Opposition Parties Meeting: ಒಂದಾಗಿ ಆಲೋಚಿಸುವುದು ಪ್ರಗತಿ, ಯಶಸ್ಸು: ಡಿಕೆಶಿ

ಬೆಂಗಳೂರು, ಜುಲೈ 17: ದೇಶದ ಹಿತಾಸಕ್ತಿ ಕಾಯಲು ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಬೆಳವಣಿಗೆ ಆಗಿದೆ. ಎಲ್ಲರೂ ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ವಿರೋಧ ಪಕ್ಷಗಳ ಸಭೆಗೂ ಮುನ್ನ ಬೆಂಗಳೂರಿನ ತಾಜ್‌ ವೆಸ್ಟೆಂಡ್ ಹೋಟೆಲಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ನಾಳೆ ದೊಡ್ಡ ಮಟ್ಟದ ಸಭೆ ನಡೆಯಲಿದೆ. ಇದು ಕೇವಲ ಒಂದು ಪಕ್ಷದ ಸಭೆಯಲ್ಲ. ದೇಶದ 140 ಕೋಟಿ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡಲು ಈ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಅವರು ತಿಳಿಸಿದರು.

Opposition Parties Meeting

ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಆಯೋಜಿಸುತ್ತಿರುವ ಈ ಸಭೆಗೆ ಕೆಪಿಸಿಸಿ ಪರವಾಗಿ ಎಲ್ಲರಿಗೂ ಸ್ವಾಗತ ಕೋರುತ್ತೇನೆ.

ಈ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಕರ್ನಾಟಕ ರಾಜ್ಯದಲ್ಲಿ ಪಡೆದ ಫಲಿತಾಂಶವನ್ನೇ 2024ರ ಚುನಾವಣೆಯಲ್ಲಿ ಪಡೆಯಲು ಕೆಲಸ ಮಾಡಲಾಗುವುದು.

ನಾಯಕರ ಬೇಟಿ, ಹೋಟೆಲ್ ಬೇಟಿಗೆ ಅವಕಾಶ ಇಲ್ಲ

ಇನ್ನು ಈ ಸಭೆಗೆ ಹೆಚ್ಚಿನ ಭದ್ರತೆ ನೀಡಲಾಗಿದೆ. ನಿಯೋಜಿತ ನಾಯಕರ ಹೊರತಾಗಿ ಬೇರೆ ಯಾವುದೇ ನಾಯಕರು ಸಭೆ ನಡೆಯುವ ಹೋಟೆಲ್ ಹಾಗೂ ಬೇರೆ ಪಕ್ಷಗಳ ನಾಯಕರ ಆಗಮನಕ್ಕೆ ಅವಕಾಶ ನೀಡಲಾಗಿಲ್ಲ. ಸಹಕರಿಸುವಂತೆ ಪಕ್ಷದ ನಾಯಕರಲ್ಲಿ ಮನವಿ ಡಿಕೆ ಶಿವಕುಮಾರ್ ಮನವಿ ಮಾಡಿದರು.

Opposition Parties Meeting

ಕೆಲವು ಸಚಿವರು ಹಾಗೂ ನಾಯಕರಿಗೆ ಮಾತ್ರ ಅನುಮತಿ ನೀಡಲಾಗಿದೆ. ಅವರ ಹೊರತು ಇನ್ನಿತರ ನಾಯಕರು ಬಂದು ಇಲ್ಲಿನ ನಾಯಕರನ್ನು ಭೇಟಿ ಮಾಡದಬಾರದು ಎಂದು ಅವರು ಕೋರಿದರು.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಪ್ಲಾನ್

ಇಂದಿನಿಂದ ಎರಡು ದಿನ ನಡೆಯಲಿರುವ ಈ ವಿರೋಧ ಪಕ್ಷಗಳ ಸಭೆಯಲ್ಲಿ 24 ಪಕ್ಷಗಳ ನಾಯಕರು ಸೇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಒಟ್ಟಾಗಿ ಸೆಣಸಲು, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಪ್ಲಾನ್ ಮಾಡಿದ್ದಾರೆ. ಕೆಲವು ಪ್ರಮುಖ ವಿಷಯಗಳು ಈ ಸಭೆಯಲ್ಲಿ ಚರ್ಚೆಯಾಗಲಿವೆ.

ಇತ್ತ ವಿಪಕ್ಷಗಳ ಸಭೆಗೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ಈ ಸಭೆಯಿಂದ ಯಾವುದೇ ಪ್ರಯೋಜವಿಲ್ಲ ಎಂದು ಟೀಕಿಸಿದ್ದಾರೆ. ಸೊನ್ನೆಗೆ ಸೊನ್ನೆಯನ್ನು ಕೂಡಿಸಿದರೇ ಅದರ ಪ್ರತಿಫಲವು ಶೂನ್ಯವೇ ಬರುತ್ತದೆ. ಅಂದರೆ ಈ ಸಭೆಯಿಂದ ಯಾವುದೇ ಪ್ರಯೋಜನವಾಗದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಾಜಿ ಸಚಿವ ಆರ್‌.ಅಶೋಕ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು, ಜೆಡಿಎಸ್ ನಾಯಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ನಾಯಕರು ವಿಪಕ್ಷಗಳ ಸಭೆಗೆ ಲೇವಡಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+