• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಕೇವಲ ಒಂದು ಅರ್ಜಿಯನ್ನು ಸಲ್ಲಿಸಿ ಕೈಗಾರಿಕೆ ಆರಂಭಿಸಿ'

|

ಬೆಂಗಳೂರು, ಸೆ. 06: ಕೋವಿಡ್-19 ಸಂಕಷ್ಟದಿಂದ ಚೇತರಿಸಿಕೊಂಡು ಆರ್ಥಿಕವಾಗಿ ಮತ್ತೆ ಸಹಜಸ್ಥಿತಿಗೆ ಮರಳಿರುವ ದೇಶದ ಏಕೈಕ, ಮುಂಚೂಣಿಯ ರಾಜ್ಯ ಕರ್ನಾಟಕವಾಗಿದೆ ಎಂದು ಡಿಸಿಎಂ ಡಾ. ಸಿ.ಎನ್.‌ ಅಶ್ವಥ್ ನಾರಾಯಣ ಹೇಳಿದರು. ಶನಿವಾರ ಅಮೆರಿಕದ ಕನ್ನಡ ಒಕ್ಕೂಟಗಳ ಸಂಘಟನೆ 'ಅಕ್ಕ' ಏರ್ಪಡಿಸಿದ್ದ ಅಕ್ಕ ವರ್ಚುಯಲ್ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇಡೀ ಜಗತ್ತನ್ನು ತೀವ್ರವಾಗಿ ಕಾಡುತ್ತಿರುವ ಕೋವಿಡ್‌ನಿಂದ ಕರ್ನಾಟಕ ಧೃತಿಗೆಟ್ಟಿಲ್ಲ. ವಾಣಿಜ್ಯ, ಕೈಗಾರಿಕೆ, ಶಿಕ್ಷಣ, ಸಾರಿಗೆ ಸೇರಿದಂತೆ ಎಲ್ಲ ಕ್ಷೇತ್ರಗಳು ಸಹಜಸ್ಥಿತಿಗೆ ಮರಳಿವೆ. ಕೋವಿಡ್ ಕಾಲದಲ್ಲೂ ತೆರಿಗೆ ಸಂಗ್ರಹದಲ್ಲೂ ರಾಜ್ಯ ಉತ್ತಮ ಸಾಧನೆ ಮಾಡಿದೆ ಎಂದರು.

ಒಂದೆಡೆ ಕೋವಿಡ್ ಜತೆ ಹೋರಾಟ ನಡೆಸುತ್ತಲೇ ಇನ್ನೊಂದೆಡೆ ಅಭಿವೃದ್ಧಿಯತ್ತ ಕೂಡ ರಾಜ್ಯ ಸರಕಾರ ಕೆಲಸ ಮಾಡಿತು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಸೇರಿ ಕೆಲ ಮಹತ್ವದ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಯಿತಲ್ಲದೆ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಮಾಮೂಲಿ ಸ್ಥಿತಿಗೆ ತರಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿತು ಎಂದು ಡಿಸಿಎಂ ಹೇಳಿದರು.

ರಾಷ್ಟ್ರೀಯ ಆವಿಷ್ಕಾರ ಮಿಷನ್

ರಾಷ್ಟ್ರೀಯ ಆವಿಷ್ಕಾರ ಮಿಷನ್

ಈಗಾಗಲೇ ರಾಜ್ಯದಲ್ಲಿ ಆವಿಷ್ಕಾರ ಪ್ರಾಧಿಕಾರವನ್ನು ಸ್ಥಾಪನೆ ಮಾಡಿ ಐಟಿ-ಬಿಟಿ ಕ್ಷೇತ್ರಕ್ಕೆ ಶಕ್ತಿ ತುಂಬಲಾಗಿದೆ. ಅದೇ ರೀತಿ ಇಡೀ ದೇಶವನ್ನು ಬೆಂಗಳೂರು ಮೂಲಕ ನೋಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ರಾಷ್ಟ್ರೀಯ ಆವಿಷ್ಕಾರ ಮಿಷನ್ ಅನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಎಲ್ಲ ಪ್ರಯತ್ನಗಳನ್ನು ನಡೆಸಲಾಗುವುದು. ಅದಕ್ಕೆ ಬೇಕಿರುವ ಎಲ್ಲ ನೆರವನ್ನೂ ಕೇಂದ್ರ ಸರಕಾರದಿಂದ ಪಡೆಯಲಾಗುವುದು ಎಂದು ಇದೇ ವೇಳೆ ಅನಿವಾಸಿ ಕನ್ನಡಿಗರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಮಾಹಿತಿ ನೀಡಿದರು.

