ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರಣಿ ನಿರತ ಉಪನ್ಯಾಸಕರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಮಹತ್ವದ ಭರವಸೆ!

|
Google Oneindia Kannada News

ಬೆಂಗಳೂರು, ಅ. 15: ಕೇಂದ್ರ ಸರಕಾರದ ಸೂಚನೆಯಂತೆ ಅತಿ ಶೀಘ್ರದಲ್ಲಿಯೇ ಕಾಲೇಜುಗಳು ಆರಂಭವಾಗುತ್ತಿದ್ದು, ಅದರಂತೆ ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಕೂಡಲೇ ಕೌನ್ಸೆಲಿಂಗ್ ಮುಗಿಸಿಕೊಂಡು ನೇಮಕಾತಿ ಅದೇಶದ ನಿರೀಕ್ಷೆಯಲ್ಲಿರುವ ಎಲ್ಲ ಉಪನ್ಯಾಸಕರಿಗೆ ನೇಮಕಾತಿ ಪತ್ರವನ್ನು ನೀಡಲು ಸರಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಭರವಸೆ ನೀಡಿದ್ದಾರೆ.

ನೇಮಕಾತಿ ಪತ್ರ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಪಿಯುಸಿ ಮಂಡಳಿ ಎದುರು ಧರಣಿ ನಡೆಸುತ್ತಿರುವ ಭಾವಿ ಉಪನ್ಯಾಸಕರನ್ನು ಗುರುವಾರ ಭೇಟಿಯಾದ ಡಿಸಿಎಂ, ಹಣಕಾಸು ಇಲಾಖೆಯ ಕೆಲ ಆಕ್ಷೇಪಗಳ ಕಾರಣಕ್ಕೆ ನೇಮಕಾತಿ ಪತ್ರಗಳನ್ನು ನೀಡುವುದು ತಡವಾಗಿದೆ. ಇದಕ್ಕೆ ಕೋವಿಡ್ ಕೂಡ ಒಂದು ಪ್ರಮುಖ ಕಾರಣ. ಇದೀಗ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹಣಕಾಸು ಇಲಾಖೆ ಎತ್ತಿದ್ದ ಆಕ್ಷೇಪಗಳನ್ನು ನಿವಾರಿಸಿ ಕಾಲೇಜುಗಳು ಆರಂಭವಾದ ತಕ್ಷಣ ನೇಮಕಾತಿ ಆದೇಶ ನೀಡುವಂತೆ ಸೂಚಿಸಿದ್ದಾರೆಂದು ತಿಳಿಸಿದರು.

ಈಗಲೇ ಆದೇಶ ಪತ್ರಗಳನ್ನು ನೀಡಿ

ಈಗಲೇ ಆದೇಶ ಪತ್ರಗಳನ್ನು ನೀಡಿ

ದಿನೇದಿನೇ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಲೇಜುಗಳು ಶುರುವಾಗುವುದು ಇನ್ನೂ ತಡವಾಗಬಹುದು. ಹೀಗಾಗಿ ಈಗಲೇ ಆದೇಶ ಪತ್ರಗಳನ್ನು ನೀಡಿ ಎಂದು ಉಪನ್ಯಾಸಕರು ಒತ್ತಾಯ ಮಾಡಿದರು. ಇದಕ್ಕೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಕಾಲೇಜುಗಳನ್ನು ಅರಂಭ ಮಾಡಿ ಎಂದು ಈಗಾಗಲೇ ಕೇಂದ್ರ ಸರಕಾರ ಸ್ಪಷ್ಟ ಸೂಚನೆ ನೀಡಿದೆ. ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಕೆಲಸ ಮಾಡುತ್ತಿದೆ ಹಾಗೂ ಕೆಲ ಮೂಲಭೂತ ಸೌಕರ್ಯಗಳ ತಯಾರಿ ಮಾಡಿಕೊಳ್ಳುತ್ತಿದೆ. ನಿಮಗೆ ಅನುಮಾನವೇ ಬೇಡ. ಕಾಲೇಜುಗಳು ಖಂಡಿತವಾಗಿಯೂ ಆರಂಭವಾಗುತ್ತವೆ. ಸರಕಾರದ ಮೇಲೆ ನಂಬಿಕೆ ಇಡಿ ಎಂದು ಮನವಿ ಮಾಡಿದರು.

ಧರಣಿ ನಿರತ ಉಪನ್ಯಾಸಕರಿಗೆ ಆಸ್ಪತ್ರೆಯಿಂದಲೇ ಸುರೇಶ್ ಕುಮಾರ್ ಮಹತ್ವದ ಸಂದೇಶ!ಧರಣಿ ನಿರತ ಉಪನ್ಯಾಸಕರಿಗೆ ಆಸ್ಪತ್ರೆಯಿಂದಲೇ ಸುರೇಶ್ ಕುಮಾರ್ ಮಹತ್ವದ ಸಂದೇಶ!

