DK Shivakumar: ಮಳೆ ಹಾನಿ ಸ್ಥಳಗಳಿಗೆ ಡಿಸಿಎಂ ಭೇಟಿ, ಬಿಬಿಎಂಪಿ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ

ಬೆಂಗಳೂರು, ಆಗಸ್ಟ್ 12: ಬೆಂಗಳೂರಿನಲ್ಲಿ ನೆನ್ನೆ ಗಾಳಿ ಸಹಿತ ಬಂದ ಮಳೆಗೆ ಮರ ಬಿದ್ದು ನಾಲ್ವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಡಿಸಿಎಂ ಡಿಕೆ ಶಿವಕುಮಾರ ಅವರು, ಆಸ್ಪತ್ರೆ ಎಲ್ಲ ಖರ್ಚನ್ನು ಪಾಲಿಕೆ ಭರಿಸಲಿದೆ. ರಸ್ತೆಗುಂಡಿಗಳು ಹೆಚ್ಚಾಗಿದ್ದು, ಸಾರ್ವಜನಿಕರು ಫೋಟೋ ತೆಗೆದು ಬಿಬಿಎಂಪಿ ಆಪ್ ನಲ್ಲಿ ಹಾಕಿದರೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಸೋಮವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

DCM DK Shivakumar Inspect Damage Areas in Bengaluru Promises Swift Action

ಈ ವೇಳೆ ಮಾರುತಿ ಸೇವಾನಗರದಲ್ಲಿ ಸೋಮವಾರ ಬೆಳಗ್ಗೆ ಮರ ಬಿದ್ದ ಕಾರಣಕ್ಕೆ ನಾಲ್ವರು ಗಾಯಗೊಂಡಿದ್ದರು. ಅವರ ಆರೋಗ್ಯ ವಿಚಾರಿಸಿದರು. ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜಕಾಲುವೆ ಸಚ್ಛತೆಯಲ್ಲಿ ಬಿಬಿಎಂಪಿ ನಿರ್ಲಕ್ಷ್ಯ

ಮಳೆ ಹಾನಿಗೆ ತುತ್ತಾದ ಹಲವು ಪ್ರದೇಶಗಳ ಡಿಸಿಎಂ ಶಿವಕುಮಾರ್ ಮಾಹಿತಿ ಪಡೆದರು. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಎಲ್ಲಾ ಕಡೆ ರಸ್ತೆ ಬದಿ ಚರಂಡಿಗಳು ಹಾಗೂ ಒಳಚರಂಡಿಗಳನ್ನು ಸ್ವಚ್ಚಗೊಳಿಸಬೇಕು ಎಂದರು.

ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ರಾಜಕಾಲುವೆ ವೀಕ್ಷಣೆ ಮಾಡಿದ ಅವರು ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಸ್ವಚ್ಚತೆಯಲ್ಲಿ ನಿರ್ಲಕ್ಷ್ಯವಹಿಸಿದ್ದಾರೆ. ಎಲ್ಲೆಲ್ಲಿ ಬಿಎಂಆರ್ ಸಿಎಲ್ ಅವರು ಕಾಮಗಾರಿ ನಡೆಸುವಾಗ ಕಟ್ಟಡ ತ್ಯಾಜ್ಯಗಳು ರಾಜಕಾಲುವೆಯಲ್ಲಿ ಉಳಿದಿದ್ದರೇ ಕೂಡಲೇ ತೆರವು ಮಾಡಬೇಕು. ಕೆಲವೊಂದು ಕಡೆ ನೀರು ಹರಿಯುವ ಜಾಗಗಳು ಕಿರಿದಾಗಿದ್ದು ಅವುಗಳ ಅಗಲೀಕರಣ ಮಾಡುವಂತೆ ತಿಳಿಸಿದರು.

DCM DK Shivakumar Inspect Damage Areas in Bengaluru Promises Swift Action

ರಾಜಕಾಲುವೆಗೆ ತಡೆಗೋಡೆ, ರಸ್ತೆ ನಿರ್ಮಾಣ

ಇದೇ ವೇಳೆ ಸುದ್ದಿಗಾರರ ಹಲವು ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್ ಅವರು, ನಗರ ಸಂಚಾರದ ವೇಳೆ ಸಾಕಷ್ಟು ರಸ್ತೆಗುಂಡಿಗಳು ಕಂಡು ಬಂದವು. ಮಳೆ ಹೆಚ್ಚಾದ ಕಾರಣಕ್ಕೆ ಸುಮಾರು ಅರ್ಧ ಅಡಿಗೂ ಆಳದ ಗುಂಡಿಗಲಾಗಿವೆ. ಇವುಗಳನ್ನು ಕೂಡಲೇ ಮುಚ್ಚುವ ಕೆಲಸ ಮಾಡಿದೆ ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ರಾಜಕಾಲುವೆಗಳಿಗೆ ರಕ್ಷಣಾ ಗೋಡೆಗಳನ್ನು ಎಲ್ಲಾ ಕಡೆ ನಿರ್ಮಾಣ ಹಾಗೂ ರಸ್ತೆ ನಿರ್ಮಾಣದ ತೀರ್ಮಾನ ಮಾಡಲಾಗಿದೆ. ಅಲ್ಲದೇ ಅನೇಕ ಕಡೆ ರಸ್ತೆ ಫುಟ್ ಪಾತ್ ಗಳಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯಲಾಗಿದೆ. ಇದರ ಬಗ್ಗೆ ಕ್ರಮವಹಿಸಲಾಗುವುದು. ಅನೇಕ ಉದ್ಯಾನಗಳಲ್ಲೂ ಕಟ್ಟಡ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಇದರ ಬಗ್ಗೆ ಗಮನಹರಿಸಲಾಗುವುದು.

ಒಣಗಿದ್ದ ಬೃಹತ್ ಮರದ ತೆರವಿಗೆ ಈ ಹಿಂದೆಯೇ ಸಾರ್ವಜನಿಕರು ದೂರು ನೀಡಿದ್ದರು ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಗರಾದ್ಯಂತ ಇರುವ ಒಣಗಿದ ಮರಗಳ ತೆರವು ಕೂಡಲೇ ಮಾಡಲಾಗುವುದು. ಎಲ್ಲೆಲ್ಲಿ ತೆರವು ಮಾಡಬೇಕು ಎನ್ನುವ ಬಗ್ಗೆ ಪಟ್ಟಿ ತಯಾರಿಸಿ ಮುಂದುವರೆಯಲಾಗುವುದು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ಬಗ್ಗೆ ಸಭೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+