೆ, ಯಾರ ಬಳಿ ಎಷ್ಟು ಆಸ್ತಿ ಇದೆ ಎಂಬ ಸ್ಪಷ್ಟ ಚಿತ್ರಣ ಸಿಗುತ್ತದೆ. ಆಗ ಯಾರೂ ಕೂಡ ಆಸ್ತಿ ತೆರಿಗೆ ಪಾವತಿಸದೇ ತಪ್ಪಿಸಿಕೊಳ್ಳಲು ಆಗಲ್ಲ. ಆಸ್ತಿ ತೆರಿಗೆ ವಿಚಾರದಲ್ಲಿ ದೊಡ್ಡವರು, ಸಣ್ಣವರು ಎಂಬ ಬೇಧ ಮಾಡುವುದಿಲ್ಲ. ಈ ವಿಚಾರದಲ್ಲಿ ಯಾರು ತೆರಿಗೆ ಪಾವತಿಸಿಲ್ಲ ಎಂದು ಮ್ಯಾಪಿಂಗ್ ಮಾಡುತ್ತೇವೆ ಎಂದು ಡಿಸಿಎಂ ತಿಳಿಸಿದರು.

ಮಕ್ಕಳಿಂದಲೂ ಸಲಹೆ ಪಡೆಯಲಿದೆ ಸರ್ಕಾರ!

ಅಲ್ಲದೆ ನಮ್ಮ ಸಂಪನ್ಮೂಲ ವೃದ್ಧಿಸಿಕೊಳ್ಳದಿದ್ರೆ ಬೆಂಗಳೂರು ಅಭಿವೃದ್ಧಿ ಸಾಧ್ಯವಿಲ್ಲ. ನಾವು ಕೈಗೆತ್ತಿಕೊಳ್ಳಲು ಮುಂದಾಗಿರುವ ಬೃಹತ್ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣವನ್ನೂ ಮಾಡಿಕೊಳ್ಳಬೇಕು. ಹೀಗಾಗಿ ಎಲ್ಲರೂ ತೆರಿಗೆ ಪಾವತಿಸುವಂತೆ ನೋಡಿಕೊಳ್ಳಬೇಕು. ಇನ್ನು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಮಕ್ಕಳ ಅಭಿಪ್ರಾಯ ಪಡೆಯಲು ಸಲಹೆ ಬಂದಿದ್ದು, ಮಕ್ಕಳ ಸಲಹೆಯನ್ನು ಸರ್ಕಾರ ಪರಿಗಣಿಸಲಿದೆ. ಈ ವಿಚಾರವಾಗಿ ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿಗಳ ಜೊತೆ ಸಭೆ ಆಯೋಜಿಸುವಂತೆ ಒಂದು ಸಂಸ್ಥೆಗೆ ಸೂಚನೆ ನೀಡಿದ್ದೇನೆ ಎಂದು ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.

ಬೀದಿ ಬದಿ ವ್ಯಾಪಾರಿಗಳ ಹಿತಾಸಕ್ತಿಗೆ ಪೂರಕ

ಎಲ್ಲರ ಅಭಿಪ್ರಾಯ ಪಡೆಯಲು ಸಾಧ್ಯವಾಗದ ಕಾರಣ ಡಿಬೇಟ್ ಮೂಲಕ ಬೆಂಗಳೂರಿನ ವಿಚಾರವಾಗಿ ಮಕ್ಕಳು ಯಾವ ರೀತಿ ಕನಸು ಕಾಣುತ್ತಿದ್ದಾರೆ ಎಂದು ಅವರ ಅಭಿಪ್ರಾಯ ತಿಳಿಯಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ಕಾನೂನು ಇದ್ದು, ಫುಟ್ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು, ಪಾದಾಚಾರಿಗಳಿಗೂ ಅನುಕೂಲ ಆಗುವಂತೆ ನೀತಿ ರೂಪಿಸಲಾಗುವುದು ಎಂದರು.