ಅಕಾಡೆಮಿಕ್ ವರ್ಷ ನಿಲ್ಲುವುದಿಲ್ಲ

ಅಕಾಡೆಮಿಕ್ ವರ್ಷ ನಿಲ್ಲುವುದಿಲ್ಲ

ಎಲ್ಲರಿಗೂ ಗೊತ್ತಿರುವಂತೆ ಶೈಕ್ಷಣಿಕ ವರ್ಷ ನಿಲ್ಲಬಾರದು ಎಂಬ ಉದ್ದೇಶದಿಂದ ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಪಿಯುಸಿ, ಎಸ್.ಎಸ್.ಎಲ್.ಸಿ, ಸಿಇಟಿ, ನೀಟ್‌ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಯಾವುದೇ ಕಾರಣಕ್ಕೂ ಅಕಾಡೆಮಿಕ್ ವರ್ಷ ನಿಲ್ಲುವುದಿಲ್ಲ. ಶೈಕ್ಷಣಿಕ ಚಟುವಟಿಕೆಗಳು ನಿರಾತಂಕವಾಗಿ ನಡೆಯಲೇಬೇಕು. ಜತೆಗೆ ನಮ್ಮ ಸರಕಾರವು ಶಿಕ್ಷಕರು, ಉಪನ್ಯಾಸಕರ ಪರವಾಗಿದೆ. ನಿಮ್ಮ ಬೇಡಿಕೆಯನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿದ್ದಾರೆಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಹೇಳಿದರು.

ಕೋವಿಡ್ ಮಧ್ಯೆ ಕೌನ್ಸೆಲಿಂಗ್

ಕೋವಿಡ್ ಮಧ್ಯೆ ಕೌನ್ಸೆಲಿಂಗ್

ಹಣಕಾಸು ಇಲಾಖೆ ಎತ್ತಿದ್ದ ಆಕ್ಷೇಪಗಳ ನಡುವೆಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್‌ ಅವರ ಒತ್ತಾಸೆಯಿಂದ ಕೋವಿಡ್ ನಡುವೆಯೇ ಕೌನ್ಸೆಲಿಂಗ್ ನಡೆಸಲಾಗಿದೆ. ಉದ್ಯೋಗ ಸ್ಥಳವನ್ನೂ ತೋರಿಸಲಾಗಿದೆ. ಒಂದು ವರ್ಷದೊಳಗೆ ನೇಮಕಾತಿ ಆದೇಶ ಬೇಕು ಎನ್ನುವ ನಿಮ್ಮ ಆತಂಕ ಸರಕಾರಕ್ಕೆ ಅರ್ಥವಾಗುತ್ತದೆ. ಯಾವುದೇ ಆತಂಕ ನಿಮಗೆ ಬೇಡ. ನಂಬಿಕೆ ಇಡಿ; ಧರಣಿ ಕೈಬಿಡಿ. ತರಗತಿಗಳು ಆರಂಭವಾಗುತ್ತಿದ್ದಂತೇ ನೇಮಕಾತಿ ಆದೇಶ ಪತ್ರಗಳು ನಿಮ್ಮನ್ನು ತಲುಪುತ್ತವೆ ಎಂದು ಡಾ. ಅಶ್ವಥ್ ನಾರಾಯಣ ಉಪನ್ಯಾಸಕರಿಗೆ ಭರವಸೆ ನೀಡಿದರು.

Recommended Video

Indian Railways : ಹಬ್ಬದ ಪ್ರಯುಕ್ತ ವಿಶೇಷ 392 ವಿಶೇಷ Train ಓಡಾಟ ಶುರು | Oneindia Kannada
ಮಾಹಿತಿ ಪಡೆದುಕೊಂಡ ಡಿಸಿಎಂ

ಮಾಹಿತಿ ಪಡೆದುಕೊಂಡ ಡಿಸಿಎಂ

ಕೋವಿಡ್ ಕಾರಣದಿಂದ ದೇಶದ ಯಾವುದೇ ರಾಜ್ಯದಲ್ಲೂ ನೇಮಕಾತಿಗಳು ನಡೆಯುತ್ತಿಲ್ಲ. ಅಷ್ಟೇ ಏಕೆ? ನಮ್ಮ ರಾಜ್ಯದ ಎಲ್ಲ ಇಲಾಖೆಗಳಲ್ಲೂ ಹೊಸ ನೇಮಕಾತಿಯನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಪನ್ಯಾಸಕರ ನೇಮಕಕ್ಕೆ ಸರಕಾರ ಎಲ್ಲ ಅಡ್ಡಿಗಳನ್ನು ಬದಿಗೊತ್ತಿ ಒಪ್ಪಿಕೊಂಡಿದೆ ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದರು.

ಇದೇ ವೇಳೆ ಡಿಸಿಎಂ ಅಶ್ವಥ್ ನಾರಾಯಣ ಅವರು ಪಿಯುಸಿ ಮಂಡಳಿ ನಿರ್ದೇಶಕಿ ಸ್ನೇಹಾಲ್ ಅವರ ಜತೆ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿ ಮಾತುಕತೆ ನಡೆಸಿದರು. ಈ ಬಗ್ಗೆ ಅವರಿಂದ ಎಲ್ಲ ಮಾಹಿತಿಯನ್ನು ಪಡೆದುಕೊಂಡರು.

English summary
Higher eductaion Education Minister Dr. Ashwath Narayan met the 1203 PU lecturers who have been protesting in front of PU Board in Bengaluru reagarding their appointment order. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X