‘ಬ್ರ್ಯಾಂಡ್ ಬೆಂಗಳೂರು’ ನಿರ್ಮಾಣಕ್ಕೆ ಉಪಮುಖ್ಯಮಂತ್ರಿ ಪಣ!

ಬೆಂಗಳೂರು: ರಾಜ್ಯ ರಾಜಧಾನಿಗೆ ಹೊಸ ರೂಪ ನೀಡುವ ಕಾರ್ಯಕ್ಕೆ ರಾಜ್ಯ ಸರ್ಕಾರವೂ ಪಣತೊಟ್ಟಿದೆ. ಈ ಕಾರಣಕ್ಕೆ ಸಭೆಗಳ ಮೇಲೆ ಸಭೆ ನಡೆಸಿ ಹಲವು ನಿರ್ಧಾರ ಕೈಗೊಳ್ತಿದೆ ರಾಜ್ಯ ಸರ್ಕಾರ. ಇದೀಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಕುರಿತು ಪ್ರಮುಖ ಸಭೆ ನಡೆಸಿದ್ದಾರೆ. ಅದರ ಕಂಪ್ಲೀಟ್ ಮಾಹಿತಿ ಇಲ್ಲಿ ತಿಳಿಯಿರಿ.

ಬೆಂಗಳೂರಿಗೆ ಹೊಸ ರೂಪ ನೀಡಿ ಸಮಗ್ರ ಅಭಿವೃದ್ಧಿ, ಬ್ರ್ಯಾಂಡ್ ಬೆಂಗಳೂರು ಬಗ್ಗೆ ಇಂದು ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜತೆ ಡಿಸಿಎಂ ಸಭೆ ನಡೆಸಿದರು. ಇದು ಮೊದಲ ಹಂತದ ಸಭೆ. ಈ ಸಭೆಯಲ್ಲಿ ಅನೇಕ ಮೌಲ್ಯಯುತ ಸಲಹೆ ಬಂದಿದೆ. ಎಲ್ಲರ ಅನುಭವ ಅಭಿಪ್ರಾಯ ಪಡೆಯುತ್ತಿದ್ದೇನೆ. ಮೊದಲು ಎಲ್ಲ ಪಕ್ಷಗಳ ಶಾಸಕರ ಅಭಿಪ್ರಾಯ ಪಡೆದಿದ್ದೆ. ಈಗ ಕೈಗಾರಿಕೆ ಬಂಡವಾಳ ಹೂಡಿಕೆದಾರರ ಅಭಿಪ್ರಾಯ ಪಡೆದಿದ್ದೇನೆ. ಮುಂದೆ ಮತ್ತೊಂದು ಹಂತದ ಸಭೆ ಮಾಡುತ್ತೇನೆ. ಮುಂದಿನ ವಾರ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

DCM Dk Shivakumar

ಬೆಂಗಳೂರು ಅಭಿವೃದ್ಧಿಗೆ ರಣತಂತ್ರ ಸಿದ್ಧ?

ಅಲ್ಲದೆ ಇದೇ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತು ಹಲುವ ಮಾಹಿತಿಯನ್ನೂ ನೀಡಲಾಗಿದೆ. ಅಧಿಕಾರಿಗಳು & ಬೆಂಗಳೂರಿನ ಪ್ರಮುಖರನ್ನ ಸೇರಿ ಒಂದು ಸಮಿತಿ ರಚಿಸಿ, ಬೆಂಗಳೂರಿನ ಅಭಿವೃದ್ಧಿಗೆ 6 ತಿಂಗಳಲ್ಲಿ ನೀಲನಕ್ಷೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು. ಸಭೆಗೆ ಬಂದವರು ತಮ್ಮ ಸ್ವಾರ್ಥ ಬಿಟ್ಟು, ಸಮಾಜಕ್ಕೆ ತಮ್ಮ ಕೊಡುಗೆ ನೀಡಲು ಸರ್ಕಾರದ ಜೊತೆಗೆ ಕೈ ಜೋಡಿಸಿ ಸಲಹೆ ನೀಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ?