ಶ್ರೀರಂಗ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

ಅಮೆರಿಕ ಮತ್ತು ಹೂಡಿಕೆ

ಅಮೆರಿಕ ಮತ್ತು ಹೂಡಿಕೆ

ಎಲ್ಲರಿಗೂ ಗೊತ್ತಿರುವಂತೆ ಭಾರತ ಮತ್ತು ಅಮೆರಿಕದ ನಡುವೆ‌ ರಾಜತಾಂತ್ರಿಕವಾಗಿ ಮಾತ್ರವಲ್ಲದೆ ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಬಾಂಧವ್ಯವಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್‌ ಸಿಸ್ಟಮ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿ, ಬಾಹ್ಯಾಕಾಶ, ರಕ್ಷಣೆ, ಐಟಿ-ಬಿಟಿ ಸೇರಿ ಇನ್ನೂ ಅನೇಕ ವಿಭಾಗಗಳಲ್ಲಿ ಅಮೆರಿಕ ಮತ್ತು ಕರ್ನಾಟಕದ ನಡುವೆ ಗಾಢವಾದ ವ್ಯವಹಾರವಿದೆ. ಇದರಿಂದ ಎರಡೂ ಕಡೆಗೂ ಅಪಾರವಾದ ಲಾಭವಾಗುತ್ತಿದೆ. ಅಮೆರಿಕದ ನೂರಾರು ಕಂಪನಿಗಳು ಕರ್ನಾಟಕದಿಂದಲೇ ಕಾರ್ಯಾಚರಿಸುತ್ತಿವೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.

ಅರ್ಜಿ ಸಲ್ಲಿಸಿ ಕೈಗಾರಿಕೆ ಆರಂಭಿಸಿ

ಅರ್ಜಿ ಸಲ್ಲಿಸಿ ಕೈಗಾರಿಕೆ ಆರಂಭಿಸಿ

ಕರ್ನಾಟಕದಲ್ಲಿ ಹೂಡಿಕೆ ಮಾಡಲು ಅತ್ಯಂತ ಉತ್ತಮ ವಾತಾವರಣವಿದೆ. ಇಂಥ ಅನುಕೂಲಕರ ಪರಿಸ್ಥಿತಿ ದೇಶದ ಬೇರೆ ಯಾವುದೇ ರಾಜ್ಯದಲ್ಲೂ ಇಲ್ಲ. ಕೇವಲ ಒಂದು ಅರ್ಜಿಯನ್ನು ಸಲ್ಲಿಸಿ ಕೈಗಾರಿಕೆ ಆರಂಭಿಸಬಹುದು. ನಂತರ ಅಗತ್ಯ ಒಪ್ಪಿಗೆಗಳನ್ನು ಏಕಗವಾಕ್ಷಿ ವ್ಯವಸ್ಥೆಯಲ್ಲೇ ಪಡೆಯಬಹುದು. ಯಾವುದೇ ಕ್ಷೇತ್ರದಲ್ಲಿ ಬೇಕಾದರೂ ಹಿಂಜರಿಕೆ ಇಲ್ಲದೆ ಹೂಡಿಕೆ ಮಾಡಬಹುದು. ಅನಿವಾಸಿ ಕನ್ನಡಿಗರು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಉದ್ಯಮದಲ್ಲಿ ಹೂಡಿಕೆಯ ವಿಷಯ ಬಂದರೆ ಕರ್ನಾಟಕ, ಅಮರಿಕದ ನಡುವೆ ಅತ್ಯುತ್ತಮ ಅವಗಾಹನೆ ಇದೆ ಎಂದು ಡಿಸಿಎಂ ವಿವರಿಸಿದರು.

ಸಿಎಂ ಯಡಿಯೂರಪ್ಪ ಭಾಗಿ

ಸಿಎಂ ಯಡಿಯೂರಪ್ಪ ಭಾಗಿ

ಉಳಿದಂತೆ, ರಾಜ್ಯದಲ್ಲಿ ಡಿಜಿಟಲ್‌ ಎಕಾನಮಿ ಮಿಷನ್‌, ಬಯೋ ಇನೋವೇಷನ್ ಸೆಂಟರ್‌ ಸೇರಿ ಹಲವಾರು ಹೆಜ್ಜೆಗಳನ್ನು ಇಡಲಾಗಿದೆ. ಇದರ ಜತೆಜತೆಯಲ್ಲೇ ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಲಾಗಿದೆ. ಜಾಬ್ ಮಾರುಕಟ್ಟೆಯ ಟ್ರೆಂಡ್‌ಗೆ ತಕ್ಕಂತೆ ಕೆಲಸಗಳನ್ನು ಒದಗಿಸಲಾಗುತ್ತಿದೆ ಹಾಗೂ ಕೌಶಲ್ಯಭರಿತ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಹತ್ತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ, ಬೃಹತ್‌ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ. ರವಿ ಮುಂತಾದವರು ಪಾಲ್ಗೊಂಡು ಮಾತನಾಡಿದರು. ಅಕ್ಕ ಒಕ್ಕೂಟದ ಅಧ್ಯಕ್ಷ ತುಮಕೂರು ದಯಾನಂದ್, ಅಕ್ಕ ಒಕ್ಕೂಟದ ಅಧ್ಯಕ್ಷ ಅಮರನಾಥ ಗೌಡ ಅವರು ಅಮೆರಿಕದಲ್ಲೇ ಕಾರ್ಯಕ್ರಮದಲ್ಲಿ ಹಾಜರಿದ್ದರು.

English summary
DCM Dr. CN Ashwath Narayana said that Karnataka is the only state in the country to recover from the hardship of the Covid-19 calamity and return financially to normalcy Speaking at the Akka Virtual World Kannada Conference organized by American Association of Kannada Unions. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X