Bengaluru Second Airport: ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಬಿಗ್ ಫೈಟ್: ಸಾಹುಕಾರ್ ಎಂಟ್ರಿ: ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಏಪ್ರಿಲ್ 14: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣ ಆಗುತ್ತೆ ಎನ್ನುವ ಖುಷಿ ವಿಚಾರ ಒಂದು ಕಡೆಯಾದ್ರೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿಯೇ ಕರ್ನಾಟಕದ ಆಡಳಿತರೂಢ ಕಾಂಗ್ರೆಸ್‌ನಲ್ಲಿಯೇ ತೀವ್ರ ಜಟಾಪಟಿ ಶುರುವಾಗಿದೆ. ವಿಮಾನ ನಿಲ್ದಾಣ ನಿರ್ಮಾಣ ಈಗ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದು, ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಎಲ್ಲಿ ಸ್ಥಾಪಿಸಬೇಕು ಅಂತ ಕಾಂಗ್ರೆಸ್‌ನಲ್ಲಿ ಸಚಿವರ ನಡುವೆ ಪೈಪೋಟಿ ಶುರುವಾಗಿದೆ.
ರಾಜ್ಯ ಸರ್ಕಾರ ಈಗಾಗಲೇ ಏರ್‌ಪೋರ್ಟ್‌ಗಾಗಿ ಮೂರು ಜಾಗಗಳನ್ನು ಫೈನಲ್ ಮಾಡಲಾಗಿದ್ದು, ಅದರಲ್ಲಿ ಒಂದು ಜಾಗವನ್ನು ಕೊನೆಯದಾಗಿ ಅಂತಿಮ ಮಾಡಲಾಗುತ್ತದೆ. ಈ ಮೂರು ಜಾಗಗಳನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನ ನಡೆಸಿದ್ದಾರೆ. ಆದರೆ, ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಸಿದ್ದರಾಮಯ್ಯ ಅವರಿಗೆ 30 ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿದ್ದಾರೆ. ಇತ್ತ ಕೆಲ ಸಚಿವರ ಒತ್ತಡದಿಂದ ರಾಜ್ಯ ಸರ್ಕಾರ ಶಿರಾ ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಟ್ಟಿದೆ ಎಂದು ಬೆಳಗಾವಿ ಸಾಹುಕಾರ್ ಸತೀಶ್ ಜಾರಕಿಹಿಳಿ ಹೇಳಿದ್ದು, ಹಲವು ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರವನ್ನ ತೆಗೆದುಕೊಳ್ಳುತ್ತದೆ, ನಾನಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಇಂದು ರಾಜ್ಯದಲ್ಲಿ ಅಧಿಕಾರದಲ್ಲಿದೆ. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಬಜೆಟ್ ನಲ್ಲಿ 52 ಸಾವಿರ ಕೋಟಿ ಹಣ ಮೀಸಲಿಟ್ಟು ಬೆಲೆಏರಿಕೆಯಿಂದ ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬಲು ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ. ಈ ಬೆಲೆ ಏರಿಕೆ ಪ್ರಾರಂಭವಾಗಿರುವುದು ಕೇಂದ್ರ ಸರ್ಕಾರದಿಂದ ಹೀಗಾಗಿ ಬಿಜೆಪಿಯವರು ಹೋರಾಟ ಮಾಡುವುದಾದರೆ ಕೇಂದ್ರ ಸರ್ಕಾರದ ವಿರುದ್ಧ ಮಾಡಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೀಮೆಂಟ್, ಬೇಳೆ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ.
ಜಿಎಸ್ಟಿ ಮೂಲಕ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ಆದರೂ ನಮ್ಮ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಅವರು ಹೋರಾಟ ಆಂರಂಭಿಸಿದ ದಿನವೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ 2 ರಪಾಯಿ, ಅಡುಗೆ ಅನಿಲ ಬೆಲೆ 50 ರೂಪಾಯಿ ಏರಿಕೆ ಮಾಡಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದ ಈ ಬೆಲೆ ಏರಿಕೆ ವಿರುದ್ಧ ನಾವು ಏ.17ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಹೋರಾಟ ಹಮ್ಮಿಕೊಂಡಿದ್ದೇವೆ. ಈ ಹೋರಾಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೀವು ಆಗಮಿಸಬೇಕು. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲೂ ಹೋರಾಟ ಮಾಡಲಾಗುವುದು. ಅಂಬೇಡ್ಕರ್ ಅವರ ವಿಚಾರಧಾರೆಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಆಂಜನೇಯ ಅವರು ಸಮಾಜಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಜನಸಂಖ್ಯೆ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡುವ ಕಾನೂನು ತರಲಾಯಿತು. ಆಂಧ್ರಪ್ರದೇಶ ನಂತರ ಈ ಕಾನೂನು ಜಾರಿಗೆ ಮಾಡಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎಂದರು.












Click it and Unblock the Notifications