ನಾಳೆ ಡಿಸಿಎಂ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ
ಬೆಂಗಳೂರು, ಫೆ. 04: ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಇದೇ ಫೆಬ್ರವರಿ 17 ರಂದು ನಡೆಯುವ ಉಪಚುನಾವಣೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಳೆ ಬೆಳಗ್ಗೆ 11ಕ್ಕೆ ತಮ್ಮ ನಾಮಪತ್ರವನ್ನು ವಿಧಾನಭೆಯ ಕಾರ್ಯದರ್ಶಿಯವರಿಗೆ ವಿಧಾನಸೌಧದ ಕೊಠಡಿ ಸಂಖ್ಯೆ121 ರಲ್ಲಿ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿಯ ನಾಯಕರು ಉಪಸ್ಥಿತರಿಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೊನೆಗೂ ಬಿಜೆಪಿ ಅಧಿಕೃತ ಅಭ್ಯರ್ಥಿಯಾದ ಡಿಸಿಎಂ ಲಕ್ಷ್ಮಣ ಸವದಿ: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಇತ್ತು. ಮಾಜಿ ಸಚಿವ ಆರ್. ಶಂಕರ್ ಅವರನ್ನು ಪರಿಷತ್ತಿನ ಸದಸ್ಯರನ್ನಾಗಿ ಮಾಡಿ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ನಿರ್ಧಾರದಂತೆ ಇದೀಗ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.












Click it and Unblock the Notifications