ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಹೊಸ ಕಾನೂನು

By Nayana
|
Google Oneindia Kannada News

ಬೆಂಗಳೂರು, ಜು.11: ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡ ನಿರ್ಮಾಣವನ್ನು ತಡೆಯಲು ಹೊಸ ಕಾನೂನು ರೂಪಿಸುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಿಯಮವನ್ನು ಉಲ್ಲಂಘಿಸಿ ನಿರ್ಮಿಸಿರುವ ಲಕ್ಷಾಂತರ ಕಟ್ಟಡಗಳಿವೆ. ಅವುಗಳ ನಿಖರ ಸಂಖ್ಯೆ ತಿಳಿದಿಲ್ಲ, ಹಾಗಾಗಿ ಖಾಸಗಿ ಏಜೆನ್ಸಿ ಮೂಲಕ ಅಂತಹ ಕಟ್ಟಡಗಳ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮಾದಕ ದ್ರವ್ಯ ಜಾಲ ಅವ್ಯಾಹತ : ಬೆಚ್ಚಿಬೀಳುವ ಅಂಕಿಅಂಶಗಳುಕರ್ನಾಟಕದಲ್ಲಿ ಮಾದಕ ದ್ರವ್ಯ ಜಾಲ ಅವ್ಯಾಹತ : ಬೆಚ್ಚಿಬೀಳುವ ಅಂಕಿಅಂಶಗಳು

ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗೆ ಅಗತ್ಯ ಹೊಸ ಕಾನೂನು ರಚನೆಗೆ ಚಿಂತನೆಗಳು ನಡೆಯುತ್ತಿವೆ. ಈ ಸಂಬಂಧ ಅನುಭವಿ ಶಾಸಕರು, ಕಾನೂನು ಪಂಡಿತರು ಹಾಗೂ ನಗರಾಭಿವೃದ್ಧಿ ತಜ್ಞರ ಜೊತೆಗೆ ಚರ್ಚೆ ನಡೆಸಲಾಗುವುದು.

DCM says new law on legalize illegal buildings in Bengaluru

ನಗರದಲ್ಲಿ ಮುಂದೆ ನಿರ್ಮಾಣವಾಗುವ ಕಟ್ಟಡಗಳಲ್ಲಿ ಕಾನೂನು ಉಲ್ಲಂಘನೆ ತಡೆಯಲು ಅಗತ್ಯ ಕಾನೂನು ರೂಪಿಸಬೇಕಾದ ಅಗತ್ಯವಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಕಾನೂನು ಪಂಡಿತರು, ಅನುಭವಿ ಶಾಸಕರು ಮತ್ತು ನಗರಾಭಿವೃದ್ಧಿ ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮಹದೇವಪುರದಲ್ಲಿ ಬಿಬಿಎಂಪಿ ಪ್ರಾಯೋಗಿಕವಾಗಿ ಖಾಸಗಿ ಸಂಸ್ಥೆಯೊಂದರಿಂದ ನಡೆಸಿದ ಸಮೀಕ್ಷೆಯಲ್ಲಿ 77 ಕಟ್ಟಡಗಳನ್ನು ಅನಧಿಕೃತವಾಗಿ ನಿರ್ಮಿಸಿರುವುದು ಕಂಡು ಬಂದಿದೆ. ಇದರಿಂದ ರೂ.450 ಕೋಟಿ ದಂಡ ಸಹಿತ ತೆರಿಗೆ ಸಂಗ್ರಹಿಸಲಾಗಿದೆ. ಚಿಕ್ಕಪೇಟೆಯಲ್ಲಿ ನಿಯಮ ಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕುರಿತಂತೆ ಬಿಜೆಪಿ ಸದಸ್ಯ ಅ. ದೇವೇಗೌಡ ನಿಯಮ 330ರಡಿ ಪ್ರಸ್ತಾಪಿಸಿರುವ ಸೂಚನೆಗೆ ಅವರು ಉತ್ತರಿಸಿದರು.

English summary
Here is the good news for owners those who have illegal constructions in Bengaluru because state government is thinking about legalize these by adopting new law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X