ತ್ಯಾಜ್ಯ ವಿಲೇವಾರಿ ಬಗ್ಗೆ ಕ್ರಮ

ಇನ್ನು ತ್ಯಾಜ್ಯ ವಿಲೇವಾರಿ ವಿಚಾರ ಕೂಡ ಹಿಂದಿನ ಸಭೆಯಲ್ಲಿ ಚರ್ಚೆಯಾಗಿದ್ದು ಎಲ್ಲಿಂದರಲ್ಲಿ ರಸ್ತೆಗಳ ಪಕ್ಕದಲ್ಲಿ ತ್ಯಾಜ್ಯಗಳನ್ನ ಸುರಿಯುತ್ತಿದ್ದಾರೆ. ಈ ವಿಚಾರವಾಗಿ ಪಾಲಿಕೆ ಅಧಿಕಾರಿಗಳನ್ನ ಸ್ಥಳಕ್ಕೆ ಕರೆದುಕೊಂಡು ಹೋಗಿ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದೇನೆ. ರಾಜ್ಯದಲ್ಲಿ ವಾಹನಗಳ ಮಾಲೀಕರ ಸಂಘದ ಜೊತೆ ಮಾತನಾಡಿದ್ದು ಎಲ್ಲೆಂದರಲ್ಲಿ ಜನ ತ್ಯಾಜ್ಯ ವಿಲೇವಾರಿ ಮಾಡದಂತೆ ಸೂಚನೆ ನೀಡಿದ್ದೇನೆ. ಯಾವ ವಾಹನಗಳು ಎಲ್ಲಿ ತ್ಯಾಜ್ಯ ಸಂಖ್ಯೆ ಅವುಗಳನ್ನು ಎಲ್ಲಿ ವಿಲೇವಾರಿ ಮಾಡಲಾಗಿದೆ ಎಂಬ ದಾಖಲೆ ಸಲ್ಲಿಸುವ ಬಗ್ಗೆಯೂ ಸೂಚನೆ ನೀಡಿದ್ದೇನೆ.

ಕ್ಯಾಮೆರಾ ಅಳವಡಿಸಲು ಕ್ರಮ!

ಎಲ್ಲೆಲ್ಲಿ ಹೆಚ್ಚಾಗಿ ಘನ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ ಎಂಬ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಯಾವ ವಾಹನಗಳು ತ್ಯಾಜ್ಯ ವಿಲೇವಾರಿ ಮಾಡಿದೆ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗಳೂರಿನ ಸ್ವಚ್ಛತೆ ಕಾಪಾಡುವ ವಿಚಾರವಾಗಿ ಈ ತಿಂಗಳಲ್ಲಿ ಎರಡು ಮೂರು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು. ಈಗ ಅದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ.

ಸಂಘ, ಸಂಸ್ಥೆಗಳ ಜೊತೆಗೂ ಚರ್ಚೆ

ಇನ್ನು ಬೆಂಗಳೂರಿನಲ್ಲಿ ಜಾಹೀರಾತು ವಿಚಾರವಾಗಿ ನೂತನ ನೀತಿಯನ್ನು ರಚಿಸಲಾಗುವುದು. ಆ ಮೂಲಕ ಹೆಚ್ಚಿನ ಆದಾಯ ಬರುವಂತೆ ಮಾಡಲಾಗುವುದು. ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಸುಮಾರು 6 ರಿಂದ 7 ವಿಭಾಗಗಳಲ್ಲಿ ಸಾರ್ವಜನಿಕರಿಂದ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಈ ಸಲಹೆಗಳ ಪರಿಶೀಲನೆ ಹಾಗೂ ವರ್ಗೀಕರಣಕ್ಕೆ ಕೆಲವು ಸಂಘ ಸಂಸ್ಥೆಗಳ ಜೊತೆ ಚರ್ಚೆ ಮಾಡಲಾಗಿದೆ. ಇಂದಿನ ಸಭೆಯಲ್ಲಿ ಸರ್ಕಾರ ನಾಗರಿಕರ ಸಮಸ್ಯೆಗಳನ್ನು ಆಗಾಗ ಆಲಿಸುತ್ತಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗ್ರಾಮ ಸಭೆ ಮಾದರಿ ಮೀಟಿಂಗ್

ಹಳ್ಳಿಗಳಲ್ಲಿ ಗ್ರಾಮ ಸಭೆಗಳ ಮಾದರಿಯಲ್ಲಿ ವಾರ್ಡ್ ಮಟ್ಟದಲ್ಲಿ ವಾರ್ಡ್ ಸಭೆ ಮಾಡಬೇಕು. ಆ ಮೂಲಕ ಸ್ಥಳೀಯ ನಾಗರೀಕರ ಅಭಿಪ್ರಾಯ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ರಸ್ತೆ ಗುಂಡಿ ವಿಚಾರವಾಗಿ ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ಮಾಡಲಾಗುವುದು. ಈ ವಿಚಾರವಾಗಿ ಗೃಹಮಂತ್ರಿಗಳ ಜೊತೆ ಮಾತನಾಡಿದ್ದು, ಕಲಾಪ ಮುಗಿದ ಬಳಿಕ ಸಭೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+