ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿರಾಶ್ರಿತರ ಮೇಲೆ ಹೆಚ್ವಿನ ನಿಗಾ ವಹಿಸಲು ಡಿಸಿಎಂ ಕಾರಜೋಳ ಸೂಚನೆ

|
Google Oneindia Kannada News

ಬೆಂಗಳೂರು, ಮೇ 11: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ನಿಗಾವಹಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಈ ಕೇಂದ್ರದಲ್ಲಿ 672 ನಿರಾಶ್ರಿತರಿದ್ದಾರೆ.‌ ನಿರಾಶ್ರಿತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವುದಷ್ಟೇ ಅಲ್ಲದೇ ಬಳಸುವಂತೆ‌ ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ: ಗೋವಿಂದ ಕಾರಜೋಳಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ: ಗೋವಿಂದ ಕಾರಜೋಳ

ಮುಂಜಾಗ್ರತಾ ಕ್ರಮಕೈಗೊಂಡು ಮಾರ್ಚ್ 2 ನೇ ವಾರದಿಂದಲೇ ಈ‌ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಲಾಕ್ ಡೌನ್ ಮಾಡಿ, ಪ್ರವೇಶವನ್ನು ನಿಷೇಧಿಸಿ, ಯಾರಿಗೂ ಹೊಸದಾಗಿ ದಾಖಲು ಮಾಡಿಕೊಂಡಿಲ್ಲ ಎಂದು ಹೇಳಿದರು.

DCM Govind Karajola Visited Unsheltered Rehabilitation Center

ನಿರಾಶ್ರಿತರ ಪರಿಹಾರ ಕೇಂದ್ರದ ಕಾರ್ಯದರ್ಶಿ ಚಂದ್ರಾ ನಾಯ್ಕ್, ಕ್ರೈಸ್ ನ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ್, ವಿಶೇಷ ಕರ್ತವ್ಯಾಧಿಕಾರಿ ಆರ್.ಬಿ. ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

English summary
DCM Govind Karajola Visited Unsheltered Rehabilitation Center. officers must takes action for covid19 break rules.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X