ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂಟೈನರ್‌ನಲ್ಲಿ ಕೋವಿಡ್ ಐಸಿಯು, ಬೆಂಗಳೂರಿನಲ್ಲಿ ಮೊದಲ ಪ್ರಯೋಗ

|
Google Oneindia Kannada News

ಬೆಂಗಳೂರು, ಜುಲೈ 18: ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ ಆಗಿದೆ ಎಂಬ ಆರೋಪದ ಬೆನ್ನಲ್ಲೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೊಸದಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸುವ ಸಮಸ್ಯೆ ಬಗೆಹರಿಸುತ್ತಿದೆ. ಇದೀಗ, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದು 'ಮಾಡ್ಯೂಲರ್ ಐಸಿಯು'ಗಳನ್ನು ಅಭಿವೃದ್ಧಿಪಡಿಸಿದೆ. ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ ಇವುಗಳನ್ನು 'ಮೊಬೈಲ್ ಐಸಿಯು'ಗಳೆಂದೂ ಕರೆಯಬಹುದಾಗಿದೆ.

Recommended Video

ಮಗುವಿನ ಫೋಟೋ ಹಿಡಿದು CM ಮನೆ ಮುಂದೆ ಧರಣಿ ಕುಳಿತ ತಂದೆ | Oneindia Kannada

ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಣೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿ ಈ ಐಸಿಯುಗಳನ್ನು ಅಭಿವೃದ್ಧಿಪಡಿಸಿದ್ದು, ಬೆಂಗಳೂರಿನಲ್ಲಿ ಶನಿವಾರ, ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಇವುಗಳನ್ನು ಪರಿಶೀಲನೆ ಮಾಡಿದರು.

Breaking ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎತ್ತಂಗಡಿ!Breaking ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎತ್ತಂಗಡಿ!

ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಕಂಪನಿಯ ತಜ್ಞರಿಂದ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರಲ್ಲದೆ, ಕಂಟೈನರುಗಳಲ್ಲಿನ ಐಸಿಯುಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಿದರು. ಮುಂದೆ ಓದಿ...

ವಿನೂತನ ಪ್ರಯೋಗ ಎಂದ ಡಿಸಿಎಂ

ವಿನೂತನ ಪ್ರಯೋಗ ಎಂದ ಡಿಸಿಎಂ

ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನವಾಗಿದೆ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂತಹ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಡಿಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಸಿಜೆಗೆ 10 ಕಂಟೈನರ್

ಕೆಸಿಜೆಗೆ 10 ಕಂಟೈನರ್

ಪ್ರಾಯೋಗಿಕವಾಗಿ ಮೊದಲು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರುಗಳನ್ನು ಒದಗಿಸಲಾಗುವುದು. ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು. ಕಂಟೈನರ್‌ನಲ್ಲಿ ಕೇವಲ 10ರಿಂದ 15 ದಿನಗಳಲ್ಲಿ ಇಷ್ಟು ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಒಂದು

ಕೊರೊನಾದಿಂದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಗುಣಮುಖಕೊರೊನಾದಿಂದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಗುಣಮುಖ

ಬೇರೆ ಸಮಯದಲ್ಲೂ ಬಳಸಬಹುದು

ಬೇರೆ ಸಮಯದಲ್ಲೂ ಬಳಸಬಹುದು

ಪ್ರತಿ ಕಂಟೈನರಲ್ಕಿ 5 ಹಾಸಿಗೆಗಳು ಇರುತ್ತವೆ. ರಿನ್ಯಾಕ್ ಕಂಪನಿ ತಮ್ಮದೇ ವೆಚ್ಚದಲ್ಲಿ ಎಕ್ಸ್'ಕ್ಲೂಸೀವ್ ಆಗಿ ನಮಗಾಗಿಯೇ ಇವುಗಳನ್ನು ತಯಾರಿಸಿ ಕೊಟ್ಟಿದೆ. ಕೋವಿಡ್ ನಂತರವೂ ಇವುಗಳನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಬಹುದು. ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂತ ದುರಂತಗಳು ಎದುರಾದಾಗ ಇಂತಹ ಐಸಿಯುಗಳು ಹೆಚ್ಚು ಪರಿಣಾಮಕಾರಿಯಾಗಿದೆ.

ಇದರಲ್ಲಿ ಏನೇನಿರುತ್ತದೆ?

ಇದರಲ್ಲಿ ಏನೇನಿರುತ್ತದೆ?

ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ. ಆಮ್ಲಜನಕ ವ್ಯವಸ್ಥೆ ಇರುತ್ತದೆ. ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕ್ಯಾಮೆರಾ ಕೂಡ ಇದ್ದು, ಆನ್'ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನು ಅಳವಡಿಸಲಾಗಿದೆ. ಪ್ರತಿ ಕಂಟೈನರ್'ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್'ಗಳಾಗುತ್ತವೆ. ಆಗ ಅದನ್ನು ಪ್ರತ್ಯೇಕ ನರ್ಸಿಂಗ್ ಹಾಗೂ ಮಾನಿಟರಿಂಗ್ ಸ್ಟೇಷನ್ ಎಂದು ಪರಿಗಣಿಸಿ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಅದು ಪ್ರತ್ಯೇಕವಾಗಿರುತ್ತದೆ. ಎಲ್ಲಿಗೆ ಬೇಕಾದರೂ ಈ ಐಸಿಯುಗಳನ್ನು ಸುಲಭವಾಗಿ ಸಾಗಿಸಿ ಇಡಬಹುದು. ಆಯಾ ಆಸ್ಪತ್ರೆಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು ಎಂದು ರಿನ್ಯಾಕ್ ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದರು.

English summary
Karnataka DCM Dr Ashwath Narayan visited the 'Modular ICU' at Tavarekere. These ready to install facilities will soon be installed at KC General Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X