ಬೆಂಗಳೂರು ಮಾಲಿನ್ಯ ನಿಯಂತ್ರಣಕ್ಕೆ ಹೊಸ ವಾಹನ ನೋಂದಣಿ ಸ್ಥಗಿತ: ಪರಂ
ಬೆಂಗಳೂರು, ನವೆಂಬರ್ 22: ದೆಹಲಿ ಮಾದರಿಯಲ್ಲಿ ಖಾಸಗಿ ವಾಹನಗಳನ್ನು ನಿರ್ಬಂಧಿಸಿದರೆ ಬೆಂಗಳೂರಿನಲ್ಲಿ ವ್ಯಾಪಕ ಪ್ರತಿರೋಧ ಉಂಟಾಗುವ ಸಾಧ್ಯತೆ ಇದೆ.
ಹೀಗಾಗಿ ವಾಯು ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಹೊಸ ವಾಹನಗಳ ನೋಂದಣಿ ಮಾತ್ರ ನಿರ್ಬಂಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಹೇಳಿದ್ದಾರೆ.
ದೆಹಲಿಯಲ್ಲಿ ಈಗಾಗಲೇ ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆ ಮೂಲಕ ದಟ್ಟ ಹೊಗೆಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ಮುಂದಾಗಿದೆ, ಆದರೆ ಕಾರ್ಪೊರೇಟ್ ಕಂಪನಿಗಳಿಗೆ ಹೆಸರಾದ ಬೆಂಗಳೂರಿನಲ್ಲಿ ಆ ರೀತಿ ನಿರ್ಬಂಧ ವಿಧಿಸುವುದು ಕಷ್ಟಸಾಧ್ಯ.

ಈ ಹಿನ್ನೆಲೆಯಲ್ಲಿ ಪರ್ಯಾಯವಾಗಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಹೊಸ ವಾಹನಗಳ ನೋಂದಣಿ ವ್ಯವಸ್ಥೆಯಲ್ಲಿ ನಿಯಂತ್ರಣ ತಂದೆರೆ ಈಗಾಗಲೇ 70 ಲಕ್ಷ ಮೀರಿರುವ ವಾಹನಗಳ ಸಂಖ್ಯೆಯನ್ನು ಮಿತಿಗೊಳಿಸಬಹುದು ಎಂದು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ, ತ್ಯಾಜ್ಯ ವಸ್ತುಗಳ ನಿಯಂತ್ರಣ, ಕೈಗಾರಿಕೆಗಳ ತ್ಯಾಜ್ಯ ಹೀಗೆ ಹಲವಾರು ಕಾರಣಗಳಿಂದಾಗಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಮಿತಿ ಮೀರುತ್ತಿದೆ.ಈಗಲೇ ಕಡಿವಾಣ ಹಾಕದಿದ್ದರೆ ಮುಂದೊಂದು ದಿನ ಬೆಂಗಳೂರು ನಗರದಲ್ಲಿ ಸಮಸ್ಯೆ ದೆಹಲಿಯಂತೆ ಬೃಹದಾಕಾರವಾಗಿ ಬೆಳೆಯಲಿದೆ. ಹೀಗಾಗಿ ಕೆಲವು ಅನಿವಾರ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು.












Click it and Unblock the Notifications