ಡಿಸಿಎಂ ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು: ಪರೀಕ್ಷೆ ನಡೆಸಿದ ವೈದ್ಯರು!
ಬೆಂಗಳೂರು ಜನವರಿ 6: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯರ ತಂಡ ಅವರ ನಿವಾಸಕ್ಕೆ ಆಗಮಿಸಿರುವುದು ತಿಳಿದು ಬಂದಿದೆ.
ಡಿಕೆ ಶಿವಕುಮಾರ್ ಅವರಿಗೆ ವೈರಲ್ ಫಿವರ್ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಅವರು ರಾತ್ರಿಯಿಂದ ಬಳಲುತ್ತಿದ್ದು ಬೆಳಿಗ್ಗೆ ಅವರ ನಿವಾಸಕ್ಕೆ ವೈದ್ಯರ ತಂಡ ಬಂದು ಅವರ ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕ ಹಾಗೂ ವೈದ್ಯರೂ ಆಗಿರುವ ಕುಣಿಗಲ್ ರಂಗನಾಥ್ ಜೊತೆಗೆ ಆಗಮಿಸಿದ ವೈದ್ಯರು ಡಿಕೆ ಶಿವಕುಮಾರ್ ಅವರನ್ನು ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಸದ್ಯ ಸದಾಶಿವ ನಗರದ ತಮ್ಮ ಮನೆಯಲ್ಲಿ ಇರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ತಿಳಿಸಿದ್ದಾರೆಂದು ತಿಳಿದು ಬಂದಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲೂ ಡಿಕೆ ಶಿವಕುಮಾರ್ ಅವರಿಗೆ ವೈರಲ್ ಫಿವರ್ ಕಾಣಿಸಿಕೊಂಡಿತ್ತು. ಹೆಚ್ಚಿನ ಓಡಾಟ, ಪ್ರಚಾರ, ವಿಶ್ರಾಂತಿ ರಹಿತ ಕೆಲಸಗಳಿಂದಾಗಿ ಅವರು ಆರೋಗ್ಯ ಹದಗೆಟ್ಟಿತ್ತು. ಅನಾರೋಗ್ಯದ ನಡುವೆಯೂ ಅವರು ಪ್ರಚಾರದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷ ಗೆಲುವಿಗೆ ತೀವ್ರ ಶ್ರಮಿಸಿದರು. ಬಳಿಕ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಕೂಡ ಸಾಧಿಸಿ ಅಧಿಕಾರಕ್ಕೆ ಬಂತು.
ಸದ್ಯ ಅವರಿಗೆ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತೀವ್ರ ಜ್ವರದಿಂದಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಕನಕಪುರಬಂಡೆಯ ಬೆಂಬಲಿಗರು ಗಾಬರಿಗೊಂಡಿದ್ದಾರೆ. ಆದರೆ ಅವರ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳಿಲ್ಲ, ವೈರಲ್ ಫಿವರ್‌ನಿಂದಾಗಿ ವೈದ್ಯರು ಪರೀಕ್ಷೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷವನ್ನು ಪತ್ತೆ ಗೆಲ್ಲಿಸಲು ಡಿಕೆ ಶಿವಕುಮಾರ್
-
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications