ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲು ಡಿಸಿಎಂ ಕಾರಜೋಳ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 15: ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿಯನ್ನು ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಆಯೋಜಿಸಿ, ಐಎಎಸ್/ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಗಳಲ್ಲಿ ಉತ್ತೀರ್ಣರಾಗಿರುವವರ ವಿವರವನ್ನು ಸಂಗ್ರಹಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು.

Recommended Video

ಕರೋನ ವೈರಸ್ ಪವರ್ ಕಡಿಮೆ ಅಗಿದ್ಯಂತೆ | Oneindia Kannada

ವಿಕಾಸಸೌಧದಲ್ಲಿ ಇಂದು ನಡೆದ ರಾಜ್ಯಮಟ್ಟದ ಉನ್ನತ ಸಮತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2019-20 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು 24.8 ಕೋಟಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 11 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ

ಒಟ್ಟು 52 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆ ನಡೆಸಿ, 2,754 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ವಿಭಾಗ ವ್ಯಾಪ್ತಿಯ ಜಿಲ್ಲೆಗಳ 900 ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಆದೇಶ ಹೊರಡಿಸಲಾಗಿದೆ ಎಂದರು.

DCM Govind Karajola Instruction To Provide Competitive Test Training To SC/ST Students

2020-21 ನೇ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮಕ್ಕಾಗಿ 14 ಕೋಟಿ ರುಪಾಯಿಯನ್ನು ಮೀಸಲಿಡಲಾಗಿದೆ. ಈ ವರ್ಷದಿಂದ ನ್ಯಾಯಾಲಯವು ನಡೆಸುವ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರಾರಂಭಿಸಲಾಗುವುದು. ನರ್ಸಿಂಗ್ ಕೋರ್ಸುಗಳ ತರಬೇತಿಯನ್ನು ಹೆಚ್ಚು ಅಭ್ಯರ್ಥಿಗಳಿಗೆ ನೀಡಬೇಕು. ಜೆಇಇ ಮತ್ತು ನೀಟ್ ಗಳಿಗೆ ತರಬೇತಿಯನ್ನು ಅತ್ಯುತ್ತಮವಾಗಿ ನೀಡಬೇಕು ಎಂದು ಸೂಚಿಸಿದರು.

ಮಿಲಿಟರಿ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಬೇಕು. ಪರೀಕ್ಷಾ ಪೂರ್ವ ತರಬೇತಿಯಿಂದ ಸಾಕಷ್ಟು ಅನುಕೂಲಗಳಿವೆ. ಆದರೆ ಗುಣಮಟ್ಟದ ತರಬೇತಿ ನೀಡಿ, ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗುವಂತೆ ಕ್ರಮಕೈಗೊಳ್ಳಬೇಕು. ಅಭ್ಯರ್ಥಿಗಳು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಯಶಸ್ವಿಯಾಗುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಎಸ್‍ಸಿಪಿ ಮತ್ತು ಟಿಎಸ್ ಪಿ ಯೋಜನೆಯ ಸಲಹೆಗಾರರಾದ ಇ. ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ವಿಕಾಸ್ ಸುರಳೀಕರ, ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮುಖ್ಯಸ್ಥ ಮಹೇಶ್, ಡಿಸಿಎಂ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ್, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಸಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

English summary
DCM Govind Karajola Instructed that preparatory training should be conducted by prestigious training institutes for Compitative examinations for scheduled caste and tribal students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X