ಸಂವಿಧಾನ ರಕ್ಷಣೆ: ರಾಜರತ್ನ ಅಂಬೇಡ್ಕರ್ ಹಾಗೂ ಪರಮೇಶ್ವರ ಚರ್ಚೆ

ಬೆಂಗಳೂರು, ಅಕ್ಟೋಬರ್ 15: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರನ್ನು ಸೋಮವಾರ ಭೇಟಿ ಮಾಡಿದರು.

ರಾಜರತ್ನ ಭೇಟಿ ಬಳಿಕ ವಿಧಾನಸೌಧದಲ್ಲಿ ಡಾ. ಜಿ. ಪರಮೇಶ್ವರ ಮಾತನಾಡಿ, ದೇಶದಲ್ಲಿ ಸಂವಿಧಾನ ಬದಲಿಸುವ ಹೇಳಿಕೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ಹೋರಾಟ ಮಾಡಲು ಮುಂದಾಗಿರುವ ರಾಜರತ್ನ ಅಂಬೇಡ್ಕರ್ ಅವರ ನಿಲುವಿಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.

ಮೊದಲ ಬಾರಿ ಇವರನ್ನು ಭೇಟಿ ಮಾಡಿದ್ದ ಸಂತಸ ನೀಡಿತು. ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ಕೇಳಿ ಬರುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಈ ಸಂಬಂಧ ಹೋರಾಟ ಮಾಡುವ ಬಗ್ಗೆ ಚರ್ಚಿಸಿದರು ಎಂದರು.

ಮೈಸೂರು ದಸರಾ - ವಿಶೇಷ ಪುರವಣಿ

DCM meets Doctor ambedkar grandson Rajaratna

ಈಗಾಗಲೇ ಸಂವಿಧಾನವನ್ನು ಉಳಿಸಿ ಎನ್ನುವ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ದೊರೆತಿದೆ. ಸಂವಿಧಾನದ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಹೆಚ್ಚಾಗುತ್ತಿದೆ ಅದರ ಜತೆಗೆ ಸಂವಿಧಾನವನ್ನು ಬದಲಿಸುವ ಮಾತುಗಳನ್ನು ಕೂಡ ಕೆಲವರು ಆಡುತ್ತಿದ್ದಾರೆ, ಇದು ಆತಂಕಕಾರಿ ಬೆಳವಣಿಗೆ ಇದರ ವಿರುದ್ಧ ಬಿಆರ್ ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನಂ ಹೋರಾಟಕ್ಕೆ ಮುಂದಾಗಿದ್ದಾರೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+