ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ: ಡಿಸಿಎಂ ಪರಮೇಶ್ವರ್ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಏ.23: ಮೈತ್ರಿ ಸರ್ಕಾರ ಬಿದ್ದುಹೋಗುವುದಿಲ್ಲ, ನೀವು ಬೀಳಿಸಲು ಹೋದರೂ ಬೀಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ರಮೇಶ್‌ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಜಾರಕಿಹೊಳಿ ಶೀಘ್ರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಹಲವು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡಲು ಆರಂಭಿಸಿದ್ದಾರೆ. ಮೈತ್ರಿ ಸರ್ಕಾರವನ್ನು ಯಾರಿಂದಲೂ ಬೀಳಿಸಲು ಸಾಧ್ಯವಿಲ್ಲ, ಮೈತ್ರಿ ಸರ್ಕಾರ ಭದ್ರವಾಗಿದೆ ಎಂದು ಪರಮೇಶ್ವರ ಹೇಳಿದರು.

ಸತೀಶ್ ಜಾರಕಿಹೊಳಿಗೆ ತಲೆಕೆಟ್ಟಿದೆ: ರಮೇಶ್ ಜಾರಕಿಹೊಳಿ ಸತೀಶ್ ಜಾರಕಿಹೊಳಿಗೆ ತಲೆಕೆಟ್ಟಿದೆ: ರಮೇಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಜಾರಕಿಹೊಳಿ ಸಹೋದರರ ಕಿತ್ತಾಟ ಕಾರಣವಿರಬಹುದು ಎಂದರು.

DCM parameshwar statement over Ramesh jarkiholi

ಈ ಕುರಿತು ಕೆಎಸ್ ಈಶ್ವರಪ್ಪ ಕೂಡ ಪ್ರತಿಕ್ರಿಯೆ ನೀಡಿದ್ದು, ಒಟ್ಟಿನಲ್ಲಿ ಕೆಲವರಿಗೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆ ಸಮಾಧಾನವಿಲ್ಲ, ಈಗ ಬಹಿರಂಗವಾಗಿ ಹೇಳಲು ಆರಂಭಿಸಿದ್ದಾರೆ. ನಾವು ಯಾರನ್ನೂ ಕರೆಯುತ್ತಿಲ್ಲ, ಎಲ್ಲರೂ ಮೋದಿ, ಬಿಜೆಪಿ ಹೆರು ಹೇಳಿಕೊಂಡು ಬರುತ್ತಿದ್ದಾರೆ ನಾವು ಸ್ವಾಗತಿಸುತ್ತಿದ್ದೇವೆ ಅಷ್ಟೇ ಎಂದರು.

ಲೋಕಸಭಾ ಚುನಾವಣೆಗೂ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪರ ಕೆಲಸ ಮಾಡದೆ, ಬಿಜೆಪಿಗೆ ಲಾಭವಾಗುವಂತೆ ನೋಡಿಕೊಳ್ಳುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿದೆ.

English summary
Deputy Chief minister G Parameshwar said that no one can destroy the Coalition government, Government is safe. Ramesh Jarkiholi will quit Congress because of his personal problem.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X