ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂವಿಧಾನ ರಕ್ಷಣೆ: ರಾಜರತ್ನ ಅಂಬೇಡ್ಕರ್ ಹಾಗೂ ಪರಮೇಶ್ವರ ಚರ್ಚೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 15: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರನ್ನು ಸೋಮವಾರ ಭೇಟಿ ಮಾಡಿದರು.

ಸಂವಿಧಾನವನ್ನು ಪ್ರಶ್ನಿಸುವ ಹಕ್ಕು ಕಾಂಗ್ರೆಸ್ಸಿಗಿಲ್ಲ: ಅನಂತ್ ಕುಮಾರ್ಸಂವಿಧಾನವನ್ನು ಪ್ರಶ್ನಿಸುವ ಹಕ್ಕು ಕಾಂಗ್ರೆಸ್ಸಿಗಿಲ್ಲ: ಅನಂತ್ ಕುಮಾರ್

ರಾಜರತ್ನ ಭೇಟಿ ಬಳಿಕ ವಿಧಾನಸೌಧದಲ್ಲಿ ಡಾ. ಜಿ. ಪರಮೇಶ್ವರ ಮಾತನಾಡಿ, ದೇಶದಲ್ಲಿ ಸಂವಿಧಾನ ಬದಲಿಸುವ ಹೇಳಿಕೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ಹೋರಾಟ ಮಾಡಲು ಮುಂದಾಗಿರುವ ರಾಜರತ್ನ ಅಂಬೇಡ್ಕರ್ ಅವರ ನಿಲುವಿಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.

'ಸಂವಿಧಾನ ಉಳಿಸಿ' ಅಭಿಯಾನಕ್ಕೆ ಇಂದು ರಾಹುಲ್ ಚಾಲನೆ'ಸಂವಿಧಾನ ಉಳಿಸಿ' ಅಭಿಯಾನಕ್ಕೆ ಇಂದು ರಾಹುಲ್ ಚಾಲನೆ

ಮೊದಲ ಬಾರಿ ಇವರನ್ನು ಭೇಟಿ ಮಾಡಿದ್ದ ಸಂತಸ ನೀಡಿತು. ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ಕೇಳಿ ಬರುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಈ ಸಂಬಂಧ ಹೋರಾಟ ಮಾಡುವ ಬಗ್ಗೆ ಚರ್ಚಿಸಿದರು ಎಂದರು.

ಮೈಸೂರು ದಸರಾ - ವಿಶೇಷ ಪುರವಣಿ

DCM meets Doctor ambedkar grandson Rajaratna

ಈಗಾಗಲೇ ಸಂವಿಧಾನವನ್ನು ಉಳಿಸಿ ಎನ್ನುವ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ದೊರೆತಿದೆ. ಸಂವಿಧಾನದ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಹೆಚ್ಚಾಗುತ್ತಿದೆ ಅದರ ಜತೆಗೆ ಸಂವಿಧಾನವನ್ನು ಬದಲಿಸುವ ಮಾತುಗಳನ್ನು ಕೂಡ ಕೆಲವರು ಆಡುತ್ತಿದ್ದಾರೆ, ಇದು ಆತಂಕಕಾರಿ ಬೆಳವಣಿಗೆ ಇದರ ವಿರುದ್ಧ ಬಿಆರ್ ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನಂ ಹೋರಾಟಕ್ಕೆ ಮುಂದಾಗಿದ್ದಾರೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

English summary
Deputy chief minister G Parameshwara has met DR BR Ambedkar's grandson Rajaratna ambedkar at Vidhanasoudha on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X