ರಮೇಶ್ ಜಾರಕಿಹೊಳಿ ಪಕ್ಷ ಬಿಡುವುದಿಲ್ಲ, ವದಂತಿ ಅಷ್ಟೇ: ಪರಮೇಶ್ವರ

Recommended Video

      ರಮೇಶ್ ಜಾರಕಿಹೊಳಿ ಪಕ್ಷ ಬಿಡುವುದಿಲ್ಲ, ವದಂತಿ ಅಷ್ಟೇ: ಡಿಸಿಎಂ ಜಿ.ಪರಮೇಶ್ವರ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 10: ಸಚಿವ ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

      ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿದಾಗ ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಪಕ್ಷ ಬಿಡುವುದು ಕೇವಲ ವದಂತಿಯಷ್ಟೇ ಎಂದು ಹೇಳಿದ್ದಾರೆ.

      ಕಳೆದ ಒಂದು ವಾರದಿಂದ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಿದ್ದಾರೆ ಎನ್ನುವ ಗುಸು-ಗುಸು ಆರಂಭವಾಗಿತ್ತು ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

      DCM opines that Ramesh Jarkiholi never leave congress

      ಇದೀಗ ಈ ಕುರಿತು ಪರಮೇಶ್ವರ ಮಾತನಾಡಿದ್ದು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ, ಆದರೆ ಬಿಜೆಪಿ ನಾಯಕರ ಪ್ರಯತ್ನ ಎಂದಿಗೂ ಫಲ ನೀಡುವುದಿಲ್ಲ ಯಾಕೆಂದರೆ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದರು.

      ಸಮ್ಮಿಶ್ರ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎನ್ನವ ಮಾತುಗಳು ಕೇಳಿಬರುತ್ತಿದೆ ಆದರೆ ಇದೆಲ್ಲವೂ ಬಿಜೆಪಿಯ ಭ್ರಮೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಒಡೆಯುವುದಿಲ್ಲ ಭದ್ರವಾಗಿದೆ, ಇನ್ನೂ ಐದು ವರ್ಷಗಳ ಕಾಲ ನಮ್ಮ ಆಡಳಿತ ಹೀಗೆಯೇ ಮುಂದುವರೆಯಿದೆ, ಬಿಜೆಪಿ ಎಷ್ಟೇ ಪ್ರಯತ್ನಪಟ್ಟರೂ ಅವರು ಅಂದುಕೊಂಡದ್ದು ನಡೆಯುವುದಿಲ್ಲ ಎಂದು ಎಂದು ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+