ಹೈ ಡೆನ್ಸಿಟಿ ಕಾರಿಡಾರ್, ಕಸ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ಉತ್ತಮ ಗುಣಮಟ್ಟದ ಶಿಕ್ಷಣ, ಕೊಳಗೇರಿ ಪ್ರದೇಶ ಅಭಿವೃದ್ಧಿ, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ, ಕೆಲವು ಪ್ರದೇಶ 24/7 ತೆರೆಯಲು, ವಾಹನ ನಿಲುಗಡೆ, ಭ್ರಷ್ಟಾಚಾರ ನಿಯಂತ್ರಣ ಸೇರಿದಂತೆ ಅನೇಕ ಸಲಹೆ ನೀಡಿದ್ದಾರೆ ಎಂದು ಡಿಸಿಎಂ ಡಿಕೆಶಿ ತಿಳಿಸಿದರು.

DCM Dk Shivakumar

'ಒಂದೇ ದಿನದಲ್ಲಿ ಬದಲಾವಣೆ ಸಾಧ್ಯವಿಲ್ಲ'

ಆರ್ಥಿಕತೆ ಗಮನದಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಬೆಂಗಳೂರಿನ ಸ್ವಾಭಿಮಾನ, ಗೌರವ ಉಳಿಸಲು ಸಲಹೆ ಕೇಳಿದ್ದೇನೆ. ನಾನು ಕೆಲವು ಸಲಹೆ ಒಪ್ಪುತ್ತೇನೆ. ಎಲ್ಲರೂ ನಮಗೆ ಸಲಹೆ ನೀಡಿದ್ದು, ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ. ಫೆರಿಫೆರಲ್ ರಿಂಗ್ ರಸ್ತೆ ಜಾರಿಗೆ ಒತ್ತು ನೀಡಲಾಗುವುದು. ಬೆಂಗಳೂರು ಯೋಜಿತ ನಗರ ಅಲ್ಲ. ಒಂದೇ ದಿನದಲ್ಲಿ ಬದಲಾವಣೆ ಸಾಧ್ಯವಿಲ್ಲ. ಎಲ್ಲರ ಕಷ್ಟಪಟ್ಟು ಉಳಿಸಿಕೊಂಡಿರುವ ಆಸ್ತಿ ಬಗ್ಗೆ ಗೌರವಿಸಬೇಕು ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಹಾಗೂ 2 ಮತ್ತು 3ನೇ ದರ್ಜೆ ನಗರಗಳ ಬಗ್ಗೆ ಗಮನಹರಿಸಿ ಬೆಂಗಳೂರಿನ ಮೇಲಿನ ಒತ್ತಡ ಇಳಿಸಬೇಕಿದೆ. ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ನನ್ನ ಮೇಲೆ, ನಮ್ಮ ಸರ್ಕಾರ, ಮುಖ್ಯಮಂತ್ರಿಗಳ ಮೇಲೆ ಇವರು, ಜನರು ನಂಬಿಕೆ ಇಟ್ಟಿದ್ದಾರೆ. ನಾವು ಆ ನಂಬಿಕೆ ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ. ಅಲ್ಲದೆ ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಟಾಸ್ಕ್ ಫೋರ್ಸ್ ರಚನೆ ಕುರಿತು, ಅನೇಕ ವರ್ಗ, ಸಂಘ ಸಂಸ್ಥೆಗಳ ಪ್ರಮುಖರ ಜೊತೆ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅವರು ಈ ಬಗ್ಗೆ ಸಲಹೆ ನೀಡಿದ್ದು, ನಾನು ಸಾರ್ವಜನಿಕ ಅಭಿಪ್ರಾಯ ಪಡೆದು ನಂತರ ಸರ್ಕಾರದ ವತಿಯಿಂದ ತೀರ್ಮಾನ ಮಾಡುತ್ತೇವೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+